ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಹಕ್ಕಿ ಢಿಕ್ಕಿ : ತಪ್ಪಿದ ಅನಾಹುತ

Photo credit : NDTV
ಬೆಂಗಳೂರು: ವಿಶಾಖಪಟ್ಟಣಂನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಆದರೂ ಪೈಲಟ್ಗಳು ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ವಿಮಾನದ ಸಿಬ್ಬಂದಿ ಸೇರಿದಂತೆ ಒಟ್ಟು 148 ಜನರಿದ್ದ ಐಎಕ್ಸ್ 2065 ಸಂಖ್ಯೆಯ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದರೂ ಯಾವುದೇ ಅನಾಹುತ ಸಂಭವಿಸದೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ವಿಮಾನವನ್ನು ಸದ್ಯ ವಿಮಾನ ನಿಲ್ದಾಣದ ವಿ49 ಸ್ಟ್ಯಾಂಡ್ನಲ್ಲಿ ನಿಲ್ಲಿಸಲಾಗಿದೆ.
ಹಕ್ಕಿ ಢಿಕ್ಕಿಯಿಂದ ವಿಮಾನಕ್ಕೆ ಉಂಟಾಗಿರುವ ಹಾನಿಯ ಪ್ರಮಾಣದ ಕುರಿತು ತಾಂತ್ರಿಕ ತಂಡಗಳು ಪರಿಶೀಲನೆ ನಡೆಸುತ್ತಿವೆ.




