Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ...

ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು: ವಿಜಯೇಂದ್ರ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ20 March 2026 4:02 PM IST
share
ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು: ವಿಜಯೇಂದ್ರ ವಿಶ್ವಾಸ

ಕಲಬುರ್ಗಿ: ಉಪ ಚುನಾವಣೆ ನಡೆಯುವ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗಳಿಗೆ ಸಂಬಂಧಿಸಿ ನಮ್ಮ ಪಕ್ಷದ ವರಿಷ್ಠರು ಅಭ್ಯರ್ಥಿ ಗಳನ್ನು ಘೋಷಿಸಿದ್ದಾರೆ. ಬಾಗಲಕೋಟೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ್, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ದಾಸ್ ಕರಿಯಪ್ಪ ಅವರ ಹೆಸರನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕರ್ತರು ಬಹಳ ಉತ್ಸಾಹದಲ್ಲಿದ್ದಾರೆ. ಮತದಾರರೂ ಈ ಬಡವರ ವಿರೋಧಿ, ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಪಾಠ ಕಲಿಸಲು, ಆ ನಿಟ್ಟಿನಲ್ಲಿ ಬಿಜೆಪಿ ಗೆಲ್ಲಿಸಬೇಕೆಂಬ ಉತ್ಸಾಹದಲ್ಲಿ ಇರುವುದನ್ನು ನಾವು ನೋಡುತ್ತಿದ್ದೇವೆ ಎಂದು ನುಡಿದರು.

ಡಿನ್ನರ್ ರಾಜಕಾರಣ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಆರೆಂಟು ತಿಂಗಳುಗಳಿಂದ ಆಡಳಿತ ಪಕ್ಷದ ಆಂತರಿಕ ಕಚ್ಚಾಟ, ಬೇಗುದಿಯನ್ನು ನಾವು ನೋಡುತ್ತಿದ್ದೇವೆ. ಅದು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಮೊನ್ನೆ ವಿಧಾನ ಸೌಧದಲ್ಲಿ ಆಡಳಿತ ಪಕ್ಷದ ಶಾಸಕರ ಜೊತೆ ಮಾತನಾಡಿದ ವೇಳೆ, ನಿಶ್ಚಿತವಾಗಿ ಒಂದು ಫಲಿತಾಂಶ ಬರಲಿದೆ; ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟೇ ಕೊಡುತ್ತಾರೆ ಎಂಬ ವಿಶ್ವಾಸದ ಮಾತನ್ನು ಅವರು ಆಡಿದ್ದಾರೆ. ಆದರೆ, ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದು ಯಕ್ಷಪ್ರಶ್ನೆ. ಅವರಿಂದಲೇ ಉತ್ತರ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪಂಚಾಯತ್‍ರಾಜ್ ವ್ಯವಸ್ಥೆಗೆ ಕೊಡಲಿ ಪೆಟ್ಟು

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಕುರಿತು ಮೊನ್ನೆಯೂ ಸದನದಲ್ಲಿ ಒತ್ತಾಯ ಮಾಡಿದ್ದೇವೆ. ಪಂಚಾಯಿತಿಯಿಂದ ಸಂಸತ್ತಿನವರೆಗೆ ಕಲ್ಯಾಣ ಕರ್ನಾಟಕ ಯಾರ ಹಿಡಿತದಲ್ಲಿದೆ ಎಂಬುದು ನಿಮಗೆ ಗೊತ್ತಿದೆ. ಆದರೂ ಅಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ; ಮತ್ತೊಂದು ಕಡೆ ಪಂಚಾಯತ್‍ರಾಜ್ ವ್ಯವಸ್ಥೆಗೆ ಕೊಡಲಿ ಪೆಟ್ಟು ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಇದರ ಪರಿಣಾಮ ಏನೆಂದರೆ, ಗ್ರಾಮ ಪಂಚಾಯಿತಿ ಅಥವಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೇ ಕೇಂದ್ರದಿಂದ ಬರಬೇಕಾದ ಕನಿಷ್ಠ 14-15 ಸಾವಿರ ಕೋಟಿ ರೂ. ಬಂದಿಲ್ಲ. ರಾಜ್ಯ ಸರಕಾರದ ಧೋರಣೆ ರಾಜ್ಯದ ಹಿನ್ನಡೆಗೆ ಕಾರಣ ಆಗಿದೆ ಎಂದು ಸ್ಪಷ್ಟವಾಗಿದೆ ಎಂಬುದಾಗಿ ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೇ ಇರುವ ಕಾರಣ ಪ್ರತಿವರ್ಷ 14-15 ಸಾವಿರ ಕೋಟಿ ರೂ. ಲುಕ್ಸಾನು ಆಗುತ್ತಿರುವ ಕುರಿತು ಸದನದಲ್ಲಿ ಪ್ರಸ್ತಾಪ ಮಾಡಿದ್ದೇವೆ ಎಂದು ತಿಳಿಸಿದರು. ಈಗಲಾದರೂ ದೇವರು ಬುದ್ಧಿ ಕೊಟ್ಟು ಚುನಾವಣೆಗೆ ರಾಜ್ಯ ಸರಕಾರ ಮುಂದಾಗಲಿ ಎಂದು ಆಶಿಸಿದರು.

Tags

BJPlargemarginbothby-electionsVijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X