ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ : ಪೊಲೀಸರಿಂದ ಪರಿಶೀಲನೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಶುಕ್ರವಾರ ಬೆಳಿಗ್ಗೆ ನಗರದ 40 ಖಾಸಗಿ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ.
ನಗರದ ಆರ್.ಆರ್.ನಗರ, ಕೆಂಗೇರಿ ಸೇರಿದಂತೆ ಹಲವು ಪ್ರದೇಶಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. roadkill333@atomicmail.io ಎಂಬ ಇ-ಮೇಲ್ನಿಂದ ಈ ಸಂದೇಶ ಬಂದಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Next Story





