Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಂವಿಧಾನದ ವಾಕ್ ಸ್ವಾತಂತ್ರ್ಯ ದುರುಪಯೋಗ:...

ಸಂವಿಧಾನದ ವಾಕ್ ಸ್ವಾತಂತ್ರ್ಯ ದುರುಪಯೋಗ: ಬಸವ ಮಂಟಪ' ಕೃತಿಯ ಲೇಖಕ ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ20 Nov 2026 10:51 AM IST
share
ಸಂವಿಧಾನದ ವಾಕ್ ಸ್ವಾತಂತ್ರ್ಯ ದುರುಪಯೋಗ: ಬಸವ ಮಂಟಪ ಕೃತಿಯ ಲೇಖಕ ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಂವಿಧಾನದ ವಾಕ್ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡು, ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿ ಧರ್ಮದಲ್ಲಿ ಒಡಕು ಉಂಟುಮಾಡಿ, ಪಂಗಡಗಳ ನಡುವೆ ದ್ವೇಷ ಭಾವನೆ ಬಿತ್ತನೆ ಮಾಡುತ್ತಿರುವ ಹಾಗೂ ಸುಳ್ಳು ಹೇಳಿಕೆಗಳನ್ನು ನೀಡಿ ಸಮಾಜದ ಶಾಂತಿ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿರುವ ಆರೋಪದಲ್ಲಿ 'ಬಸವ ಮಂಟಪ' ಕೃತಿಯ ಲೇಖಕ ರವಿ ಹಂಜ್ ಹಾಗೂ ಇದಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ 'ವಿಶ್ವವಾಣಿ' ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಸವ ಸಮಿತಿಯ ಅಧ್ಯಕ್ಷ ಅರವಿಂದ್ ಜತ್ತಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

12ನೇ ಶತಮಾನದಲ್ಲಿ ಸಮಾನತೆ, ಕಾಯಕ, ದಾಸೋಹ, ಸತ್ಯ ಮತ್ತು ಮಾನವೀಯ ಮೌಲ್ಯಗಳನ್ನು ಸಾರಿದ ಮಹಾನ್ ದಾರ್ಶನಿಕ ಹಾಗೂ ರಾಜ್ಯ ಸರಕಾರದಿಂದ 'ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಿಸಲ್ಪಟ್ಟ ವಿಶ್ವಗುರು ಬಸವಣ್ಣನವರು ಹಾಗೂ ಶರಣ ಪರಂಪರೆಯ ಲಕ್ಷಾಂತರ ಜನರ ಧಾರ್ಮಿಕ ಮತ್ತು ಸಾಂಸ್ಕೃತಿಕ ನಂಬಿಕೆಯಾಗಿದೆ. ಹೀಗಿರುವಾಗ್ಗೆ ವಿಶ್ವವಾಣಿ ಪತ್ರಿಕೆಯಲ್ಲಿ ಕಳೆದ ಸುಮಾರು 1-2 ವರ್ಷಗಳಲ್ಲಿ ರವಿ ಹಂಜ್ ಬರೆದ ಅಂಕಣಗಳನ್ನು ಕ್ರೋಡೀಕರಿಸಿ ಬೆಂಗಳೂರು ನಗರದ ರಾಜರಾಜೇಶ್ವರಿ ನಗರದಲ್ಲಿರುವ ವಿಶ್ವವಾಣಿ ಪತ್ರಿಕೆಯ ಪ್ರಕಾಶನದಲ್ಲಿ 'ಬಸವ ಮಂಟಪ' ಎನ್ನುವ ಪುಸ್ತಕವನ್ನು ಹೊರ ತಂದಿದ್ದು, ನ.15ರಂದು ಬೆಂಗಳೂರು ನಗರದ ಕೆಂಪೆಗೌಡ ರಸ್ತೆಯಲ್ಲಿರುವ ಎಫ್.ಕೆಸಿಸಿಐ ಆಡಿಟೋರಿಯಂನಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.

ಇದಕ್ಕೂ ಮೊದಲು ನ.13 ರಂದು ವಿಶ್ವವಾಣಿ ಚಾನೆಲ್ ಕಚೇರಿಯಲ್ಲಿ ರವಿ ಹಂಜ್ ರವರು 'ಬಸವ ಮಂಟಪ' ಪುಸ್ತಕದ ಕುರಿತು ನೀಡುವ ಸಂದರ್ಶನ ವೇಳೆಯಲ್ಲಿ, ವಿಶ್ವಗುರು ಬಸವಣ್ಣರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುತ್ತಾರೆ. ಹಾಗೂ 'ಬಸವ ಮಂಟಪ' ಕೃತಿಯ ಚರ್ಚೆಯ ಹೆಸರಿನಲ್ಲಿ "ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ" ವಚನವನ್ನು ಉಲ್ಲೇಖಿಸಿ ಬಸವಣ್ಣನವರನ್ನು ಕಳ್ಳ ಮತ್ತು ಕೊಲೆಗಾರನಂತೆ ಬಿಂಬಿಸಿ ಅವಹೇಳನ ಮಾಡಿದ್ದಾರೆ. ಲಿಂಗಾಯತ ಪದವನ್ನು ತಿರುಚಿ 'ಲಿಂಗಾಹತ' ಎಂದು ಹೇಳಿರುತ್ತಾರೆ. ರವಿ ಹಂಜ್ ಲಿಂಗಾಯತ ಸಮುದಾಯ ಮತ್ತು ಸಮುದಾಯದ ಪೂಜ್ಯರ ಕುರಿತು ಹಲವಾರು ಆಕ್ಷೇಪಾರ್ಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿತರು ಮುಂದಿನ ದಿನಗಳಲ್ಲಿ ವಿವಾದಾತ್ಮಕ ಸಂಗತಿಗಳನ್ನು ಹೊಂದಿರುವ ಬಸವ ಮಂಟಪ ಕೃತಿಯನ್ನು ಬಿಡುಗಡೆ ಮಾಡಿ, ಅವರ ವಿಶ್ವವಾಣಿ ಹಾಗೂ ಇತರ ಯೂಟ್ಯೂಬ್ ಮತ್ತು ಫೇಸ್ ಬುಕ್ ಚಾನೆಲ್ ಗಳಲ್ಲಿ ವಿಶ್ವಗುರು ಬಸವಣ್ಣನವರು, ಶರಣ ಪರಂಪರೆ ಅಥವಾ ಲಿಂಗಾಯತ ಧರ್ಮದ ಭಾವನೆಗಳಿಗೆ ಧಕ್ಕೆ ತರುವ ಹಾಗೂ ಸಮಾಜದ ಶಾಂತಿ ಕದಡುವ ಸಾಧ್ಯತೆ ಇದೆ. ಆದ್ದರಿಂದ 'ಬಸವ ಮಂಟಪ' ಪುಸ್ತಕವನ್ನು ಬಿಡುಗಡೆ ಮಾಡದಂತೆ ಹಾಗೂ ಕಾನೂನುಬದ್ಧವಾಗಿ ತಡೆಯಬೇಕು. ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಹಾಗೂ ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆ(ಬಿಎನ್ ಎಸ್)- 2023, 192,196(1), 353(2), 299 ಅನ್ವಯ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags

FIRRavi HunjVishweshwar BhatBasava Mantapa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X