Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ನಿಮ್ಮದು ಗೋಡ್ಸೆ ಸಂತತಿ ಹೌದೋ ಅಲ್ಲವೋ...

‘ನಿಮ್ಮದು ಗೋಡ್ಸೆ ಸಂತತಿ ಹೌದೋ ಅಲ್ಲವೋ ಮೊದಲು ಸ್ಪಷ್ಟಪಡಿಸಿ’ : ಪ್ರಹ್ಲಾದ್ ಜೋಶಿಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ29 Jun 2026 11:39 PM IST
share
‘ನಿಮ್ಮದು ಗೋಡ್ಸೆ ಸಂತತಿ ಹೌದೋ ಅಲ್ಲವೋ ಮೊದಲು ಸ್ಪಷ್ಟಪಡಿಸಿ’ : ಪ್ರಹ್ಲಾದ್ ಜೋಶಿಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

ಬೆಂಗಳೂರು : ‘ಕೇಂದ್ರ ಸಚಿವ ಸ್ಥಾನ ಉಳಿಸಿಕೊಳ್ಳುವ ಒದ್ದಾಟ, ತೋಳಲಾಟದಲ್ಲಿ ಸಂಘವನ್ನೋ, ಮೋದಿಯನ್ನೋ ಓಲೈಸುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರೇ, ಹೌದು ಕಾಂಗ್ರೆಸ್ ಪಕ್ಷ ಗಾಂಧಿಯ ತತ್ವಾದರ್ಶಗಳನ್ನು ನಂಬಿಯೇ ರಾಜಕೀಯ ಮಾಡಿದ್ದೇವೆ, ಮುಂದೆಯೂ ಮಾಡುತ್ತೇವೆ. ಆದರೆ ನಿಮ್ಮದು ಗೋಡ್ಸೆಯ ಸಂತತಿ ಹೌದೋ ಅಲ್ಲವೋ ಮೊದಲು ಸ್ಪಷ್ಟಪಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸೋಮವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಹರಿಪ್ರಸಾದ್, ‘ಕನಿಷ್ಟ ಪಕ್ಷ ಗೋಡ್ಸೆ ಈ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಎಂದು ಬಹಿರಂಗವಾಗಿ ಹೇಳುವ ಧೈರ್ಯ ಇದೆಯೇ?. ಗೋವು, ಪಾಕಿಸ್ತಾನ, ಧರ್ಮದ ಹೆಸರಿನ ಧ್ರುವೀಕರಣವಿಲ್ಲದೆ ಬಿಜೆಪಿ ಒಂದಾದರೂ ಸಾರ್ವತ್ರಿಕ ಚುನಾವಣೆಯನ್ನಾದರೂ ಗೆದ್ದ ಉದಾಹರಣೆ ತೋರಿಸಿ. ಚುನಾವಣೆ ಬಂದಾಗಲೆಲ್ಲಾ ಗೋವು, ಧರ್ಮ, ಪಾಕಿಸ್ತಾನ ನೆನಪಾಗುತ್ತದೆ. ಆದರೆ, ಗೋಮಾಂಸ ರಫ್ತಿನಲ್ಲಿ ಭಾರತ ವಿಶ್ವದಲ್ಲೇ ನಂಬರ್ ಒಂದು, ಎರಡರಲ್ಲಿ ಸ್ಪರ್ಧೆ ಮಾಡುತ್ತಿರುವುದರ ಬಗ್ಗೆ ಮಾತ್ರ ಮೌನ ಯಾಕೆ?’ ಎಂದು ಪ್ರಶ್ನಿಸಿದ್ದಾರೆ.

‘ನಾನು ಹೇಳಿದ್ದು ‘ದನ ಕೊಂದವರು ಜೈಲಲ್ಲಿದ್ದಾರೆ, ಮನುಷ್ಯರನ್ನು ಕೊಂದವರು ಅಧಿಕಾರದಲ್ಲಿದ್ದಾರೆ’ ಎಂದು. ಈ ಮಾತಿಗೆ ನೀವು ಇಷೊಂದು ತಲ್ಲಣಗೊಳ್ಳುವುದೇಕೆ? 2002ರ ಗೋಧ್ರಾ ಹಿಂಸಾಚಾರದ ಬಳಿಕ ‘ರಾಜಧರ್ಮ ಪಾಲಿಸಿ’ ಎಂದು ಅಂದಿನ ಪ್ರಧಾನಿ ವಾಜಪೇಯಿ ಸಾರ್ವಜನಿಕವಾಗಿ ಹೇಳಿದ್ದು ಯಾರಿಗೆ? ಆ ನೆನಪು ಕಾಡುತ್ತಿದೆಯೇ?’ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

‘ಸೋಹ್ರಾಬುದ್ದೀನ್ ಕೊಲೆ ಪ್ರಕರಣದಲ್ಲಿ ಇಂದಿನ ಗೃಹ ಸಚಿವ ಅಮಿತ್ ಶಾ ನ್ಯಾಯಾಲದಿಂದಲೇ ಗಡಿಪಾರು ಆದ ನೆನಪು ಕಾಡುತ್ತಿದ್ದೆಯೇ? ಅಥವಾ ಬಿಹಾರದ ಬಿಜೆಪಿ ಮುಖ್ಯಮಂತ್ರಿಯ ಮೇಲಿರುವ ಗಂಭೀರ ಕೊಲೆ ಪ್ರಕರಣಗಳು ಕಾಡುತ್ತಿದ್ದೆಯೇ?. ಹಿಂದುಳಿದವರು, ದಲಿತರು, ಆದಿವಾಸಿಗಳು ಹಾಗೂ ಸಾಮಾನ್ಯ ಜನರ ಭಾವನೆಗಳನ್ನು ಕೆರಳಿಸಿ ಸಮಾಜವನ್ನು ವಿಭಜಿಸುವ ರಾಜಕೀಯ ನಡೆಸಿದವರು ಇಂದು ತುಷ್ಟೀಕರಣದ ಪಾಠ ಮಾಡುವುದು ಕೇಳಿದರೆ ನಗು ಬರುತ್ತಿದೆ’ ಎಂದು ಹರಿಪ್ರಸಾದ್ ಟೀಕಿಸಿದ್ದಾರೆ.

‘ಕಾಂಗ್ರೆಸ್ ಪಕ್ಷ ಪ್ರಧಾನಿಗಳ ಹುದ್ದೆಗಳಿಗೆ ಘನತೆ, ಗೌರವ ತಂದು ಕೊಟ್ಟಿದ್ದಾರೆ. ಆದರೆ ಬಿಜೆಪಿ ಪಕ್ಷ ಸಾಂವಿಧಾನಿಕ ಹುದ್ದೆಗಳಿಗೆ ಕಳಂಕ ತಂದಿರುವುದು ದೇಶಕ್ಕೆ ಗೊತ್ತಿರುವ ಸತ್ಯ. ಅಷ್ಟಕ್ಕೂ ನಿಮ್ಮ ದ್ವೇಷದ ರಾಜಕೀಯಕ್ಕೆ ರಾಜ್ಯದ ಜನರು ತಕ್ಕ ಉತ್ತರ ಕೊಟ್ಟಾಗಿದೆ’ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X