Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. ಯಾವುದೇ ರೀತಿಯ ಪಿತೂರಿ-ಷಡ್ಯಂತ್ರಕ್ಕೆ ಭಯ...

ಯಾವುದೇ ರೀತಿಯ ಪಿತೂರಿ-ಷಡ್ಯಂತ್ರಕ್ಕೆ ಭಯ ಪಡುವವನಲ್ಲ ನಾನು : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Aug 2024 8:49 PM IST
share
ಯಾವುದೇ ರೀತಿಯ ಪಿತೂರಿ-ಷಡ್ಯಂತ್ರಕ್ಕೆ ಭಯ ಪಡುವವನಲ್ಲ ನಾನು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ‘ನಾನು ಯಾವುದೇ ರೀತಿಯ ಪಿತೂರಿ-ಷಡ್ಯಂತ್ರಕ್ಕೆ ಭಯ ಪಡುವವನಲ್ಲ. ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರಿಗೆ ಮೋಸದಿಂದ ಹಿಡಿದುಕೊಟ್ಟವರು ನಮ್ಮವರೇ. ಇಂತಹ ದೇಶದ್ರೋಹಿಗಳು ನಮ್ಮೊಳಗೆ ಈಗಲೂ ಇದ್ದಾರೆ. ತಂತಹ ದೇಶದ್ರೋಹಿಗಳು ಎಲ್ಲ ಕಾಲದಲ್ಲೂ ಇರುತ್ತಾರೆ. ಇಂತಹವರನ್ನು ನಾವು ಒಗ್ಗಟ್ಟಿನಿಂದ ಎದುರಿಸಿ, ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಶುಕ್ರವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆ, ಕನಕಭವನ ಉದ್ಘಾಟಿಸಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮ, ಹೋರಾಟ ಮನೋಭಾವವನ್ನು ನಾವು ರೂಢಿಸಿಕೊಂಡಾಗ ಮಾತ್ರ ರಾಯಣ್ಣನ ಆಶಯ ಈಡೇರುತ್ತದೆ ಎಂದು ನುಡಿದರು.

ಷಡ್ಯಂತ್ರ ಸಹಿಸಬೇಡಿ: ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ? ಎಂದು ನೆರೆದಿದ್ದ ಜನಸ್ತೋಮ ಪ್ರಶ್ನಿಸಿದ ಸಿದ್ದರಾಮಯ್ಯರಿಗೆ, ‘ನಾವು ಸಹಿಸಲ್ಲ. ರೊಚ್ಚೆಗೇಳ್ತೇವೆ’ ಎಂದು ಜನಸ್ತೋಮ ಪ್ರತಿಕ್ರಿಯಿಸಿತು. ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ, ದೇವರಗುಡ್ಡದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಮನವಿ ಮಾಡಿದರು.

‘ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಮೊದಲ ಬಾರಿ ಸಿಎಂ ಆಗಿದ್ದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೆ ಬಾರಿ ಸಿಎಂ ಆಗಿ ವರ್ಷದಲ್ಲೇ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದು ಅವರು ಹೇಳಿದರು.

‘ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಈ ಸಿದ್ದರಾಮಯ್ಯ ಸಿಎಂ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಗಾಂಧೀಜಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ ಜೆಡಿಎಸ್-ಬಿಜೆಪಿಯವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X