Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಾವಣಗೆರೆಯಲ್ಲಿ ಕಾಂಗ್ರೆಸ್ ಸೋಲಿಸಲು...

ದಾವಣಗೆರೆಯಲ್ಲಿ ಕಾಂಗ್ರೆಸ್ ಸೋಲಿಸಲು ಪಕ್ಷದ ಮುಖಂಡರಿಂದಲೇ ಹುನ್ನಾರ : ಸಲೀಂ ಅಹ್ಮದ್ ಆರೋಪ

ವಾರ್ತಾಭಾರತಿವಾರ್ತಾಭಾರತಿ10 April 2026 12:50 PM IST
share
ದಾವಣಗೆರೆಯಲ್ಲಿ ಕಾಂಗ್ರೆಸ್ ಸೋಲಿಸಲು ಪಕ್ಷದ ಮುಖಂಡರಿಂದಲೇ ಹುನ್ನಾರ : ಸಲೀಂ ಅಹ್ಮದ್ ಆರೋಪ
"ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು"

ಬೆಂಗಳೂರು : ‘ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಒಂದಷ್ಟು ಹಿರಿಯ ಮುಖಂಡರು ಪಕ್ಷವನ್ನು ಸೋಲಿಸಲು ದೊಡ್ಡ ಹುನ್ನಾರ ಮಾಡಿದ್ದಾರೆ’ ಎಂದು ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್ ದೂರಿದ್ದಾರೆ.

ಶುಕ್ರವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮಗೆ ಕೊಟ್ಟ ಜವಾಬ್ದಾರಿ ಕೆಲಸವನ್ನು ಮಾಡಿದ್ದೇವೆ. ಆದರೆ, ಪಕ್ಷದ ಒಂದಷ್ಟು ಹಿರಿಯ ಮುಖಂಡರು ಪಕ್ಷವನ್ನು ಸೋಲಿಸಲು ದೊಡ್ಡ ಷಡ್ಯಂತ್ರ ಮಾಡಿದ್ದಾರೆ. ಇದರ ಬಗ್ಗೆ ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಯವರಿಗೆ ಮಾಹಿತಿಯಿದೆ ಎಂದು ತಿಳಿಸಿದರು.

ಎಲ್ಲ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಒಪ್ಪಿಗೆ ಮೇರೆಗೆ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲಾಯಿತು. ನಮ್ಮನ್ನೆಲ್ಲಾ ಕೂರಿಸಿಕೊಂಡಿ ಒಪ್ಪಿಗೆ ಪಡೆಯಲಾಯಿತು. ಆದರೂ ಒಂದಷ್ಟು ತಪ್ಪು ಗ್ರಹಿಕೆ ಉಂಟಾಯಿತು. ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಯವರು ಎಲ್ಲ ಅಲ್ಪಸಂಖ್ಯಾತ ನಾಯಕರಿಗೆ ಜವಾಬ್ದಾರಿ ನೀಡಿದ್ದರು. ಜೊತೆಗೆ ನನಗೆ ಹಾಗೂ ಶಾಸಕ ರಿಝ್ವಾನ್ ಆರ್ಶದ್ ಅವರಿಗೆ ಇತರೇ ಜವಾಬ್ದಾರಿ ನೀಡಿದ್ದರು. ಅದನ್ನು ಸುಸೂತ್ರವಾಗಿ ನಾವು ಮಾಡಿದ್ದೇವೆ ಎಂದರು.

ಈ ಚುನಾವಣೆಯಲ್ಲಿ ವಿಶೇಷವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಕೈಗೊಂಡಿದ್ದ ಅಭಿವೃದ್ಧಿ ಕೆಲಸಗಳು ಪಕ್ಷದ ಕೈ ಹಿಡಿಯಲಿದೆ. ವಿರೋಧ ಪಕ್ಷಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿದರು. ಆದರೂ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ ಎಂದು ಅವರು ನುಡಿದರು.


Tags

by-electionCongressSalim Ahmed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X