Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಸಚಿವರಿಂದ ತುಂಗಭದ್ರಾ ಅಣೆಕಟ್ಟು...

ಕೇಂದ್ರ ಸಚಿವರಿಂದ ತುಂಗಭದ್ರಾ ಅಣೆಕಟ್ಟು ನೂತನ ಗೇಟ್ ಉದ್ಘಾಟನೆ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ12 Jun 2026 9:24 PM IST
share
ಕೇಂದ್ರ ಸಚಿವರಿಂದ ತುಂಗಭದ್ರಾ ಅಣೆಕಟ್ಟು ನೂತನ ಗೇಟ್ ಉದ್ಘಾಟನೆ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್ ಗಳ ಉದ್ಘಾಟನೆಗೆ ಕೇಂದ್ರ ಜಲಶಕ್ತಿ ಸಚಿವರು ಆಗಮಿಸುತ್ತಿದ್ದು, ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆ ಇದೆ. ನ್ಯಾಯ ನೀಡುವ ಸ್ಥಾನದಲ್ಲಿ ಕೂತು ಅವರು ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶುಕ್ರವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಾನು, ರಾಮಲಿಂಗಾ ರೆಡ್ಡಿ ಹಾಗೂ ಟಿ.ಬಿ.ಜಯಚಂದ್ರ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನ ಅನ್ವಯ ಅಧಿಸೂಚನೆ, ಮಹದಾಯಿ ನೀರು, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರದ 5,300 ಕೋಟಿ ರೂ. ಅನುದಾನ ವಿಚಾರವಾಗಿ ಪ್ರಸ್ತಾಪಿಸಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಪ್ರಧಾನಮಂತ್ರಿಗೆ ನೀಡಿರುವ ಮನವಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೃಷಿ, ನೀರಾವರಿ, ನಗರಾಭಿವೃದ್ಧಿ, ಸಂಚಾರ ವಿಚಾರಗಳಿಗೆ ಸಂಬಂಧಿಸಿದಂತೆ ಮನವಿ ಮಾಡಲಾಗಿದೆ. ಅವರು ಪರಿಶೀಲಿಸಿ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

ರಾಜ್ಯಸಭೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ವಕ್ತಾರ ಪವನ್ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವಿರೋಧ ಆಯ್ಕೆಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ನಮ್ಮ ಬಳಿ ಸಂಖ್ಯಾಬಲವಿತ್ತು. ಕರ್ನಾಟಕದ ಜನತೆ ನಮಗೆ ಸಂಖ್ಯಾಬಲದ ಆಶೀರ್ವಾದ ನೀಡಿದ್ದರು, ಆ ಸಂಖ್ಯಾಬಲವೆ ಈಗ ಫಲ ನೀಡಿದೆ ಎಂದರು. ಅಲ್ಲದೆ, ಸಂಪುಟ ವಿಸ್ತರಣೆ ಕುರಿತು ‘ಮುಂದಿನ ದಿನಗಳಲ್ಲಿ ನೋಡೋಣ’ ಎಂದು ತಿಳಿಸಿದರು.

Tags

Chief Minister DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X