Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ :...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ18 May 2026 6:44 PM IST
share
ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ : ಬಿ.ವೈ.ವಿಜಯೇಂದ್ರ

ಬೆಂಗಳೂರು : ‘ರಾಜ್ಯ ಸರಕಾರ ಮೂರು ವರ್ಷದ ಆಡಳಿತ ಅವಧಿಯಲ್ಲಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಿದ್ದೇ ಸಾಧನೆಯೇ?. ಉತ್ಪನ್ನ ಕ್ಷೇತ್ರ ಉತ್ತೇಜಿಸದೇ ಅಭಿವೃದ್ಧಿ ಶೂನ್ಯಗೊಳಿಸಿದ್ದು ನಿಮ್ಮ ಸಾಧನೆಯೇ?. ರೈತ ಕಲ್ಯಾಣಕ್ಕಾಗಿ ಯಾವುದೇ ಯೋಜನೆ ರೂಪಿಸದೆ ರೈತ ಹೋರಾಟಗಳನ್ನು ಹತ್ತಿಕ್ಕಿದ್ದು ನಿಮ್ಮ ಸಾಧನೆಯೇ?. ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಸಂಘಟಿಸುತ್ತಿದೆ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಸೋಮವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಮಹಿಳಾ ಕಲ್ಯಾಣಕ್ಕಾಗಿ ಯಾವುದೇ ಕಾರ್ಯಕ್ರಮವನ್ನೂ ಕೊಡಲಿಲ್ಲ, ಗೃಹಲಕ್ಷ್ಮೀ ಯೋಜನೆಯನ್ನೂ ಸಕಾಲದಲ್ಲಿ ತಲುಪಿಸುತ್ತಿಲ್ಲ, ಮಹಿಳೆಯರ ಮೇಲಿನ ದೌರ್ಜನ್ಯ, ನಿರಂತರ ಅತ್ಯಾಚಾರಗಳು ನಿಮ್ಮ ಸರಕಾರದಲ್ಲಿ ಸ್ತ್ರೀ ಕುಲವನ್ನು ಕಾಡಿದ ದೌರ್ಭಾಗ್ಯಕ್ಕಾಗಿ ನಿಮ್ಮ ಸಮಾವೇಶವೇ?. ಸೂರುರಹಿತ ಜನರಿಗಾಗಿ ನಿವೇಶನ ಹಂಚಲಿಲ್ಲ, ಮನೆಗಳನ್ನು ವಿತರಿಸಲಿಲ್ಲ, ಮೈಸೂರು ಮುಡಾದಲ್ಲಿ ಸಾವಿರಾರು ನಿವೇಶನಗಳ ಲೂಟಿಕೋರತನದ ಸಾರಥ್ಯ ವಹಿಸಿದ್ದು ಸಾಧನೆಯೇ?’ ಎಂದು ಟೀಕಿಸಿದ್ದಾರೆ.

ಶಾಂತಿ-ಸುವ್ಯವಸ್ಥೆಗೆ ಹೆಸರಾದ ರಾಜ್ಯದಲ್ಲಿ ಕೋಮುವಾದಿ ಅಲ್ಪಸಂಖ್ಯಾತರನ್ನು ಓಲೈಸುತ್ತಿರುವುದು, ಕೋಮು ದೌಜ್ರ್ಯನ್ಯಕ್ಕೆ ದಾರಿ ಮಾಡಿಕೊಡುತ್ತಿರುವುದು ನಿಮ್ಮ ಘನಂದಾರಿ ಸಾಧನೆಯೇ?. ಗಾಂಧಿ, ಬಸವಾದಿಗಳ ಚಿಂತನೆ-ಆಶಯಗಳನ್ನು ಮೂಲೆಗುಂಪು ಮಾಡಿ 500 ಮೀಟರ್‍ಗೊಂದು ಮದ್ಯದಂಗಡಿ ತೆರೆದು ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿಸಿದ್ದು ನಿಮ್ಮ ಸಾಧನೆಯೇ?’ ಎಂದು ಅವರು ಲೇವಡಿ ಮಾಡಿದ್ದಾರೆ.

