Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಬಿಎಂಪಿ ಕಾಮಗಾರಿಗಳ ಅಕ್ರಮದ ತನಿಖೆ...

ಬಿಬಿಎಂಪಿ ಕಾಮಗಾರಿಗಳ ಅಕ್ರಮದ ತನಿಖೆ ಮಾಡುವಂತೆ ಬಿಜೆಪಿ ಶಾಸಕರೇ ಸಲಹೆ ನೀಡಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Aug 2023 7:45 PM IST
share
ಬಿಬಿಎಂಪಿ ಕಾಮಗಾರಿಗಳ ಅಕ್ರಮದ ತನಿಖೆ ಮಾಡುವಂತೆ ಬಿಜೆಪಿ ಶಾಸಕರೇ ಸಲಹೆ ನೀಡಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ, ಆ. 3: ‘ಬಿಬಿಎಂಪಿ ಕಾಮಗಾರಿಗಳ ಅಕ್ರಮದ ತನಿಖೆ ಮಾಡುವಂತೆ ಬಿಜೆಪಿ ಶಾಸಕರೇ ಸಲಹೆ ನೀಡಿದ್ದಾರೆ. ಅವರ ಸಲಹೆ ಗಮನದಲ್ಲಿಟ್ಟುಕೊಂಡು ವಾಸ್ತವಾಂಶ ಅರಿಯಲು ವರದಿ ಕೇಳಿದ್ದೇನೆʼ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗುರುವಾರ ದಿಲ್ಲಿ ಕರ್ನಾಟಕ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ʼʼಅನೇಕರು ವರ್ಷಾನುಗಟ್ಟಲೆಯಿಂದ ಬಿಲ್‍ಗಾಗಿ ಕಾಯುತ್ತಿದ್ದಾರೆ. ಯಾರು ಕೆಲಸ ಕೊಟ್ಟಿದ್ದಾರೆ? ಯಾವ ಕೆಲಸ ಆಗಿದೆ, ಅದರ ಗುಣಮಟ್ಟ ಏನಿದೆ? ಎಂದು ಪರಿಶೀಲನೆ ಆಗಬೇಕು. ಈ ವರದಿ ಬಂದ ನಂತರ ವಿವರವಾಗಿ ಮಾತನಾಡುತ್ತೇನೆʼʼ ಎಂದು ಅವರು ತಿಳಿಸಿದರು.

‘ನೀರು ಹಂಚಿಕೆ ವಿವಾದ ಸಂಬಂಧ ಕಾನೂನು ತಜ್ಞರ ಜತೆ ಸಭೆ ಮಾಡಲಾಗಿದೆ. ಈವರೆಗೂ ನಾವು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮಹದಾಯಿ, ಕಾವೇರಿ, ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿಚಾರವಾಗಿ ಮಾಹಿತಿ ಪಡೆದಿದ್ದೇನೆ. ಉಳಿದ ವಿಚಾರವನ್ನು ಸಿಎಂ ಜತೆ ಚರ್ಚೆ ಮಾಡಿ, ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಉಳಿದ ನಿರ್ದೇಶನ ನೀಡಲಾಗುವುದು. ನಮಗೆ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ. ಆದಷ್ಟು ಬೇಗ ಎಲ್ಲ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆʼ ಎಂದು ನುಡಿದರು.

ʼಸಂಚಾರ ದಟ್ಟಣೆ ನಿವಾರಣೆಗೆ ಜಾಗತಿಕ ಟೆಂಡರ್ʼ

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆ ಚರ್ಚೆ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಈಗಾಗಲೇ ಬಬಿಎಂಪಿ ಹಾಗೂ ಬಿಡಿಎ ಮೂಲಕ ಎಕ್ಸ್ ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಸಲ್ಲಿಕೆಗೆ ಆ.8 ಕೊನೆಯ ದಿನವಾಗಿದೆ’ ಎಂದು ತಿಳಿಸಿದರು.

‘ಬೆಂಗಳೂರಿನಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದ್ದು, ಈ ರಸ್ತೆಗಳ ಮೂಲಕ ಬೆಂಗಳೂರಿಗೆ ಹೆಚ್ಚಿನ ವಾಹನಗಳು ಆಗಮಿಸಿ ಸಂಚಾರ ದಟ್ಟಣೆಗೆ ಕಾರಣವಾಗಿವೆ. ಈ ಸಂಚಾರ ದಟ್ಟಣೆ ನಿವಾರಣೆಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರದ ಮೂಲಕ ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೇಕಾದ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವರ ಜತೆ ಚರ್ಚಿಸಿದ್ದೇನೆ. ನಮ್ಮ ವಿಚಾರಕ್ಕೆ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X