Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾವೇರಿ ನೀರು ಹರಿವು 2 ಸಾವಿರ...

ಕಾವೇರಿ ನೀರು ಹರಿವು 2 ಸಾವಿರ ಕ್ಯೂಸೆಕ್‍ಗೆ ಇಳಿಸಲು ಸಿಡಬ್ಲ್ಯೂಎಂಎಗೆ ಮನವಿ : ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ2 Oct 2026 6:54 PM IST
share
ಕಾವೇರಿ ನೀರು ಹರಿವು 2 ಸಾವಿರ ಕ್ಯೂಸೆಕ್‍ಗೆ ಇಳಿಸಲು ಸಿಡಬ್ಲ್ಯೂಎಂಎಗೆ ಮನವಿ : ಚಲುವರಾಯಸ್ವಾಮಿ

ಬೆಂಗಳೂರು : ಕಾವೇರಿ ಜಲಾನಯನ ಪ್ರದೇಶದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಮತ್ತು ಜಲಾಶಯಗಳಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯೂಎಂಎ)ಸೆ.24ರಂದು ನಡೆದ 58ನೆ ಸಭೆಯಲ್ಲಿ ನೀಡಿದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ರಾಜ್ಯ ಸರಕಾರವು ಶುಕ್ರವಾರ ಪ್ರಾಧಿಕಾರಕ್ಕೆ ಅಧಿಕೃತ ಮನವಿ ಸಲ್ಲಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ದಿನಕ್ಕೆ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಆದರೆ, ಕರ್ನಾಟಕದಲ್ಲಿ ನೈರುತ್ಯ ಮಾನ್ಸೂನ್ ಸಂಪೂರ್ಣ ಮುಕ್ತಾಯಗೊಂಡಿದ್ದು, ಕೃಷ್ಣರಾಜ ಸಾಗರ, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಈ ನಾಲ್ಕೂ ಜಲಾಶಯಗಳಲ್ಲಿ ಬಳಕೆಗೆ ಲಭ್ಯವಿರುವ ಒಟ್ಟು ನೀರು ಕೇವಲ 49 ಟಿಎಂಸಿ ಮಾತ್ರವಾಗಿದ್ದು, ಮುಂದಿನ ಸಾಲಿನ ಜೂನ್ ವರೆಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆ, ಪರಿಸರ ಸಂರಕ್ಷಣೆ ಮತ್ತು ಆವಿಯಾಗುವಿಕೆಯ ನಷ್ಟವನ್ನು ಸರಿದೂಗಿಸಲು ಈ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಕಾಯ್ದಿರಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯಕ್ಕಿದೆ ಎಂದು ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕಾವೇರಿ ಕಣಿವೆಯ ಸುಮಾರು 47 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇಡೀ ಕಣಿವೆ ಪ್ರದೇಶ ತೀವ್ರ ಬರಗಾಲಕ್ಕೆ ಸಿಲುಕಿದೆ. ಆದಾಗ್ಯೂ ಪ್ರಸಕ್ತ ಜಲ ವರ್ಷದಲ್ಲಿ ಪ್ರಾಧಿಕಾರದ ಎಲ್ಲ ನಿರ್ದೇಶನಗಳನ್ನು ಕರ್ನಾಟಕ ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬಂದಿದ್ದು, ಜೂ.1 ರಿಂದ ಸೆ.30ರ ವರೆಗೆ ಬಿಳಿಗುಂಡ್ಲುವಿನಲ್ಲಿ 44.21 ಟಿಎಂಸಿ ನೀರು ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ, ತಮಿಳುನಾಡಿಗೆ ಅನುಕೂಲಕರವಾದ ಈಶಾನ್ಯ ಮಾನ್ಸೂನ್ ಸಾಮಾನ್ಯ ಅಥವಾ ಉತ್ತಮವಾಗಿರಲಿದ್ದು, ಅಲ್ಲಿ ಒಳಹರಿವು ಹೆಚ್ಚುವ ಸಾಧ್ಯತೆಯಿದೆ. ಈ ಎಲ್ಲ ವಾಸ್ತವಾಂಶಗಳ ಆಧಾರದ ಮೇಲೆ, ಕೆಆರ್‍ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ಪ್ರಮಾಣದ ನೀರನ್ನು ಬಿಡುಗಡೆ ಮಾಡಲು ಸಾಧ್ಯವೇ ಇಲ್ಲದ ಇಕ್ಕಟ್ಟಿನಲ್ಲಿ ರಾಜ್ಯವಿದೆ ಎಂದು ಚಲುವರಾಯಸ್ವಾಮಿ ಪ್ರತಿಪಾದಿಸಿದ್ದಾರೆ.

ಆದುದರಿಂದ, ಪ್ರಾಧಿಕಾರವು ತನ್ನ ಹಿಂದಿನ ನಿರ್ಧಾರವನ್ನು ಮರುಪರಿಶೀಲಿಸಿ, ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು ದಿನಕ್ಕೆ 2 ಸಾವಿರ ಕ್ಯೂಸೆಕ್‍ಗೆ ಇಳಿಸುವ ಮೂಲಕ ರಾಜ್ಯದ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಪ್ರಾಧಿಕಾರಕ್ಕೆ ವಿನಂತಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

Tags

Chaluvarayaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X