Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೋತ ಕ್ಷೇತ್ರದಲ್ಲಿ ಗೆದ್ದು ಇತಿಹಾಸ...

ಸೋತ ಕ್ಷೇತ್ರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಬೇಕು : ಬಿ.ಕೆ.ಹರಿಪ್ರಸಾದ್ ಕರೆ

ವಾರ್ತಾಭಾರತಿವಾರ್ತಾಭಾರತಿ15 Oct 2026 6:49 PM IST
share
ಸೋತ ಕ್ಷೇತ್ರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಬೇಕು : ಬಿ.ಕೆ.ಹರಿಪ್ರಸಾದ್ ಕರೆ

ಬೆಂಗಳೂರು : ಬೆಂಗಳೂರು ಶಿಕ್ಷಕರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಸೋತ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸುವುದರ ಜೊತೆಗೆ ಗೆದ್ದ ಕ್ಷೇತ್ರವನ್ನು ಉಳಿಸಿಕೊಳ್ಳುವ ಸಂಕಲ್ಪದೊಂದಿಗೆ ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣಾ ಕಣಕ್ಕಿಳಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕರೆ ನೀಡಿದರು.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಬೆಂಗಳೂರು ಶಿಕ್ಷಕರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ಚುನಾವಣಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಭ್ಯರ್ಥಿಗಳ ಜವಾಬ್ದಾರಿ ಮಾತ್ರವಲ್ಲ. ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಪಕ್ಷದ ಪ್ರತಿಯೊಂದು ಹಂತದ ಮುಖಂಡರಿಗೂ ಸಮಾನ ಜವಾಬ್ದಾರಿ ಮತ್ತು ಹೊಣೆಗಾರಿಕೆ ಇದೆ ಎಂದು ಸ್ಪಷ್ಟಪಡಿಸಿದರು.

ಚುನಾವಣೆಯನ್ನು ಕೇವಲ ಅಭ್ಯರ್ಥಿಗಳ ನಡುವಿನ ಸ್ಪರ್ಧೆಯಾಗಿ ನೋಡಬಾರದು. ಇದು ಪಕ್ಷದ ಸಂಘಟನಾ ಸಾಮಥ್ರ್ಯ, ಕಾರ್ಯಕರ್ತರ ಬದ್ಧತೆ ಹಾಗೂ ಜನರ ವಿಶ್ವಾಸವನ್ನು ಮತ್ತೊಮ್ಮೆ ಸಾಬೀತುಪಡಿಸುವ ಅವಕಾಶವಾಗಿದೆ. ಪ್ರತಿಯೊಬ್ಬ ಮತದಾರರನ್ನು ವೈಯಕ್ತಿಕವಾಗಿ ಸಂಪರ್ಕಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಕಾಂಗ್ರೆಸ್ ಪಕ್ಷದ ನಿಲುವುಗಳು ಹಾಗೂ ಸರಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬೇಕು. ಮತದಾರರನ್ನು ತಲುಪುವಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಪುಟ್ಟಣ್ಣ ಶಿಕ್ಷಕರ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಕರ ಸಮಸ್ಯೆಗಳು, ಬೇಡಿಕೆಗಳು ಹಾಗೂ ಹಕ್ಕುಗಳ ಪರವಾಗಿ ನಿರಂತರವಾಗಿ ಸ್ಪಂದಿಸಿದ್ದಾರೆ. ಅವರ ಕಾರ್ಯವೈಖರಿಯೆ ನಮ್ಮ ಗೆಲುವಿಗೆ ಪ್ರಮುಖ ಶಕ್ತಿಯಾಗಬೇಕು. ಅದೇ ರೀತಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಹೊಸ ರಾಜಕೀಯ ಇತಿಹಾಸ ಬರೆಯುವ ಗುರಿಯೊಂದಿಗೆ ಸಂಘಟಿತ ಹೋರಾಟ ನಡೆಸಬೇಕು ಎಂದು ಅವರು ಕರೆ ನೀಡಿದರು.

ಈ ಎರಡೂ ಕ್ಷೇತ್ರಗಳ ಚುನಾವಣೆಯನ್ನು ಪಕ್ಷದ ಪ್ರತಿಷ್ಠೆಯ ಪ್ರಶ್ನೆಯಾಗಿ ಸ್ವೀಕರಿಸಬೇಕು. ಎನ್‍ಡಿಎ ಅಭ್ಯರ್ಥಿಗಳನ್ನು ಸೋಲಿಸಲು ಕಾಂಗ್ರೆಸ್‍ನ ಎಲ್ಲ ಹಂತದ ನಾಯಕರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಶ್ರಮಿಸಬೇಕು. ಚುನಾವಣೆಯ ಸಂದರ್ಭದಲ್ಲಿ ಕೇವಲ ಸಭೆಗಳನ್ನು ನಡೆಸುವುದರಿಂದ ಫಲಿತಾಂಶ ಬರುವುದಿಲ್ಲ. ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಿ, ಪ್ರತಿಯೊಬ್ಬ ಮತದಾರರನ್ನು ತಲುಪುವ ವ್ಯವಸ್ಥಿತ ಕಾರ್ಯಯೋಜನೆ ರೂಪಿಸಬೇಕು ಎಂದು ಹರಿಪ್ರಸಾದ್ ನಿರ್ದೇಶಿಸಿದರು.

ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೂ ಎದುರಾಗಲಿವೆ. ಹೀಗಾಗಿ ಇದು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಮಹತ್ವದ ಚುನಾವಣಾ ವರ್ಷವಾಗಿದೆ. ಪ್ರತಿಯೊಂದು ಚುನಾವಣೆ ಪಕ್ಷಕ್ಕೆ ಹೊಸ ಅನುಭವ ಮತ್ತು ಪಾಠ ಕಲಿಸುತ್ತದೆ. ಗೆಲುವು ಸಂಘಟನೆಯನ್ನು ಬಲಪಡಿಸಿದರೆ, ಸೋಲು ನಮ್ಮ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡುತ್ತದೆ. ಹಿಂದಿನ ಚುನಾವಣೆಗಳ ಅನುಭವದಿಂದ ಪಾಠ ಕಲಿತು ಮುಂದಿನ ಎಲ್ಲ ಚುನಾವಣೆಗಳಿಗೂ ಈಗಿನಿಂದಲೇ ಸಿದ್ಧತೆ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಗೋಪಿನಾಥನ್ ಪಳನಿಯಪ್ಪನ್, ಯಾವುದೇ ಚುನಾವಣೆಯನ್ನು ಸಣ್ಣದು ಅಥವಾ ದೊಡ್ಡದು ಎಂದು ಪರಿಗಣಿಸಬಾರದು. ಪ್ರತಿಯೊಂದು ಚುನಾವಣೆಯೂ ಪಕ್ಷದ ಸಂಘಟನಾ ಶಕ್ತಿಗೆ ಪರೀಕ್ಷೆಯಾಗಿರುತ್ತದೆ. ವಿಶೇಷವಾಗಿ ಬ್ಲಾಕ್ ಮಟ್ಟದ ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಚುನಾವಣೆಯಲ್ಲಿ ಪರಿಣಾಮಕಾರಿ ಫಲಿತಾಂಶ ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಿಗೆ ಈ ಚುನಾವಣೆ ವಿಶೇಷ ಜವಾಬ್ದಾರಿಯಾಗಿದೆ. ಪ್ರತಿಯೊಂದು ಬ್ಲಾಕ್‍ನಲ್ಲಿಯೂ ಕಾರ್ಯಕರ್ತರನ್ನು ಸಕ್ರಿಯಗೊಳಿಸಬೇಕು. ಮತದಾರರೊಂದಿಗೆ ನಿರಂತರ ಸಂಪರ್ಕ ಸಾಧಿಸಬೇಕು. ಚುನಾವಣಾ ಪ್ರಚಾರವನ್ನು ತಳಮಟ್ಟಕ್ಕೆ ಕೊಂಡೊಯ್ಯಬೇಕು. ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿಯೊಬ್ಬರೂ ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಅವರು ತಿಳಿಸಿದರು.

ಚುನಾವಣಾ ಸಿದ್ಧತೆ ಕೇವಲ ಪ್ರಚಾರಕ್ಕೆ ಸೀಮಿತವಾಗಬಾರದು. ಮತದಾರರ ಸಂಪರ್ಕ, ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ ಹಾಗೂ ಸ್ಥಳೀಯ ನಾಯಕತ್ವದ ಸಮನ್ವಯಕ್ಕೆ ಆದ್ಯತೆ ನೀಡಬೇಕು. ಪಕ್ಷದ ಎಲ್ಲ ಘಟಕಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯಸಭೆ ಸದಸ್ಯ ಮನ್ಸೂರ್ ಅಲಿಖಾನ್, ಶಾಸಕರಾದ ಕೆ.ಷಡಕ್ಷರಿ, ಕೊತ್ತೂರು ಜಿ.ಮಂಜುನಾಥ್, ಎಚ್.ಡಿ.ರಂಗನಾಥ್, ಸಮರ್ಥ್ ಶಾಮನೂರು, ವಿಧಾನ ಪರಿಷತ್ ಸದಸ್ಯರಾದ ಸೀತಾರಾಮ್, ರಾಮೋಜಿ ಗೌಡ, ಶ್ರೀನಿವಾಸ್, ಪಕ್ಷದ ಹಿರಿಯ ನಾಯಕರು, ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X