ಪ್ರಚೋದನಕಾರಿ ಹೇಳಿಕೆ ಆರೋಪ; ಛಲವಾದಿ ನಾರಾಯಣಸ್ವಾಮಿ ಬಂಧಿಸಲು ಕಾಂಗ್ರೆಸ್ ಆಗ್ರಹ

ಬೆಂಗಳೂರು : ಪರಿಷತ್‍ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್.ಮನೋಹರ್ ಮನವಿ ಮಾಡಿದ್ದಾರೆ.
ಬುಧವಾರ ನಗರದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರಿಗೆ ಮನವಿ ಸಲ್ಲಿಸಿದ ಅವರು, ಛಲವಾದಿ ನಾರಾಯಣಸ್ವಾಮಿ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ ‘ಕಾಂಗ್ರೆಸ್ ಕಾರ್ಯಕರ್ತರನ್ನು ಕೊಲ್ಲಬೇಕು’ ಎಂದು ಕರೆ ನೀಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ಆದ್ದರಿಂದ ಕೂಡಲೇ ಅವರನ್ನು ಬಂಧಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕುಶಾಲ್.ಎಚ್., ಪುಟ್ಟರಾಜು, ಓಬಳೇಶ್, ಉಮೇಶ್ ಮತ್ತಿತರರು ಹಾಜರಿದ್ದಾರೆ.
Next Story




