Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಪ್ಪಣ್ಣ ಹೆಗ್ಡೆ ಸಹಿತ ಅಗಲಿದ ಗಣ್ಯರಿಗೆ...

ಅಪ್ಪಣ್ಣ ಹೆಗ್ಡೆ ಸಹಿತ ಅಗಲಿದ ಗಣ್ಯರಿಗೆ ಸದನದಲ್ಲಿ ಶ್ರದ್ಧಾಂಜಲಿ

ವಾರ್ತಾಭಾರತಿವಾರ್ತಾಭಾರತಿ9 March 2026 8:43 PM IST
share
ಅಪ್ಪಣ್ಣ ಹೆಗ್ಡೆ ಸಹಿತ ಅಗಲಿದ ಗಣ್ಯರಿಗೆ ಸದನದಲ್ಲಿ ಶ್ರದ್ಧಾಂಜಲಿ

ಬೆಂಗಳೂರು : ಇತ್ತೀಚೆಗೆ ಅಗಲಿದ ಮಾಜಿ ಶಾಸಕರಾದ ಬನ್ನೂರು ಅಪ್ಪಣ್ಣ ಹೆಗ್ಡೆ, ವೈ.ಎಂ. ವೀರಣ್ಣ ಹಾಗೂ ಹಿರಿಯ ಪತ್ರಕರ್ತ ಪಿ.ರಾಮಯ್ಯರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸೋಮವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಯು.ಟಿ.ಖಾದರ್, ಸಂತಾಪ ಸೂಚನೆ ನಿರ್ಣಯ ಮಂಡಿಸಿ, ಮಾಜಿ ಶಾಸಕರಾದ ಬನ್ನೂರು ಅಪ್ಪಣ್ಣ ಹೆಗ್ಡೆ ಹಾಗೂ ವೈ.ಎಂ.ವೀರಣ್ಣ ಅವರ ರಾಜಕೀಯ ಮತ್ತು ಸಾಮಾಜಿಕ ಜನೋಪಕಾರಿ ಸೇವೆಗಳನ್ನು ಸ್ಮರಿಸಿದರು.

ಸ್ಪೀಕರ್ ಮಂಡಿಸಿದ ಸಂತಾಪ ಸೂಚನೆ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ಅವರು ಮೂಲತಃ ಕೃಷಿಕರಾಗಿದ್ದರು. ಸ್ವಾತಂತ್ರ್ಯ ಚಳವಳಿಯಲ್ಲೂ ಅವರು ಭಾಗಿಯಾಗಿದ್ದರು. ಅಧಿಕಾರ ವಿಕೇಂದ್ರೀಕರಣದಲ್ಲಿ ಕೆಲಸ ಮಾಡಿದ್ದ ಅಪ್ಪಣ್ಣ ಹೆಗ್ಡೆ ಒಬ್ಬ ಸಭ್ಯ ವ್ಯಕ್ತಿಯಾಗಿದ್ದರು ಎಂದು ಬಣ್ಣಿಸಿದರು.

ಅದೇ ರೀತಿ ದಾವಣಗೆರೆಯ ವೈ.ಎಂ.ವೀರಣ್ಣ ಸಹ ಕೃಷಿಕರಾಗಿದ್ದರೂ ಶಿಕ್ಷಣದ ಬಗ್ಗೆ ಅಪಾರವಾದ ಆಸಕ್ತಿ ಹೊಂದಿದ್ದರು. ನಗರಸಭೆ ಸದಸ್ಯರಾಗಿ ರಾಜಕೀಯ ಜೀವನ ಪ್ರಾರಂಭಿಸಿ, ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಸ್ಮರಿಸಿದರು.

ಇದಕ್ಕೆ ಧ್ವನಿಗೂಡಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಬನ್ನೂರು ಅಪ್ಪಣ್ಣ ಹೆಗ್ಡೆ, ವೈ.ಎಂ.ವೀರಣ್ಣ ಅನೇಕ ಸಮಾಜಮುಖಿ ಸೇವೆಗಳನ್ನು ಸಲ್ಲಿಸಿದ್ದಾರೆ. ಅವರ ವ್ಯಕ್ತಿತ್ವ ನಡೆ, ಎಲ್ಲರಿಗೂ ಮಾದರಿ. ಅವರ ಸಮಾಜಮುಖಿ ಕೆಲಸಗಳು ಶಾಶ್ವತವಾಗಿ ಉಳಿಯಲಿವೆ ಎಂದು ಸಂತಾಪ ಸಲ್ಲಿಸಿದರು. ಆ ಬಳಿಕ ಮೃತರ ಗೌರವಾರ್ಥ ಸದಸನದ ಎಲ್ಲ ಸದಸ್ಯರು ಎದ್ದುನಿಂತು ಒಂದು ನಿಮಿಷ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X