ಬೆಂಗಳೂರಿನಲ್ಲಿ 5 ಪಾಲಿಕೆ ರಚನೆಗೆ ಸಂಪುಟ ಒಪ್ಪಿಗೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ಪಾಲಿಕೆ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆ ಮಾಡಲಾಗಿದೆ. ಈ ಮೂಲಕ ಐದು ಪಾಲಿಕೆಗಳನ್ನು ಮಾಡಲು ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಆಡಳಿತ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ. ಪಾಲಿಕೆಗಳು ರಚನೆ ಕುರಿತು ಅಡಿಪಾಯ ತಯಾರು ಮಾಡಬೇಕಿದೆ ಎಂದೂ ಅವರು ಉಲ್ಲೇಖಿಸಿದರು.
Next Story





