ಲಂಚ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಅನುಮತಿ

ಬಿಜೆಪಿ ಶಾಸಕ ಮುನಿರತ್ನ
ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಸ ವಿಲೇವಾರಿ ಗುತ್ತಿಗೆ ನೀಡಲು 36 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 20 ಲಕ್ಷ ರೂ. ಸ್ವೀಕರಿಸಿದ್ದ ಆರೋಪದಡಿ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಗರದ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಪ್ರಕರಣದ ತನಿಖೆಗೆ ಸಿಐಡಿ ಪೊಲಿಸ್ ಮಹಾ ನಿರ್ದೇಶಕರು ಸಕ್ಷಮ ಪ್ರಾಧಿಕಾರಕ್ಕೆ ಅನುಮತಿ ಕೋರಿದ್ದರು. ಇದೀಗ ಸಕ್ಷಮ ಪ್ರಾಧಿಕಾರ ತನಿಖೆಗೆ ಅನುಮತಿ ನೀಡಿದೆ.
Next Story





