Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್...

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ : ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ16 May 2025 8:18 PM IST
share
ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಪಕ್ಷವು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಈ ನೀತಿ ಅವರನ್ನೇ ನುಂಗಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.

ಶುಕ್ರವಾರ ಇಲ್ಲಿನ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ತಮ್ಮ ವಕ್ರಬುದ್ಧಿಯನ್ನು ಪ್ರದರ್ಶನ ಮಾಡಿದ್ದಾರೆ. ಸಿಎಂ, ಪ್ರಿಯಾಂಕ್‌ ಖರ್ಗೆ, ದಿನೇಶ್ ಗುಂಡುರಾವ್, ಸಂತೋಷ್‌ ಲಾಡ್ ಇನ್ನೂ ಅನೇಕರು ನಮಗೆ ಯುದ್ಧ ಬೇಕಾಗಿಲ್ಲ, ನಾವು ಯುದ್ಧದ ಪರ ಇಲ್ಲ ಎಂದು ಹೇಳಿಕೆಯನ್ನು ನೀಡಿದ್ದರು.

ಆದರೆ ಎಐಸಿಸಿ ಕೊನೆಯಲ್ಲಿ ಒಂದು ತೀರ್ಮಾನಕ್ಕೆ ಬಂದಿತು. ನಾವು ಕೇಂದ್ರ ಸರಕಾರದ ಜೊತೆ ನಿಲ್ಲದಿದ್ದರೆ ನಮಗೆ ಈ ದೇಶದಲ್ಲಿ ಉಳಿಗಾಲವಿಲ್ಲ. ಜನ ನಮ್ಮ ವಿರುದ್ಧ ತಿರುಗಿ ಬೀಳುತ್ತಾರೆಂದು ಗಮನಿಸಿತು. ಬಳಿಕ ಮೋದಿ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದಾಗ ಇಲ್ಲಿನ ನಾಯಕರು ಬಾಯಿ ಮುಚ್ಚಿಕೊಂಡರು ಎಂದು ಟೀಕಿಸಿದರು.

ಪಾಕಿಸ್ತಾನದ ಸರಕಾರ ಭಯೋತ್ಪಾದಕರಿಗೆ ಬೆಂಬಲವಾಗಿ ನಿಂತು ನಮ್ಮ ದೇಶವನ್ನು ಗುರಿ ಮಾಡಿರುವುದು ಪ್ರಪಂಚಕ್ಕೆ ತಿಳಿದಿದೆ. ಆ ಕಾರಣದಿಂದ ಯುದ್ಧ ಪ್ರಾಂಭವಾಗಬಹುದು ಅನ್ನುವ ವಿಚಾರ ಬಂದಿದೆ. ಮೊದಲಿಗೆ ಎಐಸಿಸಿಯಾಗಲೀ ಅಥವಾ ಯಾರೇ ಆಗಲೀ ಈ ಕಾಂಗ್ರೆಸ್ ನಾಯಕರ ಮಾತುಗಳನ್ನು ಖಂಡಿಸಲಿಲ್ಲ. ಏಕೆಂದರೆ ಕಾಂಗ್ರೆಸ್ಸಿನಲ್ಲಿ ಇಬ್ಬಗೆಯ ನೀತಿ ಇದೆ ಎಂದು ಅವರು ಆರೋಪಿಸಿದರು. ಎಐಸಿಸಿ ಬೆಂಬಲವನ್ನು ನೀಡಿದರೆ ಇಲ್ಲಿನ ನಾಯಕರು ಅವರ ಮನಸ್ಥಿತಿಯನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಕಾಂಗ್ರೆಸ್ ಪಕ್ಷವು ಅವರ ನಾಯಕರು ಏನೇ ಮಾತನಾಡಿದರೂ ಖಂಡಿಸುವುದಿಲ್ಲ. ಅಂದರೆ ಕಾಂಗ್ರೆಸ್ ಇನ್ನೂ ವಕ್ರಬುದ್ಧಿಯನ್ನು ಬಿಟ್ಟಿಲ್ಲ. ಪಾಕಿಸ್ತಾನ ಯಾವ ಪ್ರಶ್ನೆಗಳನ್ನು ಕೇಳಬೇಕಿತ್ತೋ ಆ ಪಾಕಿಸ್ತಾನದ ಪ್ರಶ್ನೆಗಳನ್ನು ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್, ಕೊತ್ತೂರು ಮಂಜುನಾಥ್ ಕೇಳುತ್ತಿದ್ದಾರೆ ಎಂದರೆ ಪಾಕಿಸ್ತಾನದ ಕೆಲವು ನಾಯಕರು ಜೊತೆ ಇವರು ಸಂಪರ್ಕದಲ್ಲಿ ಇರಬಹುದು ಎಂಬ ಸಂಶಯ ಉದ್ಭವಿಸುತ್ತಿದೆ ಎಂದು ನಾರಾಯಣಸ್ವಾಮಿ ಸಂಶಯ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X