Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ...

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಉಳಿಕೆ ಮೂಲ ವೃಂದದಲ್ಲಿ ಶೇ.92.52, ಕಲ್ಯಾಣ ಕರ್ನಾಟಕ ವೃಂದದಲ್ಲಿ ಶೇ.94ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರು: ಎಚ್.ಪ್ರಸನ್ನ

ವಾರ್ತಾಭಾರತಿವಾರ್ತಾಭಾರತಿ2 Aug 2026 11:17 PM IST
share
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಉಳಿಕೆ ಮೂಲ ವೃಂದದಲ್ಲಿ ಶೇ.92.52, ಕಲ್ಯಾಣ ಕರ್ನಾಟಕ ವೃಂದದಲ್ಲಿ ಶೇ.94ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರು: ಎಚ್.ಪ್ರಸನ್ನ

ಬೆಂಗಳೂರು : ರವಿವಾರ ನಡೆದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಉಳಿಕೆ ಮೂಲ ವೃಂದದಲ್ಲಿ 3,77,861 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಲ್ಲಿ ಶೇ.92.52ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಕಲ್ಯಾಣ ಕರ್ನಾಟಕ ವೃಂದದ 76,676 ಅಭ್ಯರ್ಥಿಗಳ ಪೈಕಿ ಶೇ.94ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಬೆಂಗಳೂರಿನ 149 ಪರೀಕ್ಷಾ ಕೇಂದ್ರಗಳು ಸೇರಿದಂತೆ ರಾಜ್ಯದ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ನಡೆಸಲಾಯಿತು. ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಬೆಳಗಿನ ಅವಧಿಯಲ್ಲಿ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಸಂಜೆ ಅವಧಿಯಲ್ಲಿ ಪರೀಕ್ಷೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶವಾಗದಂತೆ ತಂತ್ರಜ್ಞಾನದ ಗರಿಷ್ಠ ಬಳಕೆ ಮಾಡಿಕೊಳ್ಳಲಾಯಿತು. ಎಲ್ಲಾ ಪರೀಕ್ಷಾ ಕೇಂದ್ರಗಳು ಹಾಗೂ ಪರೀಕ್ಷಾ ಕೊಠಡಿಗಳ ಮೇಲೆ ವೆಬ್‍ಕಾಸ್ಟಿಂಗ್ ಮೂಲಕ ನಿರಂತರ ನಿಗಾ ವಹಿಸುವ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರು ಸೇರಿದಂತೆ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳ ಮೇಲೂ ಕೆಇಎ ಕಚೇರಿಯಲ್ಲಿರುವ ಕಮಾಂಡ್ ಸೆಂಟರ್ ಮೂಲಕ ನೇರ ನಿಗಾ ವಹಿಸಲಾಯಿತು ಎಂದು ತಿಳಿಸಿದ್ದಾರೆ.

ಕಾಂಪೌಂಡ್ ಹಾರಿ ಹೋದ ಅಭ್ಯರ್ಥಿಗಳು: ವರದಿ ಕೇಳಿದ ಕೆಇಎ

ವಿಜಯಪುರ ಜಿಲ್ಲೆಯ ತಿಕೋಟಾದ ಶಾರದಾಂಭಾ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಒಎಂಆರ್ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆಗಳು ಹೊಂದಾಣಿಕೆ ಆಗುತ್ತಿಲ್ಲ ಎಂದು ಗೊಂದಲ ಸೃಷ್ಟಿಸಿದ ಕೆಲ ಅಭ್ಯರ್ಥಿಗಳು ತಮ್ಮ ಬಳಿ ಇದ್ದ ಒಎಂಆರ್ ಮತ್ತು ಪ್ರಶ್ನೆ ಪತ್ರಿಕೆ ಸಮೇತ ಕಾಂಪೌಂಡ್ ಹಾರಿ ಹೊರ ನಡೆದಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಕೇಳಲಾಗಿದೆ ಎಂದು ಎಚ್.ಪ್ರಸನ್ನ ತಿಳಿಸಿದ್ದಾರೆ.

ಕೆಇಎ ನಿಯಮ ಪ್ರಕಾರ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಉತ್ತರ ಪತ್ರಿಕೆಗಳ ಕ್ರಮ ಸಂಖ್ಯೆ ಹೊಂದಾಣಿಕೆ ಆಗಬೇಕೆಂದೇನೂ ಇಲ್ಲ. ಈ ಬಗ್ಗೆ ಸ್ಥಳೀಯ ಸಿಬ್ಬಂದಿ ಮನದಟ್ಟು ಮಾಡಿದರೂ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ಇಷ್ಟರ ನಡುವೆಯೂ ತಿಕೋಟಾ ಕೇಂದ್ರದಲ್ಲಿ 120 ಅಭ್ಯರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ಒಎಂಆರ್ ಪ್ರತಿ ಸ್ಕ್ಯಾನ್:

ಪಾರದರ್ಶಕತೆಯ ಭಾಗವಾಗಿ ಪರೀಕ್ಷೆ ಮುಕ್ತಾಯವಾದ ತಕ್ಷಣವೇ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಕೆಇಎ ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡುವ ಕೆಲಸ ಆರಂಭಿಸಲಾಗಿದೆ. ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ, ಮೈಸೂರು, ದಾವಣಗೆರೆ, ವಿಜಯಪುರ ಹಾಗೂ ರಾಯಚೂರು ನಗರಗಳಲ್ಲಿ ಒಎಂಆರ್ ಸ್ಕ್ಯಾನಿಂಗ್‍ಗೆ ವಿಶೇಷ ವ್ಯವಸ್ಥೆ ಮಾಡಿದ್ದು, ಸಂಜೆ 7 ಗಂಟೆವರೆಗೆ ಬೆಳಗಿನ ಪರೀಕ್ಷೆಯ 20 ಜಿಲ್ಲೆಗಳ ಒಎಂಅರ್ ಪ್ರತಿಗಳನ್ನು ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡುವ ಕೆಲಸ ಪೂರ್ಣಗೊಳಿಸಲಾಗಿದೆ. ಉಳಿದ ಜಿಲ್ಲೆಗಳ ಒಎಂಆರ್ ಪ್ರತಿಗಳನ್ನು ಸ್ಕ್ಯಾನ್ ಮಾಡುವ ಕೆಲಸ ಪ್ರಗತಿಯಲ್ಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

Tags

Police constable
share
ವಾರ್ತಾಭಾರತಿ
ವಾರ್ತಾಭಾರತಿ
Next Story
X