Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್...

ʼರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರಕಾರʼ : ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ

ವಾರ್ತಾಭಾರತಿವಾರ್ತಾಭಾರತಿ6 Oct 2026 8:35 PM IST
share
ʼರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರಕಾರʼ : ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ

ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಶೇ.50ಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸಮಯಕ್ಕೆ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕಿದ್ದ ರಾಜ್ಯ ಸರಕಾರ ರಾಜಕೀಯ ಕಿತ್ತಾಟದಲ್ಲೇ ಕಾಲ ಕಳೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಮಂಗಳವಾರ ಇಲ್ಲಿನ ಕುಮಾರಕೃಪಾದಲ್ಲಿ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಕೇಂದ್ರ ಬರ ಅಧ್ಯಯನ ತಂಡವನ್ನು ಭೇಟಿಯಾದ ಆರ್.ಅಶೋಕ್, ರಾಜ್ಯದ ವಾಸ್ತವ ಪರಿಸ್ಥಿತಿಯ ಕುರಿತು ಮನವಿಯನ್ನು ಸಲ್ಲಿಸಿದರು. ಆ ಬಳಿಕ ಮಾತನಾಡಿದ ಅವರು, ಕೇಂದ್ರ ತಂಡಕ್ಕೆ ರೈತರು ಎದುರಿಸುತ್ತಿರುವ ಸಂಕಷ್ಟದ ಕುರಿತು ಸಮಗ್ರವಾಗಿ ವರದಿ ಮಾಡಿ, ಹೆಚ್ಚಿನ ಬರ ಪರಿಹಾರ ಬಿಡುಗಡೆಗೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಸಂಕಷ್ಟದಲ್ಲಿರುವುದು ರಾಜ್ಯ ಸರಕಾರವಲ್ಲ, ನಮ್ಮ ರೈತರು. ಬರ ಬಂದ ನಂತರ ಸುಮಾರು 10 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಹಿತದೃಷ್ಟಿಯಿಂದ ಕೇಂದ್ರದ ತಂಡ ವಾಸ್ತವ ಪರಿಸ್ಥಿತಿಯನ್ನು ಗಮನಿಸಿ ವರದಿ ನೀಡಬೇಕು. ಹೆಚ್ಚಿನ ಪ್ರಮಾಣದಲ್ಲಿ ಬರ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ ಎಂದು ಹೇಳಿದರು.

ಪರಿಹಾರ ನೀಡಿಲ್ಲ: ರಾಜ್ಯ ಸರಕಾರ ಪ್ರತಿ ಕುಟುಂಬಕ್ಕೆ 2,500 ರೂ.ಪರಿಹಾರ ನೀಡುವುದಾಗಿ ಹೇಳಿದೆ. ಆದರೆ, ಅದನ್ನೂ ಇದುವರೆಗೆ ಸರಿಯಾಗಿ ನೀಡಿಲ್ಲ. ಹಿಂದೆ ಪ್ರತಿ ತಾಲೂಕಿಗೆ 1 ಕೋಟಿ ರೂ.ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರೂ ಆ ಹಣವೂ ಬಿಡುಗಡೆಯಾಗಿಲ್ಲ. ಕುಡಿಯುವ ನೀರಿನ ವ್ಯವಸ್ಥೆಗೂ ಅಗತ್ಯ ಹಣ ನೀಡಿಲ್ಲ. ನಾವು ಒಂದು ಎಕರೆಗೆ 25ಸಾವಿರ ರೂ.ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.

ಜನರ ಮೇಲೆ ತೆರಿಗೆಗಳ ಹೊರೆ: ಸರಕಾರದ ಹಣಕಾಸಿನ ನಿರ್ವಹಣೆ ಹದಗೆಟ್ಟಿದೆ. ರೈತರಿಗೆ ಪರಿಹಾರ ನೀಡಲು ಹಣವಿಲ್ಲ. ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ. ಆದರೆ ಜನರ ಮೇಲೆ ಒಂದರ ಹಿಂದೆ ಒಂದರಂತೆ ತೆರಿಗೆ ಮತ್ತು ಬೆಲೆ ಏರಿಕೆಯ ಹೊರೆ ಹಾಕಲಾಗುತ್ತಿದೆ. ಬಸ್ ದರ ಏರಿಕೆ, ಮನೆ ತೆರಿಗೆ, ವಿದ್ಯುತ್ ಶುಲ್ಕ ಸೇರಿದಂತೆ ವಿವಿಧ ರೀತಿಯಲ್ಲಿ ಜನರ ಮೇಲೆ ಹೊರೆ ಹಾಕಲಾಗುತ್ತಿದೆ ಎಂದು ಅವರು ದೂರಿದರು.

Tags

BJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X