Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿಕ್ಕಮಗಳೂರು | ಪರಿಶಿಷ್ಟರ ಜಮೀನು...

ಚಿಕ್ಕಮಗಳೂರು | ಪರಿಶಿಷ್ಟರ ಜಮೀನು ಕಬಳಿಸಲು ಗ್ರಾಪಂ ಸದಸ್ಯ, ಪತ್ನಿಯಿಂದ ದೌರ್ಜನ್ಯ :ಆರೋಪ

ನ್ಯಾಯಕ್ಕಾಗಿ ಜಿಲ್ಲಾಡಳಿತಕ್ಕೆ ಕೊಪ್ಪ ಅಡಿಗೆಬೈಲು ಗ್ರಾಮಸ್ಥರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Jan 2025 10:26 PM IST
share
ಚಿಕ್ಕಮಗಳೂರು | ಪರಿಶಿಷ್ಟರ ಜಮೀನು ಕಬಳಿಸಲು ಗ್ರಾಪಂ ಸದಸ್ಯ, ಪತ್ನಿಯಿಂದ ದೌರ್ಜನ್ಯ :ಆರೋಪ

ಚಿಕ್ಕಮಗಳೂರು : ಜಮೀನು ಕಬಳಿಸಲು ನಿರಂತರವಾಗಿ ದೌರ್ಜನ್ಯ ನಡೆಸುತ್ತಿರುವ ಮೇಲ್ವರ್ಗದವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ನೀಡಬೇಕೆಂದು ಆಗ್ರಹಿಸಿ ಕೊಪ್ಪ ತಾಲೂಕಿನ ಅಡಿಗೆಬೈಲು ಗ್ರಾಮದ ಪರಿಶಿಷ್ಟರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕೊಪ್ಪ ತಾಲೂಕಿನ ಅಡಿಗೆಬೈಲು ಗ್ರಾಮದ ಪರಿಶಿಷ್ಟರು, 1981ರಲ್ಲಿ ಗ್ರಾಮದ ನಾಗಯ್ಯ, ರಂಗಯ್ಯ ಸೇರಿದಂತೆ 9 ಪರಿಶಿಷ್ಟರಿಗೆ ತಲಾ 3 ಎಕರೆ ದರಖಾಸ್ತು ಜಮೀನು ಹಾಗೂ ಸಾಗುವಳಿ ಚೀಟಿಯನ್ನು ಜಿಲ್ಲಾಡಳಿತ ನೀಡಿದೆ. ಈ ಜಮೀನುಗಳು 1983-94ರಲ್ಲಿ ಪೋಡಿಯಾಗಿರುತ್ತದೆ. ಪೋಡಿ ನಕಾಶೆಯಂತೆ ಪರಿಶಿಷ್ಟರು ಈ ಜಮೀನಿನ ಸ್ವಾಧೀನಾನುಭವದಲ್ಲಿದ್ದು, ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಇದೇ ಗ್ರಾಮದ ನಿವಾಸಿ ಹಾಗೂ ಹಿರೇಗದ್ದೆ ಗ್ರಾಪಂ ಸದಸ್ಯ ಎ.ಸಿ.ಸುರೇಶ್‌ಗೌಡ ಹಾಗೂ ಆತನ ಪತ್ನಿ ಭಾರತಿ ಸುರೇಶ್ ಎಂಬವರು ಪರಿಶಿಷ್ಟರ ಜಮೀನು ಕಬಳಿಸುವ ಉದ್ದೇಶದಿಂದ ನಿರಂತರವಾಗಿ ಕಿರುಕುಳ ನೀಡುತ್ತಾ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ದೂರಿದರು.

ಪರಿಶಿಷ್ಟರನ್ನು ಸರಕಾರ ಮಂಜೂರು ಮಾಡಿರುವ ಜಮೀನಿನಿಂದ ಒಕ್ಕಲೆಬ್ಬಿಸುವ ಉದ್ದೇಶದಿಂದ ವಸ್ತಾರೆ ಹೋಬಳಿಯ ವಳಗೇರಹಳ್ಳಿಯಲ್ಲಿರುವ ಭೂತಪ್ಪ ಎಂಬ ದೇವಾಲಯದ ಆಡಳಿತ ಮಂಡಳಿ ಮೇಲೆ ಒತ್ತಡ ಹೇರಿ ನೋಟಿಸ್ ಕಳುಹಿಸುವ ಮೂಲಕ ದೇವರ ಭಯ ಹುಟ್ಟಿಸಿ ಜಮೀನು ತೊರೆಯುವಂತೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಅಲ್ಲದೇ ನಮ್ಮ ತೋಟಗಳಿಗೆ ಹೋಗದಂತೆ ನಮ್ಮದೇ ತೋಟದ ಬೇಲಿಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿ ಬೇಲಿ ದಾಟುವ ಪರಿಶಿಷ್ಟರನ್ನು ಕೊಲ್ಲಲು ಸಂಚು ಮಾಡಿದ್ದಾರೆ ಎಂದು ದೂರಿದರು.

ಈ ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ, ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದ ಅವರು, ಪೊಲೀಸರಿಗೆ ದೂರು ನೀಡಿದ್ದಕ್ಕೆ ಕುಪಿತರಾದ ಸುರೇಶ್ ಹಾಗೂ ಆತನ ಪತ್ನಿ ಸಂತ್ರಸ್ತ ಉಮೇಶ್ ಎಂಬವರ ತಾಯಿ ಗೌರಮ್ಮ ಹಾಗೂ ಮಗನ ಮೇಲೂ ಹಲ್ಲೆ ಮಾಡಿದ್ದು, ಈ ಬಗ್ಗೆಯೂ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇವೆ, ಆದರೆ ಪೊಲೀಸರು ಯಾವುದೇ ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ. ಪರಿಣಾಮ ದೌರ್ಜನ್ಯವನ್ನು ಮತ್ತೆ ಮುಂದುವರಿಸಿದ್ದಾರೆ. ಬಾಳೆಹೊನ್ನೂರು ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಎಸ್ಪಿಗೂ ದೂರು ನೀಡಲಾಗಿದೆ ಎಂದ ಸಂತ್ರಸ್ತರು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಗ್ರಾಪಂ ಸದಸ್ಯ ಸುರೇಶ್ ಹಾಗೂ ಆತನ ಪತ್ನಿ ಭಾರತಿ ಅವರಿಂದಾಗುತ್ತಿರುವ ಕಿರುಕುಳದಿಂದ ರಕ್ಷಣೆ ನೀಡಿ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ ದೇವರ ಹೆಸರಿನಲ್ಲಿ ನೋಟಿಸ್ ನೀಡಿ ಮಾನಸಿಕವಾಗಿ ಕಿರುಕುಳ ನೀಡಿರುವ ಭೂತಪ್ಪ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಕಾನೂನು ವೇದಿಕೆ ಸಂಚಾಲಕ ಕೃಷ್ಣಮೂರ್ತಿ, ಅಡಿಗೆಬೈಲು ಗ್ರಾಮದ ಸಂತ್ರಸ್ತರಾದ ಸುನಿಲ್, ಉಮೇಶ್ ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X