Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿದ್ದರಾಮಯ್ಯರ ಸಮಾಜವಾದಿ ಮುಖವಾಡ ಕಳಚಿ...

ಸಿದ್ದರಾಮಯ್ಯರ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ3 April 2025 7:58 PM IST
share
ಸಿದ್ದರಾಮಯ್ಯರ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ : ಬಿ.ವೈ.ವಿಜಯೇಂದ್ರ

ಬೆಂಗಳೂರು : ದುರಂತ ಎಂದರೆ ಸಿದ್ದರಾಮಯ್ಯ ಅವರ ಸಮಾಜವಾದಿ ಮುಖವಾಡ 20 ತಿಂಗಳಲ್ಲಿ ಕಳಚಿ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಗುರುವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿರುವ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಅವರು, ಜನರ ವಿಶ್ವಾಸ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಬಡವರ ಕಣ್ಣೀರು ಒರೆಸುವ ಕೆಲಸ ಮಾಡಬೇಕಾಗಿತ್ತು. ದುರಂತ ಎಂದರೆ ಸಿದ್ದರಾಮಯ್ಯ ಅವರ ಸಮಾಜವಾದಿ ಮುಖವಾಡ 20 ತಿಂಗಳಲ್ಲಿ ಕಳಚಿ ಬಿದ್ದಿದೆ ಎಂದರು.

ನಾನು ಈ ವೇದಿಕೆಯ ಮೂಲಕ ಪ್ರಶ್ನಿಸುತ್ತೇನೆ. ಸಿದ್ದರಾಮಯ್ಯನವರೇ, ಅಧಿಕಾರಕ್ಕೆ ಬರುವ ಮುನ್ನಾ ಇದ್ದ ಕಾಳಜಿ ಈಗ ಏಕಿಲ್ಲ?, ವಿಪಕ್ಷದಲ್ಲಿದ್ದಾಗ ಇದ್ದ ಕಾಳಜಿ ಈಗ್ಯಾಕೆ ಇಲ್ಲ?, ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಅಹಿಂದ ಅಹಿಂದ ಎಂದು ಹೇಳುತ್ತಿದ್ದೀರಿ. ಅಧಿಕಾರಕ್ಕೆ ಬಂದ ಮೇಲೆ ಯಾವ ಅಹಿಂದವೂ ಇಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ರಾಜ್ಯದ ಭಂಡ ಸರಕಾರ, ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿ ಇಲ್ಲ. ನಮ್ಮ ಹೋರಾಟ ಎರಡು ದಿನಗಳಿಂದ ಆರಂಭವಾಗಿದೆ. ಇದು ಪ್ರಾರಂಭ ಅಷ್ಟೇ. ನಾಡಿನ ಜನರ ಪರವಾಗಿ ವಿಪಕ್ಷವಾದ ನಾವು ಹೋರಾಟ ಮಾಡುವುದು ಅನಿವಾರ್ಯ ಎಂದು ವಿಜಯೇಂದ್ರ ತಿಳಿಸಿದರು.

ಮೊದಲೇ ಜನರು ಪರದಾಡುತ್ತಿದ್ದಾರೆ. ಇದರ ನಡುವೆ ಡೀಸೆಲ್‍ಗೆ 2 ರೂ. ಹೆಚ್ಚಿಸಿದ ದುಷ್ಟರಿವರು. ಇದು ಅಧಿಕಾರದ ಮದ. ಅಹೋರಾತ್ರಿ ಧರಣಿಯು ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಉತ್ಸಾಹ ತಂದು ಕೊಟ್ಟಿದೆ. ರೈತ ನಾಯಕ, ಹೋರಾಟಗಾರ ಯಡಿಯೂರಪ್ಪ ಅವರು ಸಹ ಹೋರಾಟದ ನೇತೃತ್ವ ವಹಿಸಿ ಅವರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂಧನಕ್ಕೆ ಒಳಪಟ್ಟಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ನಮ್ಮ ಹೋರಾಟಕ್ಕೆ ಕಿಚ್ಚು ಹಚ್ಚಿದಂತಾಗಿದೆ ಎಂದು ವಿಜಯೇಂದ್ರ ತಿಳಿಸಿದರು.

ನೇಕಾರರು, ಸವಿತಾ, ಈಡಿಗ, ಮೀನುಗಾರರ ಸಮಾಜ ಹೀಗೆ ಎಲ್ಲವನ್ನೂ ಸಿದ್ದರಾಮಯ್ಯ ಅವರು ತುಳಿದಿದ್ದಾರೆ. ಹಿಂದುಳಿದ ಸಮಾಜವನ್ನು ನೋಡಲಿಲ್ಲ. ಕೇವಲ ಮುಸ್ಲಿಮರ ಹಿಂದೆ ಹೋಗಿದ್ದಾರೆ. ಎಲ್ಲವನ್ನೂ ಜನರಿಗೆ ತಿಳಿಸಬೇಕಾಗಿದೆ. ಎ.7ರಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದ್ದೇವೆ. ಕಾಂಗ್ರೆಸ್ ಸರಕಾರದ ಹಗಲು ದರೋಡೆಯನ್ನು ಜನರಿಗೆ ಮನದಟ್ಟು ಮಾಡುತ್ತೇವೆ. ಈ ಸರಕಾರದ ನೈಜ ಮುಖವಾಡವನ್ನು ತಿಳಿಸುವ ಕೆಲಸವನ್ನು ಮುಂದಿನ ಒಂದು ತಿಂಗಳು ಮಾಡಲಿದ್ದೇವೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಐತಿಹಾಸಿಕ ಕ್ಷಣ..!

ವಕ್ಫ್ ಕಾಯಿದೆಗೆ ತಿದ್ದುಪಡಿಯನ್ನು ವಿರೋಧಿಸುವುದು ಒಂದು ದುರಂತ. ಕರ್ನಾಟಕದಲ್ಲಿ ಸಾವಿರಾರು ಕೋಟಿ ಮೌಲ್ಯದ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರು, ರಾಜಕಾರಣಿಗಳು ಲೂಟಿ ಮಾಡಿದ್ದಾರೆ. ಇಂಥ ಕಾಂಗ್ರೆಸ್ ಮುಖಂಡರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಕ್ಫ್ ಮಂಡಳಿ ಹೆಸರಿನಲ್ಲಿ ಜನರಿಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಲು ಸಂಸತ್ತಿನ ಉಪಸಮಿತಿ ರಚಿಸಿದ್ದರು. ಇದೀಗ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಮಂಜೂರಾತಿ ಕೊಟ್ಟಿದ್ದು, ಇದೊಂದು ಐತಿಹಾಸಿಕ ಕ್ಷಣ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X