ಶಿಕ್ಷಣ ಸೌಭಾಗ್ಯ ಕಲ್ಪಿಸಿ ಭವಿಷ್ಯತ್ತಿನ ಮಕ್ಕಳನ್ನು ದೇಶದ ಅತ್ಯುತ್ತಮ ಮಾನವ ಸಂಪನ್ಮೂಲವನ್ನಾಗಿಸಲು ಸಂಕಲ್ಪ ತೊಡಬೇಕಾದ ನಿಮ್ಮ ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಯನ್ನೂ ತರಲಿಲ್ಲ, ಶಾಲೆಗಳನ್ನಂತೂ ತೆರೆಯಲೇ ಇಲ್ಲ, ದುಸ್ಥಿತಿಯಲ್ಲಿರುವ ಶಾಲೆಗಳಿಗೆ ಕಾಯಕಲ್ಪ ನೀಡುವ ಕಾರ್ಯಕ್ಕೆ ಮುಂದಾಗಲಿಲ್ಲ, ಜ್ಞಾನಗಂಗೆ ಹರಿಯಬೇಕಾದ ಶಿಕ್ಷಣ ಕ್ಷೇತ್ರದಲ್ಲಿ ಹಿಜಾಬ್ ತೊಡಲು ಅವಕಾಶ ಮಾಡಿಕೊಟ್ಟು ಮತೀಯ ವಿಷ ಬೆರೆಸಲು ಹೊರಟಿರುವುದು ನಿಮ್ಮ ಸರಕಾರದ ಶಿಕ್ಷಣ ಸಾಧನೆಯೇ? ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸರಕಾರದ ಪಾವತಿಯನ್ನು ನಂಬಿ ಗುತ್ತಿಗೆ ಪೂರೈಸಿದ ಗುತ್ತಿಗೆದಾರರ ಕತ್ತು ಹಿಸುಕಲು ಕಮೀಷನ್ ಮುಷ್ಠಿಯನ್ನು ಬಳಸಿ, ಗುತ್ತಿಗೆದಾರರ ಬದುಕನ್ನು ಹಿಂಡಿ ಅವರನ್ನು ಹೀನಾಯ ಸ್ಥಿತಿಗೆ ತಳ್ಳಿ, ಪರ್ಸಂಟೇಜ್‌ ಸರಕಾರ ಎಂದು ಕರೆಸಿಕೊಂಡಿದ್ದು ನಿಮ್ಮ ಸರಕಾರದ ಕಮಿಷನ್ ಸಾಧನೆಯೇ?. ಡಾ.ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ, ಪ್ರಜಾಪ್ರಭುತ್ವ ವ್ಯವಸ್ತೆಯ ನಂಬಿಕೆಗೆ ದ್ರೋಹ ಬಗೆದು, ತಳಮಟ್ಟದಿಂದ ಉನ್ನತ ಮಟ್ಟದವರೆಗೆ ತಾಂಡವವಾಡುತ್ತಿರುವ ಭ್ರಷ್ಟಾ ಚಾರ, ಲೂಟಿಕೋರತನ, ಕಮೀಷನ್ ದಂಧೆ, ವಿಪರೀತ ಬೆಲೆ ಏರಿಕೆಯ ಬಿಸಿ ಸರಕಾರದ ಕುಖ್ಯಾತಿ ಸಾಧನೆಯ ಕಿರೀಟಕ್ಕೆ ತಗುಲಿಸೊಂಡು ಸಂಘಟಿಸುತ್ತಿರುವ ನಿಮ್ಮ ಸಮಾವೇಶ ಸಾಧನೆಯದ್ದಲ್ಲ, ಭಂಡತನದ ಪರಾಕಾಷ್ಠೆ ಯ ಪ್ರದರ್ಶನ ಎಂದು ಅವರು ವ್ಯಂಗ್ಯವಾಡಿದ್ದಾರೆ.

ರಾಜ್ಯದ @INCKarnataka ಸರ್ಕಾರ ಯಾವ ಪುರುಷಾರ್ಥಕ್ಕೆ ಮೂರು ವರ್ಷದ ಸಾಧನಾ ಸಮಾವೇಶ ಸಂಘಟಿಸುತ್ತಿದೆ?

ನಿಮ್ಮ ಮೂರು ವರ್ಷದ ಆಡಳಿತ ಅವಧಿಯಲ್ಲಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಿದ್ದೇ ನಿಮ್ಮ ಸಾಧನೆಯೇ?

ಉತ್ಪನ್ನ ಕ್ಷೇತ್ರವನ್ನು ಉತ್ತೇಜಿಸದೇ ಅಭಿವೃದ್ಧಿಯನ್ನು ಶೂನ್ಯಗೊಳಿಸಿದ್ದು ನಿಮ್ಮ ಸಾಧನೆಯೇ?

ರೈತ…

— Vijayendra Yediyurappa (@BYVijayendra) May 18, 2026

‘ನೀವು ಘೋಷಿಸಿರುವ ಸಾಧನೆಗಳೆಲ್ಲವೂ ಕಾಗದದ ಮೇಲಷ್ಟೇ ಜಾಹಿರಾತಿನ ಫಲಕಗಳ ಮೇಲಷ್ಟೇ ಕಾಣುತ್ತಿದೆ. ನಿಮ್ಮಿಂದ ನಿರೀಕ್ಷೆಯನ್ನಿಟ್ಟು ಮತ ನೀಡಿದ ಕರ್ನಾಟಕದ ಜನತೆ ಈಗಾಗಲೇ ಹತಾಶೆಗೊಂಡು ನಿಮ್ಮ ಆಡಳಿತದ ವಿರುದ್ಧ ಆಕ್ರೋಶ ಭರಿತರಾಗಿದ್ದಾರೆ. ನಿಮ್ಮ ಸರಕಾರದ ಭರವಸೆಗಳೆಲ್ಲ ‘ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ’ ಎಂಬ ಅಸಲೀ ಸತ್ಯ ಅರಿತುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ನಿಮ್ಮ ವೈಫಲ್ಯದ ಆಡಳಿತಕ್ಕೆ ಕಪಾಳಮೋಕ್ಷ ಮಾಡಲು ಕಾದು ಕುಳಿತಿದ್ದಾರೆ’

-ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ

Tags

B.Y. Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X