Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ನಗರದ ವಿವಿಧೆಡೆ ‘ಕರ್ನಾಟಕ...

ಬೆಂಗಳೂರು ನಗರದ ವಿವಿಧೆಡೆ ‘ಕರ್ನಾಟಕ ರಾಜ್ಯೋತ್ಸವದ ಸಂಭ್ರಮ’

ವಾರ್ತಾಭಾರತಿವಾರ್ತಾಭಾರತಿ1 Nov 2026 7:55 PM IST
share
ಬೆಂಗಳೂರು ನಗರದ ವಿವಿಧೆಡೆ ‘ಕರ್ನಾಟಕ ರಾಜ್ಯೋತ್ಸವದ ಸಂಭ್ರಮ’

ಬೆಂಗಳೂರು : ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ‘ಕನ್ನಡ ಹಬ್ಬ’, ಕನ್ನಡ ಜನಶಕ್ತಿ ಕೇಂದ್ರದ ವತಿಯಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಾಗೂ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಕರವೇ ಪ್ರಧಾನ ಕಚೇರಿಯ ಹತ್ತಿರ ಸೇರಿ ನಗರದ ವಿವಿಧೆಡೆ 71ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ, ಸಂಭ್ರಮಿಸಲಾಯಿತು.

ಕರವೇಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಟಿ.ಎ.ನಾರಾಯಣಗೌಡ, ‘ಐಟಿ-ಬಿಟಿ ಕಂಪೆನಿಗಳು ಸೇರಿದಂತೆ ಬೆಂಗಳೂರಿನ ಉದ್ಯಮಗಳಿಗೆ ತೆರಳಿ ಕನ್ನಡಿಗ ಉದ್ಯೋಗಿಗಳ ಲೆಕ್ಕ ಕೇಳುವ ‘ಆಗ್ರಹ ಅಭಿಯಾನ’ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಎಷ್ಟು ಪ್ರಮಾಣದಲ್ಲಿ ಉದ್ಯೋಗ ಲಭಿಸುತ್ತಿದೆ ಎಂದು ತಿಳಿದುಕೊಳ್ಳುವ ಹಕ್ಕು ನಮಗಿದೆ’ ಎಂದು ಹೇಳಿದರು.

ಅಭಿಯಾನದ ನಂತರ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರ ಔದ್ಯೋಗಿಕ ಸ್ಥಾನಮಾನ, ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳ ಕುರಿತು ರಾಜ್ಯ ಸರಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಮಗ್ರ ಸತ್ಯ ಶೋಧನ ವರದಿ ಸಲ್ಲಿಸಲಿದೆ. ಐಟಿ ಕಂಪೆನಿಗಳಿಗೆ ನಾವು ಜಗಳ ಮಾಡಲು ಹೋಗುತ್ತಿಲ್ಲ. ನಾವು ಸೌಜನ್ಯದಿಂದಲೇ ವರ್ತಿಸುತ್ತೇವೆ. ಗೊಂದಲ ಸೃಷ್ಟಿಸುವ, ಸಂಘರ್ಷ ನಡೆಸುವ ಉದ್ದೇಶ ನಮ್ಮದಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎಂಬ ಕೂಗು ಎದ್ದಾಗಲೆಲ್ಲ ಕೆಲವು ಉದ್ಯಮಿಗಳು ರಾಜ್ಯ ಬಿಟ್ಟು ಹೋಗುತ್ತೇವೆ ಎಂದು ಹೆದರಿಸುತ್ತಾರೆ. ಸರಕಾರಕ್ಕೆ ಇಂಥವರ ಮಾತೇ ಮುಖ್ಯವಾಗುತ್ತದೆ, ಕನ್ನಡಿಗರ ಬದುಕು ಮುಖ್ಯವಾಗುವುದಿಲ್ಲ. ಈ ಧೋರಣೆ ಅಪಾಯಕಾರಿ. ಈಗಲಾದರೂ ಸರಕಾರ ಕನ್ನಡಿಗರ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್, ಕರವೇ ಸಂಘಟನಾ ಕಾರ್ಯದರ್ಶಿ ದಿನೇಶ್ ಕುಮಾರ್ ಎಸ್.ಸಿ., ಉಪಾಧ್ಯಕ್ಷ ದಾ.ಪಿ.ಅಂಜನಪ್ಪ ಮತ್ತಿತರರು ಹಾಜರಿದ್ದರು.

ಗಡಿನಾಡ ಕನ್ನಡ ಶಾಲೆಗಳನ್ನು ಸದೃಢಗೊಳಿಸಿ : ಸಿ.ಕೆ.ರಾಮೇಗೌಡ

ಬೆಂಗಳೂರು : ಸರಕಾರ ಗಡಿನಾಡಿನ ಕನ್ನಡ ಶಾಲೆಗಳನ್ನು ಸದೃಢಗೊಳಿಸಬೇಕು ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ.

ರವಿವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕನ್ನಡ ಜನಶಕ್ತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಏಕೀಕರಣಗೊಂಡು 71 ವರ್ಷಗಳು ಕಳೆದಿವೆ. ಆದರೆ ಕನ್ನಡಿಗರ ಆಶಯಗಳು ಇಂದೂ ಕೂಡ ನೆರವೇರಿಲ್ಲ. ಗಡಿನಾಡಿನ ಕನ್ನಡ ಶಾಲೆಗಳನ್ನು ಸದೃಢಗೊಳಿಸಬೇಕು. ಹಾಗೂ ಗಡಿ ಪ್ರದೇಶಗಳನ್ನು ಕರ್ನಾಟಕಕ್ಕೆ ಮರಳಿ ಪಡೆಯಬೇಕು ಎಂದು ತಿಳಿಸಿದರು.

ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, 71ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರಕಾರ ಕನ್ನಡಿಗರಿಗೆ ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ನೀಡುವ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು.

ಸದನದಲ್ಲಿ ಪರಿಷ್ಕೃತ ಸರೋಜಿನಿ ಮಹಿಷಿ ವರದಿ ಮಂಡಿಸಿ: ರಾ.ನಂ.ಚಂದ್ರಶೇಖರ್

ಬೆಂಗಳೂರು : ರಾಜ್ಯದಲ್ಲಿರುವ ಕೇಂದ್ರ ಮತ್ತು ಖಾಸಗಿ ಉದ್ದಿಮೆ, ಬ್ಯಾಂಕ್ ಸೇರಿ ಪಾಲು ದೊರೆಯಲು ಪರಿಷ್ಕೃತ ಮಹಿಷಿ ವರದಿಯನ್ನು, ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ, ಕಾಯ್ದೆ ರೂಪಿಸಿ ಎಂದು ಕನ್ನಡಪರ ಚಿಂತಕ ರಾ.ನಂ.ಚಂದ್ರಶೇಖರ ಆಗ್ರಹಿಸಿದ್ದಾರೆ.

ಕನ್ನಡ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕವಿ ಪ್ರತಿಮೆಗಳಿಗೆ ಮಾಲಾರ್ಪಣೆ ಮತ್ತು ಕನ್ನಡ ಚಿಂತನ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವಂತೆ ರಾಜ್ಯ ಸರಕಾರ ಮತ್ತು ರಾಜ್ಯದ ಸಂಸದರು ಒತ್ತಾಯಿಸಬೇಕು ಎಂದರು.

ಕನ್ನಡ ಚಿಂತನ ಸಭೆಯಲ್ಲಿ ಕೇಂದ್ರಿಯ ಸದನ ಕನ್ನಡ ಸಂಘದ ಎಂ. ಕಾಂಚನಮಾಲ, ಡಿ.ಶಾಂತಕುಮಾರ್, ಎಸ್.ಟಿ.ಮಂಜಣ್ಣ, ಶಿವರಾಜ್, ಟಿ.ಎನ್.ರಾಮಕೃಷ್ಣ ಮತ್ತಿತರರು ಹಾಜರಿದ್ದರು.

ಗಮನ ಸೆಳೆದ ಮುದ್ದೆ-ನಾಟಿಕೋಳಿ ಸಾರು ಸ್ಪರ್ಧೆ :

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕದ ಗ್ರಾಮೀಣ ಸೊಗಡು ಹಾಗೂ ದೇಸಿ ಆಹಾರ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ನಗರದ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ವಕೀಲರ ಸಂಘದ ವತಿಯಿಂದ ‘ರಾಗಿಮುದ್ದೆ ಮತ್ತು ನಾಟಿಕೋಳಿ ಸಾರು ಉಣ್ಣುವ ಸ್ಪರ್ಧೆ’(ಮುದ್ದೆ ಮಹಾಯುದ್ಧ) ಆಯೋಜಿಸಲಾಗಿದ್ದು, ಸಾರ್ವಜನಿಕರ ಗಮನ ಸೆಳೆಯಿತು.

ಕನ್ನಡ ಆಡಳಿತ ಭಾಷೆಯಾಗಿ ಸಮರ್ಥವಾಗಿ ಬಳಸಬೇಕು: ಮನೋಹರ್

ಬೆಂಗಳೂರು : ಕೈಗಾರಿಕಾ ಕ್ಷೇತ್ರದಲ್ಲಿ ತಾಂತ್ರಿಕ ಪ್ರಗತಿ ಸಾಧಿಸುವುದರ ಜತೆಗೆ ಆಡಳಿತ ಭಾಷೆಯಾಗಿ ಕನ್ನಡವನ್ನು ಸಮರ್ಥವಾಗಿ ಬಳಸಬೇಕು ಎಂದು ದಿ ಮೈಸೂರು ಇಲೆಕ್ಟಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್ ತಿಳಿಸಿದ್ದಾರೆ.

ದಿ ಮೈಸೂರು ಇಲೆಕ್ಟಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಯಶವಂತಪುರದಲ್ಲಿರುವ ಸಂಸ್ಥೆಯ ಮುಖ್ಯ ಕಚೇರಿ ಆವರಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಕೇವಲ ಸಂವಹನದ ಭಾಷೆಯಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ನಿರ್ದೇಶಕಿ ಅನಿತಾ ಸಿ., ಎಂಇಐ ಕನ್ನಡ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.



Tags

BengaluruKarnataka rajyotsava
share
ವಾರ್ತಾಭಾರತಿ
ವಾರ್ತಾಭಾರತಿ
Next Story
X