Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈತರು-ಕೃಷಿ ಕಾರ್ಮಿಕರ ಹಿತ ಕಾಯುವುದು...

ರೈತರು-ಕೃಷಿ ಕಾರ್ಮಿಕರ ಹಿತ ಕಾಯುವುದು ಸರಕಾರದ ಜವಾಬ್ದಾರಿ : ಚಲುವರಾಯಸ್ವಾಮಿ

2025-26ನೇ ಸಾಲಿನ ʼಮುಂಗಾರು ಹಂಗಾಮು ಕಾರ್ಯಾಗಾರʼ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 April 2025 7:24 PM IST
share
ರೈತರು-ಕೃಷಿ ಕಾರ್ಮಿಕರ ಹಿತ ಕಾಯುವುದು ಸರಕಾರದ ಜವಾಬ್ದಾರಿ : ಚಲುವರಾಯಸ್ವಾಮಿ

ಬೆಂಗಳೂರು: ಸರಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ, ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ಬುಧವಾರ ಕೃಷಿ ಇಲಾಖೆ ವತಿಯಿಂದ ನಗರದ ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯ(ಜಿಕೆವಿಕೆ)ದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರಕಾರ ಹಾಗೂ ಇಲಾಖೆಯ ಜವಾಬ್ದಾರಿ. ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಅವರು ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ. ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಯನ್ನು ಅಭಿನಂದಾನಾರ್ಹವಾಗಿದೆ. ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಒಂದೆ ರೀತಿಯ ಪ್ರಗತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಎಚ್ಚರಿಸಿದರು.

ಕೃಷಿ ವಿಶ್ವವಿದ್ಯಾನಿಲಯಗಳು ನಡೆಸುವ ಸಂಶೋಧನಾ ಫಲ ರೈತರಿಗೆ ಸಲುಭವಾಗಿ ತಲುಪುವಂತಾಗಬೇಕು. ಬೇಸಾಯದಲ್ಲಿ ತಂತ್ರಜ್ಞಾನ, ವೈಜ್ಞಾನಿಕತೆ ಪರಿಣಾಮಕಾರಿಯಾಗಿ ಅಳವಡಿಕೆಯಾಗಬೇಕು. ರೈತ ಕರೆ ಕೇಂದ್ರದಲ್ಲಿ ತಂತ್ರಾಂಶ ಸುಧಾರಣೆಯಾಗಬೇಕು, ಕೃಷಿಕರಿಗೆ ನಿಖರವಾದ ಮಾರ್ಗದರ್ಶನ ನೀಡಬೇಕು, ಆ ಮೂಲಕ ಕೃಷಿಕರ ಆರ್ಥಿಕ ಸುಧಾರಣೆಗೆ ನೆರವಾಗಬೇಕು ಎಂದು ಚಲುವರಾಯಸ್ವಾಮಿ ಸಲಹೆ ನೀಡಿದರು.

ಕರ್ನಾಟಕವನ್ನು ತೊಗರಿ ಬೆಳೆಯಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ಗುರಿ ಹೊಂದಲಾಗಿದೆ. ಎಲ್ಲಾ ಕ್ಷೇತ್ರಗಳಿಗೂ ಕೃಷಿ ಭಾಗ್ಯ ಯೋಜನೆ ವಿಸ್ತರಿಸಲಾಗಿದೆ. ಸಾವಯವ ಮತ್ತು ಸಮಗ್ರ ಬೇಸಾಯ ಪದ್ದತಿ ಪ್ರೋತ್ಸಾಹಕ್ಕೂ ಯೋಜನೆ ಜಾರಿಗೊಳಿಸಲಾಗಿದೆ. ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಬೇಕು ಎಂದು ಅವರು ಹೇಳಿದರು.

ಸರಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಒದಗಿಸುತ್ತಿದೆ, ಎಲ್ಲಾ ವರ್ಗದ ರೈತರಿಗೆ ಸೂಕ್ಷ್ಮ ನೀರಾವರಿ ಸಾಧನಗಳನ್ನು ಕೊಳ್ಳಲು ಇದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದೆ, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿನಲ್ಲಿ ಯಾವುದೇ ಕೊರತೆ ಇಲ್ಲ. ಪೂರೈಕೆ, ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಚಲುವರಾಯಸ್ವಾಮಿ ಸೂಚನೆ ನೀಡಿದರು.

ಕೃಷಿ ಇಲಾಖೆಯ ಕಾರ್ಯದರ್ಶಿ ವಿ.ಅನ್ಬುಕುಮಾರ್ ಹಾಗೂ ಆಯುಕ್ತ ವೈ.ಎಸ್.ಪಾಟೀಲ್ ಮಾತನಾಡಿ ಕಾರ್ಯಾಗಾರದ ಉದ್ದೇಶ ಸರ್ಕಾರದ ನಿರೀಕ್ಷೆಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಇದೇ ವೇಳೆ 2024-25ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಾಗಾರದಲ್ಲಿ ಜಲಾನಯನ ಇಲಾಖೆ ಆಯುಕ್ತ ಮಹೇಶ್ ಶಿರೂರು, ನಿರ್ದೇಶಕ ಭಂಥನಾಳ, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮಣ ರೆಡ್ಡಿ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X