ಬಿಎಂಟಿಸಿ ಬಸ್ ಢಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ

ಸಾಂದರ್ಭಿಕ ಚಿತ್ರ
ಬೆಂಗಳೂರು : ಬಿಎಂಟಿಸಿ ಬಸ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಲ್ಲಿನ ಬಾಣಸವಾಡಿ ಮೇಲ್ಸೇತುವೆ ಬಳಿ ವರದಿಯಾಗಿದೆ.
ಮುಹಮ್ಮದ್ ಝಮೀರ್(40) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಝಮೀರ್ ಅವರ ಪತ್ನಿ ಆಯಿಷಾ, ಮಕ್ಕಳಾದ ಅಲೀಜಾ, ಆಫಿಯಾಗೆ ಗಂಭೀರ ಗಾಯಗಳಾಗಿದ್ದು, ನಗರದ ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಆಯಿಷಾ ಅವರ ಕಾಲು ಮತ್ತು ಬಲಗೈಗೆ ಗಾಯವಾಗಿದೆ. ಒಂದೂವರೆ ವರ್ಷದ ಮಗು ಆಫಿಯಾ ಮಿದುಳಿಗೆ ಸಂಬಂಧಿತ ಮೂಳೆ ಮುರಿದಿದೆ, ನಾಲ್ಕು ವರ್ಷದ ಬಾಲಕಿ ಅಲೀಜಾ ಕೈ ಮತ್ತು ಕಾಲಿಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರ ಮೂಲಗಳು ತಿಳಿಸಿವೆ.
ಹೆಣ್ಣೂರು ಡಿಪೋ 10ಕ್ಕೆ ಸೇರಿದ ಬಿಎಂಟಿಸಿ ಬಸ್ ಢಿಕ್ಕಿಯಾಗಿದ್ದು, ಬಾಣಸವಾಡಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಬಳಿಕ ವರದಿ ಪಡೆದಿರುವುದಾಗಿ ತಿಳಿಸಿದ್ದಾರೆ.
Next Story





