Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಯಕ್ಷಗಾನವನ್ನು ಮುಂದಿನ ತಲೆಮಾರಿಗೆ...

ಯಕ್ಷಗಾನವನ್ನು ಮುಂದಿನ ತಲೆಮಾರಿಗೆ ತಲುಪಿಸಲು ಡಿಜಿಟಲ್ ಆರ್ಕೈವ್ಸ್ ಸ್ಥಾಪನೆ ಮಹತ್ವದ ಹೆಜ್ಜೆ : ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ5 Oct 2026 10:55 PM IST
share
ಯಕ್ಷಗಾನವನ್ನು ಮುಂದಿನ ತಲೆಮಾರಿಗೆ ತಲುಪಿಸಲು ಡಿಜಿಟಲ್ ಆರ್ಕೈವ್ಸ್ ಸ್ಥಾಪನೆ ಮಹತ್ವದ ಹೆಜ್ಜೆ : ಬಿಳಿಮಲೆ

ಬೆಂಗಳೂರು : ಯಕ್ಷಗಾನ ವಿದ್ಯುನ್ಮಾನ ದಾಖಲೆಗಳ ಸಂಗ್ರಹಾಲಯ (ಯಕ್ಷಗಾನ ಡಿಜಿಟಲ್ ಆರ್ಕೈವ್ಸ್) ಸ್ಥಾಪನೆಗೆ ತಾವು ಸಲ್ಲಿಸಿದ್ದ ಪ್ರಸ್ತಾವಕ್ಕೆ ಅನುಗುಣವಾಗಿ ಸರಕಾರವು 9.50ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿರುವುದು ಯಕ್ಷಗಾನ ಕಲೆಯನ್ನು ಮುಂದಿನ ತಲೆಮಾರಿಗೆ ಸಮಗ್ರವಾಗಿ ತಲುಪಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಯೋಜನೆಯ ಅನುಷ್ಠಾನದ ಕುರಿತು ಸೋಮವಾರ ನಡೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಪತ್ರಾಗಾರ ಇಲಾಖೆಯು ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಅದಕ್ಕಾಗಿ ಅಗತ್ಯ ಸಂಖ್ಯೆಯ ಶೈಕ್ಷಣಿಕ ಪರಿಣಿತರು ಹಾಗೂ ಅನುಭವಿ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಘಟಕವೇ ಸ್ಥಾಪನೆಯಾಗಲಿದೆ ಎಂದರು.

ಪತ್ರಾಗಾರ ಇಲಾಖೆಯು ಕೇವಲ ಯಕ್ಷಗಾನ ಕಲೆಯ ದಾಖಲೀಕರಣಕ್ಕೆ ಸೀಮಿತವಾಗದೇ ಅದರ ಮನರಂಜನಾ ಆಯಾಮವನ್ನೂ ಗಮನದಲ್ಲಿಟ್ಟುಕೊಂಡು ಯೋಜನೆಯನ್ನು ರೂಪಿಸಬೇಕೆಂದು ತಾವು ಸಭೆಯಲ್ಲಿ ಸಲಹೆ ನೀಡಿರುವುದಾಗಿ ತಿಳಿಸಿದರು.

ಇದು ಕೇವಲ ದಾಖಲೆಗಳ ಸಂಗ್ರಹಾಲಯವಾಗದೇ ಇಂದಿನ ಕೃತಕಬುದ್ಧಿಮತ್ತೆಯ ಯುಗಕ್ಕೆ ಸಂವಾದಿಯಾಗುವ, ಹೊಸ ತಲೆಮಾರನ್ನು ಆಕರ್ಷಿಸುವ ಹಾಗೂ ಯಕ್ಷಗಾನವನ್ನು ಜಾಗತಿಕ ಪ್ರೇಕ್ಷಕರಿಗೆ ಪರಿಚಯಿಸುವ ಡಿಜಿಟಲ್ ವೇದಿಕೆಯಾಗಿ ರೂಪುಗೊಳ್ಳಬೇಕಾದ ಅವಶ್ಯಕತೆ ಇದ್ದು, ಈ ದೃಷ್ಟಿಯಿಂದ ಸರ್ಕಾರವು ಸಮಗ್ರ ಕ್ರಿಯಾ ಯೋಜನೆಯನ್ನು ರೂಪಿಸಬೇಕೆಂದು ಮನವರಿಕೆ ಮಾಡಲಾಗಿದೆ ಎಂದರು.

ಕಲೆಯ ಉಳಿವು ಕೇವಲ ಪ್ರದರ್ಶನದಿಂದ ಸಾಧ್ಯವಿಲ್ಲ. ಅದರ ವೈಜ್ಞಾನಿಕ ದಾಖಲೀಕರಣ, ವ್ಯವಸ್ಥಿತ ಸಂಗ್ರಹ, ಬೌದ್ಧಿಕ ಹಕ್ಕುಗಳ ಕುರಿತಾದ ಕಾನೂನುಬದ್ಧ ಒಪ್ಪಂದಗಳು ಮತ್ತು ತಂತ್ರಜ್ಞಾನಾಧಾರಿತ ಪ್ರಸರಣದ ಅವಶ್ಯಕತೆಯನ್ನು ಸಭೆಯಲ್ಲಿ ತಿಳಿಸಿದ್ದೇನೆ. ಇಂತಹ ಪ್ರಯತ್ನಗಳ ಮೂಲಕ ಸ್ಥಳೀಯ ಕಲಾ ಪರಂಪರೆಯನ್ನು ಮುಂದಿನ ತಲೆಮಾರಿಗೆ ಉಳಿಸುವುದರ ಜೊತೆಗೆ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿಯೂ ಪರಿಚಯಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರಕಾರದ ಕಾರ್ಯದರ್ಶಿ ಮಂಜುಶ್ರೀ ಎನ್., ನಿರ್ದೇಶಕಿ ಡಾ.ಕೆ.ಎಂ.ವಸುಂಧರಾ, ಧನಂಜಯ ಕುಂಬ್ಲೆ ಮತ್ತಿತರರು ಉಪಸ್ಥಿತರಿದ್ದರು.

Tags

Dr. bilimale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X