Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 2 ವರ್ಷಗಳಲ್ಲಿ 165 ಎಕರೆ ಬಿಎಂಟಿಸಿ...

2 ವರ್ಷಗಳಲ್ಲಿ 165 ಎಕರೆ ಬಿಎಂಟಿಸಿ ಆಸ್ತಿಯ ಒತ್ತುವರಿ ತೆರವು

ವಾರ್ತಾಭಾರತಿವಾರ್ತಾಭಾರತಿ8 Aug 2026 10:18 PM IST
share
2 ವರ್ಷಗಳಲ್ಲಿ 165 ಎಕರೆ ಬಿಎಂಟಿಸಿ ಆಸ್ತಿಯ ಒತ್ತುವರಿ ತೆರವು

ಬೆಂಗಳೂರು : ಬಿಎಂಟಿಸಿ ಸ್ವತ್ತಾಗಿರುವ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಹಿಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು 165 ಎಕರೆ ಭೂಮಿಯನ್ನು ಒತ್ತುವರಿದಾರರಿಂದ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ ಎಂದು ಸಂಸ್ಥೆಯು ಮಾಹಿತಿ ನೀಡಿದೆ.

ಶನಿವಾರ ಈ ಸಂಬಂಧ ಮಾಧ್ಯಮ ಪ್ರಕಟನೆ ಹೊರಡಿಸಿರುವ ಬಿಎಂಟಿಸಿ, ತನ್ನ ವ್ಯಾಪ್ತಿಯಲ್ಲಿ ಹೊಂದಿರುವ ಅಮೂಲ್ಯ ಸ್ಥಿರಾಸ್ತಿಗಳನ್ನು ಸಂರಕ್ಷಿಸುವುದು ಹಾಗೂ ಸಂಸ್ಥೆಯ ಭೂಮಿಯ ಮೇಲೆ ಯಾವುದೇ ರೀತಿಯ ಅಕ್ರಮ ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಸಂಸ್ಥೆಯ ಪ್ರಮುಖ ಆದ್ಯತೆಗಳಲ್ಲೊಂದಾಗಿದೆ. ಈ ಹಿನ್ನೆಲೆಯಲ್ಲಿ, ಸಂಸ್ಥೆಯ ಭೂಮಿಗಳಲ್ಲಿ ಕಂಡುಬಂದಿದ್ದ ಒತ್ತುವರಿಗಳನ್ನು ಗುರುತಿಸಿ, ದಾಖಲೆಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ಹಂತ ಹಂತವಾಗಿ ತೆರವು ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದೆ.

ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಅಕ್ರಮವಾಗಿ ಸಂಸ್ಥೆಯ ಭೂಮಿಯನ್ನು ಆಕ್ರಮಿಸಿಕೊಂಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 10 ಪ್ರಕರಣಗಳನ್ನು ದಾಖಲಿಸಲಾಗಿದ್ದು, 40 ಜನ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಹೇಳಿದೆ.

ಹಿಂದಿನ ಎರಡು ವರ್ಷಗಳಲ್ಲಿ ಸಂಸ್ಥೆಯ ವತಿಯಿಂದ ಕೈಗೊಳ್ಳಲಾದ ಕಾರ್ಯಾಚರಣೆಗಳಲ್ಲಿ ಹಂಚರಹಳ್ಳಿ (ಮಂಡೂರು), ಹುಚ್ಚನಪಾಳ್ಯ (ದಾಸನಪುರ), ಹಿರಂಡಹಳ್ಳಿ (ಹೊಸಕೋಟೆ), ಕೆಂಗೇರಿ, ತೋಟಗೆರೆ (ಹೆಸರಘಟ್ಟ), ಭೈರತಿ ಹಾಗೂ ಕಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿದ್ದ ಬಿಎಂಟಿಸಿ ಭೂಮಿಯನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ ಎಂದು ಸಂಸ್ಥೆ ಮಾಹಿತಿ ಹಂಚಿಕೊಂಡಿದೆ.

Tags

BMTC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X