Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜೀವ್ ಗೌಡರನ್ನು ಗೂಂಡಾ ಕಾಯ್ದೆ...

ರಾಜೀವ್ ಗೌಡರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Jan 2026 3:42 PM IST
share
ರಾಜೀವ್ ಗೌಡರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ದರ್ಪ ಮತ್ತು ಅಟ್ಟಹಾಸ ಮಿತಿಮೀರಿದೆ. ಶಿಡ್ಲಘಟ್ಟದ ಮುನ್ಸಿಪಲ್ ಕಮೀಷನರ್ ಮತ್ತು ಪೌರಕಾರ್ಮಿಕರನ್ನು ವಾಚಾಮಗೋಚರವಾಗಿ ನಿಂದಿಸಿದ್ದಲ್ಲದೇ, ಬೆಂಕಿ ಹಚ್ಚುವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ತಕ್ಷಣವೇ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಡ್ಲಘಟ್ಟದ ಬ್ಯಾನರ್ ವಿವಾದ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಬ್ಯಾನರ್ ಅಳವಡಿಸಲು ಅಧಿಕಾರಿಗಳು ಅಡ್ಡಿಪಡಿಸಿದ್ದಕ್ಕೆ ರಾಜೀವ್ ಗೌಡ ಎಂಬುವವರು ಕಮೀಷನರ್ ಅವರನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಪರಿಶಿಷ್ಟ ಜಾತಿಗೆ ಸೇರಿದ ಪೌರಕಾರ್ಮಿಕರನ್ನು ಅಶ್ಲೀಲ ಪದಗಳಿಂದ ನಿಂದಿಸಿ, ಊರು ಬಿಡಿಸುವ ಎಚ್ಚರಿಕೆ ನೀಡಿದ್ದಾರೆ. ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಇಷ್ಟೊಂದು ಕೆಟ್ಟದಾಗಿ ನಾಲಿಗೆ ಹರಿಬಿಡುವುದು ಸರಿಯೇ? ಎಂದು ಪ್ರಶ್ನಿಸಿದರು.

ದಂಗೆ ಎಬ್ಬಿಸುವ ಮಾತುಗಳನ್ನಾಡಿದಕ್ಕೆ ಹಿಂದೆ ಪೊಲೀಸ್ ಸಂಘದ ಅಧ್ಯಕ್ಷ ಶಶಿಧರ್ ಅವರನ್ನು ಆರು ತಿಂಗಳು ಜೈಲಿನಲ್ಲಿ ಇಟ್ಟಿದ್ದಿರಿ. ಈಗ ದಂಗೆ ಎಬ್ಬಿಸುವ ಮತ್ತು ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿರುವ ರಾಜೀವ್ ಗೌಡರನ್ನು ಯಾಕೆ ಬಂಧಿಸಿಲ್ಲ? ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಮುಖ್ಯ ಕಾರ್ಯದರ್ಶಿಗಳು ತಕ್ಷಣ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು," ಎಂದು ಆಗ್ರಹಿಸಿದರು.

ಯಾದಗಿರಿಯ ಕ್ರೀಡಾಪಟು ಹಾಗೂ ಬಿಜೆಪಿಯ ಶಕುಂತಳಾ ನಟರಾಜ್ ಅವರ ಮೇಲೆ ದಾಖಲಿಸಿರುವ ಎಫ್‌ಐಆರ್‌ಗಳನ್ನು ಉಲ್ಲೇಖಿಸಿದ ಅವರು, "ನಮ್ಮ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದರೆ ಕ್ರಮ ಕೈಗೊಳ್ಳುವ ಸರ್ಕಾರ, ಬೀದಿಯಲ್ಲಿ ನಿಂತು ಗೂಂಡಾಗಿರಿ ಮಾಡುವವರನ್ನು ಯಾಕೆ ರಕ್ಷಿಸುತ್ತಿದೆ? ಕಮೀಷನರ್ ಮೇಲೆ ನಿಂದನೆ ನಡೆದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಧರಣಿ ಕುಳಿತಿದ್ದು, ಬಿಜೆಪಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯಮಟ್ಟದ ಹೋರಾಟ ರೂಪಿಸಲಿದೆ ಎಂದು ಎಚ್ಚರಿಸಿದರು.

ಇದೇ ವೇಳೆ ಬಳ್ಳಾರಿ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಅವರು, ಬಳ್ಳಾರಿಯಲ್ಲಿ ಅವರದೇ ಗನ್, ಅವರದೇ ಗನ್‍ಮ್ಯಾನ್, ಅವರದೇ ಗುಂಡು;,ಅವರೇ ಕೊಲೆ ಮಾಡಿ ನಮ್ಮ ಮೇಲೆ ಅದನ್ನು ಹಾಕಲು ಪ್ರಯತ್ನಿಸಲಿಲ್ಲವೇ? ಆ ಕಾರಣದಿಂದ ರಾಜ್ಯದ ಹಿತ ಕಾಪಾಡಬೇಕಾದ ವಿಪಕ್ಷಗಳು ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ. ಕಾಂಗ್ರೆಸ್ ಬೆದರಿಕೆಗಳಿಗೆ ಯಾರೂ ಜಗ್ಗಬೇಕಿಲ್ಲ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ವಕ್ತಾರರಾದ ಪ್ರಕಾಶ್ ಹಾಗೂ ಡಾ.ನರೇಂದ್ರ ರಂಗಪ್ಪ ಉಪಸ್ಥಿತರಿದ್ದರು.





Tags

Chalavadi Narayanaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X