Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ? :...

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ2 Oct 2024 9:10 PM IST
share
ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಬುಧವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಗರದ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.

‘ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?’ ಅಂತ ಮುಖಕ್ಕೆ ಮೈಕ್ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿಯ ಪತ್ರಿಕೋದ್ಯಮ ಅಂತ ನನಗಂತೂ ಅರ್ಥ ಆಗ್ತಾ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ, ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿ ಬಿಡುತ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ಸುದ್ದಿ ವಾಹಿನಿಗಳು ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ? ಎಂದು ಪ್ರಶ್ನಿಸಿದ ಅವರು, ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರು ಇವತ್ತಿನ ಪತ್ರಕರ್ತರಿಗೆ ಮಾದರಿ ಆಗಬೇಕು ಎಂದು ಆಶಿಸಿದರು.

ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ. ಗಾಂಧಿಯನ್ನು ದೈಹಿಕವಾಗಿ ಕೊಲ್ಲಬಹುದು. ಆದರೆ ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ. ನಾವು ಗೋಡ್ಸೆ ಭಾರತವನ್ನು ನಿರ್ಮಿಸಲು ಹೊರಟಿರುವವರನ್ನು ಸೋಲಿಸಬೇಕು. ನಾವು ಗಾಂಧಿ ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ ಎಂದು ಸಿದರಾಮಯ್ಯ ಶ್ಲಾಘಿಸಿದರು.

ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ. ಶಿಕ್ಷಣ ಪಡೆದವರು ಸಮಾಜದ ಆಸ್ತಿ ಆಗಬೇಕು. ಸಮಾಜದ ವಿರೋಧಿ ಆಗಬಾರದು. ಗಾಂಧೀಜಿ ಅವರ ಬದುಕೇ ಸಂದೇಶವಾಗಿತ್ತು. ಸಮಾಜದ ಬದಲಾವಣೆಗಾಗಿ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಹೀಗಾಗಿ ಇವರ ವಿಚಾರಗಳು ಎಂದೆಂದಿಗೂ ಶಾಶ್ವತ ಎಂದು ಮುಖ್ಯಮಂತ್ರಿ ಹೇಳಿದರು.

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ: ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಕುರುಕುಲ ವಸತಿ ಶಾಲೆ, ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೊಟ್ಟಿಕೆರೆಯ ನಿವೃತ್ತ ಉಪನ್ಯಾಸಕ ಹಾಗೂ ಗಾಂಧಿವಾದಿ ಪ್ರೊ.ಜಿ.ಬಿ.ಶಿವರಾಜು ಅವರಿಗೆ 2024ನೆ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಟೀಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿ: ಶಿವಾಜಿ ಗಣೇಶನ್(2019), ಶ್ರೀಕಾಂತಾಚಾರ್ಯ ಆರ್.ಮಣೂರ(2020), ಡಾ.ಆರ್.ಪೂರ್ಣಿಮಾ(2021), ಡಾ.ಪದ್ಮರಾಜ ದಂಡಾವತಿ(2022) ಹಾಗೂ ಡಾ.ಸರಜೂ ಕಾಟ್ಕರ್(2023) ಅವರಿಗೆ ಟೀಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ: ರಾಜೀವ್ ಕಿದಿಯೂರ(2019), ಇಂಧೂದರ ಹೊನ್ನಾಪುರ(2020), ಎನ್.ಮಂಜುನಾಥ(2021), ಚಂದ್ರಶೇಖರ್ ಪಾಲೆತ್ತಾಡಿ(2022) ಹಾಗೂ ಶಿವಲಿಂಗಪ್ಪ ದೊಡ್ಡಮನಿ(2023) ಅವರಿಗೆ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾಸಕ ರಿಝ್ವಾನ್ ಅರ್ಶದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನಂ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ಆಯುಕ್ತ ಹೇಮಂತ್ ನಿಂಬಾಳ್ಕರ್, ಕಂಠೀರವ ಸ್ಟುಡಿಯೊ ಅಧ್ಯಕ್ಷ ಅಯ್ಯೂಬ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X