ಸರಕಾರಕ್ಕೆ ಜನ ಹಿತ ಮುಖ್ಯವಲ್ಲ, ಕುರ್ಚಿ ಮುಖ್ಯ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ಕಾಂಗ್ರೆಸ್ ಸರಕಾರಕ್ಕೆ ಜನ ಹಿತ ಮುಖ್ಯವಲ್ಲ, ತಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ಸರಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಆರಂಭಿಸಿದ ಅಹೋರಾತ್ರಿ ಹೋರಾಟದ ಚಾಲನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಂಗ್ರೆಸ್ ಸರಕಾರ ದಿನವೂ ಒಂದೊಂದರ ಬೆಲೆಯನ್ನು ಏರಿಸುತ್ತಲೇ ಇದೆ. ಇದರಿಂದ ಬಡ ಜನರು ಬದುಕುವುದು ಕಷ್ಟವಾಗುತ್ತಿದೆ. ಈ ಸರಕಾರಕ್ಕೆ ಜನರ ಹಿತಕ್ಕಿಂತ ಅಧಿಕಾರವೇ ಮುಖ್ಯವಾಗಿದೆ ಎಂದು ಯಡಿಯೂರಪ್ಪ ಸರಕಾರದ ವಿರುದ್ಧ ಕಿಡಿಕಾರಿದರು.
ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದೆ. ನಾನು ಕೂಡ ಹೋರಾಟದಲ್ಲಿ ಭಾಗಿಯಾಗಿದ್ದೇನೆ. ತಕ್ಷಣವೇ ಸರಕಾರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು. ಅಲ್ಲಿಯವೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಯಡಿಯೂರಪ್ಪ ತಿಳಿಸಿದರು.
Next Story





