ಗಿಲ್ಲಿ ನಟನಿಗೆ ಬಿಗ್ ಬಾಸ್ ಕಿರೀಟ; ರಕ್ಷಿತಾ ರನ್ನರ್ ಅಪ್

ಬೆಂಗಳೂರು : ಕನ್ನಡದ ಬಿಗ್‌ಬಾಸ್ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಲ್ಲರ ನಿರೀಕ್ಷೆಯಂತೆ ವಿನ್ನರ್ ಆಗಿದ್ದಾರೆ. ಬರೋಬ್ಬರಿ 37 ಕೋಟಿಗೂ ಅಧಿಕ ವೋಟ್‌ಗಳನ್ನು ಅವರು ಪಡೆದಿದ್ದಾರೆ. ರಕ್ಷಿತಾ ಶೆಟ್ಟಿ ಅವರು ರನ್ನರ್ ಅಪ್ ಆಗಿದ್ದಾರೆ.
ಪ್ರತಿ ಸೀಸನ್‌ನಂತೆಯೇ ಈ ಬಾರಿಯೂ ಬಿಗ್‌ಬಾಸ್ ವಿನ್ನರ್ ಗಿಲ್ಲಿಗೆ ಟ್ರೋಫಿ ಜೊತೆಗೆ 50 ಲಕ್ಷ ರೂ. ಹಾಗೂ ಮಾರುತಿ ಸುಜುಕಿ ಎಸ್‌ಯುವಿ ವಿಕ್ಟೋರಿಯಸ್ ಕಾರನ್ನು ಬಹುಮಾನದ ರೂಪದಲ್ಲಿ ನೀಡಲಾಗಿದೆ. ವಿಶೇಷ ಎಂದರೆ ಕಿಚ್ಚ ಸುದೀಪ್ ಅವರು ವೈಯಕ್ತಿಕವಾಗಿ 10 ಲಕ್ಷ ಕೊಡುತ್ತಿದ್ದೇನೆ ಎಂದು ವೇದಿಕೆ ಮೇಲೆ ಘೋಷಿಸಿದ್ದಾರೆ.
Next Story





