ಬಿ.ಎಂ.ಶ್ರೀ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ: ಫೆ.19ಕ್ಕೆ ಪ್ರದಾನ
ಬೆಂಗಳೂರು, ಫೆ.17: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 2024ನೆ ಸಾಲಿನ ‘ಪ್ರೊ.ಎಲ್.ಎಸ್. ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿ’ಗೆ ವಿಮರ್ಶಕ ಮೀರಾಸಾಬಿಹಳ್ಳಿ ಶಿವಣ್ಣ ಮತ್ತು ‘ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಪತ್ರಕರ್ತ ಈಶ್ವರ ದೈತೋಟ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಗಳು ತಲಾ 10,000ರೂ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿವೆ. ಇದೇ ಫೆ.19ರಂದು ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಾಹಿತಿ ಕೆ. ಮರುಳಸಿದ್ದಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಶಾಂತರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story