Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಡಾದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಗಳ...

ಮುಡಾದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಗಳ ಬಗ್ಗೆ ತಾಂತ್ರಿಕ ಸಮಿತಿ ವರದಿ ಸಲ್ಲಿಸಿತ್ತು : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ3 Sept 2024 6:27 PM IST
share
ಮುಡಾದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಗಳ ಬಗ್ಗೆ ತಾಂತ್ರಿಕ ಸಮಿತಿ ವರದಿ ಸಲ್ಲಿಸಿತ್ತು : ಬಿ.ವೈ.ವಿಜಯೇಂದ್ರ

ಬೆಂಗಳೂರು: ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ಬಿಜೆಪಿ ಸರಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ 2023ರ ನ.3ರಂದೇ ಕಾಂಗ್ರೆಸ್ ಸರಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂ ಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಕಾಂಗ್ರೆಸ್ ಸರಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತರ ಗತ್ಯಂತರವಿಲ್ಲದೆ ಕೈಗೆತ್ತಿಕೊಂಡು ಇದೀಗ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾರ್‌ ರನ್ನು ಅಮಾನತ್ತು ಗೊಳಿಸಲಾಗಿದೆ ಎಂದು ಹೇಳಿದ್ದಾರೆ.

“ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ" ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರಕಾರ ಈ ಕೂಡಲೇ 50:50 ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಅಮಾನತ್ತಿಗೆ ನೀಡಿರುವ ಕಾರಣಗಳಲ್ಲಿ ಶೇಕಡ 50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ, ಇದು ಏನು ಹೇಳುತ್ತದೆ ಎಂದರೆ ಶೇಕಡ 50:50ರ ಅನುಪಾತದಲ್ಲಿ ಪೂರ್ವನ್ವಯವಾಗಿ ಸಿದ್ದರಾಮಯ್ಯನವರ ಪತ್ನಿಗೆ ಮಂಜೂರಾಗಿರುವ 14 ನಿವೇಶನಗಳು ಸಂಪೂರ್ಣ ಅಕ್ರಮ ಹಾಗೂ ನಿಯಮಬಾಹಿರ ಎಂಬುದು ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಚಿತ್ರವೆಂದರೆ ಮುಖ್ಯಮಂತ್ರಿಯ ಕುಟುಂಬಕ್ಕೆ 14 ನಿವೇಶನಗಳನ್ನು ಬಳುವಳಿ ನೀಡಿದ ಹಿಂದಿನ ಆಯುಕ್ತರೊಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಋಣ ಸಂದಾಯಮಾಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಆದೇಶವನ್ನು ಕಾಯುವ ಅಗತ್ಯವಾದರೂ ಏನಿದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಸರಕಾರವೇ ನಿಮ್ಮ ಧರ್ಮಪತ್ನಿ ಅವರು ಪಡೆದಿರುವ ನಿವೇಶನಗಳು ಅಕ್ರಮ ಹಾಗೂ ನಿಯಮ ಬಾಹಿರ ಎಂದು ಹೇಳಿರುವಾಗ ಈಗಲಾದರೂ ತಮ್ಮ ಭಂಡತನವನ್ನು ಪಕ್ಕಕ್ಕೆ ಸರಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಘನತೆಗೆ ಬಂದಿರುವ ಚ್ಯುತಿಯನ್ನು ಹೋಗಲಾಡಿಸಿ ಗೌರವ ಉಳಿಸಿಕೊಳ್ಳಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X