Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸೆಸೆಲ್ಸಿ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ...

ಎಸೆಸೆಲ್ಸಿ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ವೆಬ್ ಕ್ಯಾಮರಾ: ರುಪ್ಸಾ ಕರ್ನಾಟಕ ಖಂಡನೆ

ವಾರ್ತಾಭಾರತಿವಾರ್ತಾಭಾರತಿ24 March 2024 7:56 PM IST
share
ಎಸೆಸೆಲ್ಸಿ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ವೆಬ್ ಕ್ಯಾಮರಾ: ರುಪ್ಸಾ ಕರ್ನಾಟಕ ಖಂಡನೆ

ಬೆಂಗಳೂರು: ಯಾವುದೇ ದೊಡ್ಡ ದೊಡ್ಡ ಪರೀಕ್ಷೆಗಳಿಗೆ ಇಲ್ಲದ ಸಿಸಿ ಕ್ಯಾಮರಾ ಮತ್ತು ವೆಬ್ ಕ್ಯಾಮರಾಗಳು ಎಸೆಸೆಲ್ಸಿ ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಮಾಡಿರುವುದು ಏಕೆ ಎಂದು ರುಪ್ಸ ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರಶ್ನಿಸಿದ್ದಾರೆ.

ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಅವರು, ಶಿಕ್ಷಣ ಇಲಾಖೆ ಹಾಗೂ ಪ್ರೌಢಶಾಲಾ ಪರೀಕ್ಷಾ ಮಂಡಳಿ ಇತ್ತೀಚಿನ ದಿನಗಳಲ್ಲಿ ವಿಚಿತ್ರ ಹಾಗೂ ಆಶ್ಚರ್ಯಕರವಾಗಿ ನಡೆದುಕೊಳ್ಳುತ್ತಿದೆ. ಎಸೆಸೆಲ್ಸಿ ಪರೀಕ್ಷಾ ಮೇಲ್ವಚಾರಕರಾಗಿ ಪ್ರಾಥಮಿಕ ಶಿಕ್ಷಕರನ್ನು ನೇಮಿಸಿ ಅವರಿಗೆ ತರಬೇತಿ ಸಹ ನೀಡಲಾಯಿತು. ನಂತರ ಪ್ರೌಢಶಾಲಾ ಶಿಕ್ಷಕರನ್ನು ನೇಮಿಸಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಅವಮಾನಿಸಲಾಯಿತು ಎಂದಿದ್ದಾರೆ.

ಈಗ ತರಾತುರಿಯಲ್ಲಿ ಹೊಸದಾಗಿ ಸರಕಾರಿ, ಅನುದಾನಿತಾ ಶಾಲಾ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡು ಅವರಿಗೆ ತರಬೇತಿ ನೀಡಿದ್ದೀರಿ, ಆದರೆ ಅನುದಾನ ರಹಿತ ಶಾಲಾ ಶಿಕ್ಷಕನ್ನು ದೂರ ಇಟ್ಟಿದ್ದೀರಿ. ತರಬೇತಿ ಹೆಸರಿನಲ್ಲಿ ಸಾರ್ವಜನಿಕರ ಹಣ ಪೋಲು ಮಾಡಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮೇಲ್ವಚಾರಕರನ್ನು ನಂಬದೆ ಪ್ರತೀ ಕೊಠಡಿಗೂ ಸಿಸಿ ಕ್ಯಾಮರಾ ಅಳವಡಿಸಿ ಅವುಗಳನ್ನು ವೆಬ್ ಲಿಂಕ್‍ಗೆ ಜೋಡಿಸಿ ಸ್ಥಳೀಯ ಪೊಲೀಸ್ ಸ್ಟೇಷನ್, ಜಿಲ್ಲಾ ಪಂಚಾಯಿತಿ, ಹಾಗೂ ಸಾರ್ವಜನಿಕರಿಗೂ ನೇರ ಸಂಪರ್ಕಕ್ಕೆ ಸಿಗುವಂತೆ ಮಾಡುವ ನಿರ್ಧಾರ ಮಾಡಲಾಗಿದೆ. ಮೂರು ದಿನದಲ್ಲಿ ಪರೀಕ್ಷೆ ನಡೆಯುವ ಎಲ್ಲಾ ಕಛೇರಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಲೇಬೇಕು ಎಂಬ ಹುಚ್ಚು ಹಾಗೂ ಮಕ್ಕಳಿಗೆ ಭಯ ಹುಟ್ಟಿಸುವಂತಹ ದುಬಾರಿ ನಿರ್ಣಯ ಮಾಡಲಾಗಿದೆ ಎಂದು ಅವರು ಟೀಕಿಸಿದ್ದಾರೆ.

ಪರೀಕ್ಷಾ ಕೊಠಡಿಗಳಲ್ಲಿ ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ಸೃಷ್ಟಿ ಮಾಡುವ ಬದಲು ಮಕ್ಕಳನ್ನು ಕಳ್ಳರಂತೆ, ದೊಡ್ಡ ಅಪರಾಧ ತಡೆಯುವವರಂತೆ ಈ ರೀತಿ ಅನುಮಾನಿಸುವುದು ಖಂಡನೀಯ. ಐಎಎಸ್, ನೀಟ್, ಜೆಇಇ, ಪಿಯುಸಿ ಇತ್ಯಾದಿ ಯಾವುದೇ ಪರೀಕ್ಷೆಗೆ ಇಲ್ಲದ ಕಣ್ಗಾವಲು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಏಕೆ ಈ ರೀತಿಯ ಶಿಕ್ಷೆ. ಇಂತಹ ಕೆಟ್ಟ, ಅಸಾಂಪ್ರದಾಯಿಕ ಪದ್ಧತಿಗಳನ್ನು ರೂಪಿಸುವ ವಿಕೃತ ಅಧಿಕಾರಿ ಅಥವಾ ಇನ್ನಾರೇ ಆದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X