Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಖ್ಯಮಂತ್ರಿ ಡಿಕೆಶಿ, ಸಿದ್ದರಾಮಯ್ಯ,...

ಮುಖ್ಯಮಂತ್ರಿ ಡಿಕೆಶಿ, ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ4 Jun 2026 8:17 PM IST
share
ಮುಖ್ಯಮಂತ್ರಿ ಡಿಕೆಶಿ, ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು. ಅಲ್ಲದೇ, ಪಕ್ಷ ಸಂಘಟನೆ ವಿಚಾರದಲ್ಲಿ ಸಹಕರಿಸುವಂತೆ ಕೋರಿದ್ದಾರೆ.

ಗುರುವಾರ ನಗರದ ಕುಮಾರಕೃಪಾದಲ್ಲಿರುವ ನಿವಾಸದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾತುಕತೆ ನಡೆಸಿದ ಹರಿಪ್ರಸಾದ್, ಬಳಿಕ ‘ಕಾವೇರಿ’ಯಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಎನ್.ರಾಜಣ್ಣ ಕೆಪಿಸಿಸಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.

ಆನಂತರ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವ ಸತೀಶ್ ಜಾರಕಿಹೊಳಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಪಕ್ಷ ಸಂಘಟನೆ ವಿಚಾರದಲ್ಲಿ ಸಹಕರಿಸುವಂತೆ ಹರಿಪ್ರಸಾದ್ ಕೋರಿದರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹರಿಪ್ರಸಾದ್, ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲು ಬಯಸಿದ್ದರು. ಆದುದರಿಂದ, ಅವರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ವಿಚಾರದಲ್ಲಿ ಎಲ್ಲ ರೀತಿಯ ಸಹಕಾರ ನೀಡುವಂತೆ ಕೇಳಲು ಬಂದಿದ್ದೇನೆ. ಅವರು ಸಹಕಾರ ನೀಡುವುದಾಗಿ ಹೇಳಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಎಲ್ಲರೂ ಕೂತು ಪಕ್ಷ ಸಂಘಟನೆಗೆ ಸರಕಾರದ ಸಹಕಾರ ಹಾಗೂ ಸರಕಾರ ನಡೆಸಲು ಪಕ್ಷದ ಸಹಕಾರ ನೀಡುವ ಕುರಿತು ಚರ್ಚಿಸುತ್ತೇವೆ. ಜೋಡು ಎತ್ತಿನ ಗಾಡಿ ಮುಂದೆ ಹೋಗುತ್ತದೆ. ಸತೀಶ್ ಜಾರಕಿಹೊಳಿ ಅವರದ್ದು ಶರತ್ತು ಇತ್ತು, ನನ್ನದು ಯಾವುದೆ ಶರತ್ತು ಇರಲಿಲ್ಲ. ಆದುದರಿಂದ, ಕಾಂಗ್ರೆಸ್ ವರಿಷ್ಠರು ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ್ದಾರೆ ಎಂದು ಹರಿಪ್ರಸಾದ್ ಹೇಳಿದರು.

ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದ ಮೇಲೆ ಸರಕಾರ ನಡೆಯಬೇಕು, ಸಂವಿಧಾನ ರಕ್ಷಣೆ ಮಾಡಬೇಕು, ಮಹಾತ್ಮ ಗಾಂಧಿಯವರ ಸರ್ವ ಧರ್ಮ ಸಮಭಾವದಂತೆ ನಾವು ಹೋಗಬೇಕು. ಬಿಜೆಪಿಯವರು ಎಸ್‍ಐಆರ್, ಸಿಎಎ ಮೂಲಕ ನೈಜ ಮತದಾರರ ಹೆಸರನ್ನು ಪಟ್ಟಿಯಿಂದ ಕೈ ಬಿಡಲು ಹೋಗುತ್ತಿದ್ದಾರೆ. ಆದುದರಿಂದ, ಈ ವಿಚಾರದಲ್ಲಿ ಯಾವುದೆ ಆಚಾತುರ್ಯ ಆಗದಂತೆ ನಾವು ನೋಡಿಕೊಳ್ಳಬೇಕಿದೆ ಎಂದು ಅವರು ತಿಳಿಸಿದರು.

ಅಧಿಕಾರ ಬೇಕಾದವರೂ ಮುಖ್ಯಮಂತ್ರಿ ಬಳಿ ಹೋಗಿ, ಪಕ್ಷ ಸಂಘಟನೆ ಬೇಕಾದವರು ನನ್ನ ಬಳಿ ಬನ್ನಿ ಎಂದು ತಾವು ನೀಡಿರುವ ಹೇಳಿಕೆ ಕುರಿತು ಸ್ಪಷ್ಟಣೆ ನೀಡಿದ ಹರಿಪ್ರಸಾದ್, ಅಧಿಕಾರ ಎಂದರೆ ಕೆಲವರು ನನ್ನ ಬಳಿ ಬಂದು ಅರ್ಜಿ ಕೊಟ್ಟು ನನಗೆ ಆ ಹುದ್ದೆ ಕೊಡಿ, ಈ ಹುದ್ದೆ ಕೊಡಿ ಎಂದು ಕೇಳುತ್ತಾರೆ. ಅಧಿಕಾರ ಕೊಡೋದು ಮುಖ್ಯಮಂತ್ರಿ, ನಾನು ಪಕ್ಷದ ಕೆಲಸ ಮಾಡುವವನು. ಆದುದರಿಂದ, ಅಧಿಕಾರ ಬೇಕಾದವರೂ ಮುಖ್ಯಮಂತ್ರಿ ಬಳಿ ಹೋಗಿ, ಸಂಘಟನೆ ಬೇಕಾದವರು ನನ್ನ ಬಳಿ ಬನ್ನಿ ಎಂಬ ಅರ್ಥದಲ್ಲಿ ಹೇಳಿದ್ದೇನೆ ಎಂದರು.

ಎಲ್ಲ ಶಾಸಕರು, ಸಂಸದರು, ಸಚಿವರು ಪಕ್ಷಕ್ಕೆ ಆದ್ಯತೆ ನೀಡಬೇಕು. ಪಕ್ಷ ಸಂಘಟನೆಯೆ ಬೇರೆ, ಸರಕಾರ ನಡೆಸೋದೆ ಬೇರೆ. 2028ರ ವಿಧಾನಸಭೆ ಹಾಗೂ 2029ರ ಲೋಕಸಭಾ ಚುನಾವಣೆ ಎರಡು ನನಗೆ ಸವಾಲು. ಬಿಜೆಪಿಯವರು ಚುನಾವಣಾ ಆಯೋಗವನ್ನೆ ಖರೀದಿ ಮಾಡುವ ಜನ. ಚುನಾವಣಾ ಆಯೋಗವು ಬಿಜೆಪಿಯ ಒಂದು ಅಂಗ ಆಗಿ ಹೋಗಿದೆ. ಆದುದರಿಂದ, ಎಲ್ಲ ವಾಮ ಮಾರ್ಗಗಳನ್ನು ಅವರು ಅನುಸರಿಸುತ್ತಾರೆ. ಅದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಹರಿಪ್ರಸಾದ್ ಹೇಳಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಮಾಜಿ ಸಚಿವ ಸಂತೋಷ್ ಲಾಡ್, ಶಾಸಕ ಟಿ.ಡಿ.ರಾಜೇಗೌಡ ಸೇರಿದಂತೆ ಇನ್ನಿತರರು ಸದಾಶಿವನಗರದಲ್ಲಿರುವ ಹರಿಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ, ಅಭಿನಂದನೆ ಸಲ್ಲಿಸಿದರು.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X