ʼಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿʼ; ಸಿಎಂಗೆ ಪತ್ರ ಬರೆದ ಬಿ.ಕೆ.ಹರಿಪ್ರಸಾದ್

ಬೆಂಗಳೂರು : ‘ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುತ್ತಿಲ್ಲ’ ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಪ್ರಣಾಳಿಕೆಯ ಅಂಶಗಳನ್ನೇ ಮುಂದಿಟ್ಟುಕೊಂಡು ಸರಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಈಗ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿ ಎಂದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಪತ್ರ ಬರೆದು ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
Next Story




