Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ...

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಅಂಗೀಕರಿಸದಂತೆ ರಾಜ್ಯಪಾಲರಿಗೆ ಮನವಿ: ಸಿ.ಕೆ.ರಾಮಮೂರ್ತಿ

ವಾರ್ತಾಭಾರತಿವಾರ್ತಾಭಾರತಿ23 Dec 2025 6:49 PM IST
share
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಅಂಗೀಕರಿಸದಂತೆ ರಾಜ್ಯಪಾಲರಿಗೆ ಮನವಿ: ಸಿ.ಕೆ.ರಾಮಮೂರ್ತಿ

ಬೆಂಗಳೂರು : ರಾಜ್ಯ ಸರಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೂ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ತಿಳಿಸಿದ್ದಾರೆ.

ಮಂಗಳವಾರ ನಗರದ ಕೆ.ಜಿ.ರಸ್ತೆಯಲ್ಲಿರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗುರುವಾರ(ಡಿ.25)ದಂದು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗದಲ್ಲಿ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಈ ವಿಧೇಯಕದ ವಿರುದ್ಧ ಇವತ್ತು ಇಲ್ಲಿ ಸಾಂಕೇತಿಕವಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವತ್ತು ಹೋರಾಟ ನಡೆಸಲಾಗುತ್ತಿದೆ. ಮಸೂದೆ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ ಮಾಡಲಿದ್ದೇವೆ. ಕೇಂದ್ರ ಸರಕಾರಕ್ಕೂ ಪತ್ರ ಬರೆಯಲಿದ್ದೇವೆ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಹಾಗೂ ಜೈಲಿಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ರಾಷ್ಟ್ರಪತಿಯ ಗಮನವನ್ನು ಸೆಳೆಯಲಿದ್ದೇವೆ ಎಂದು ರಾಮಮೂರ್ತಿ ಹೇಳಿದರು.

ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಮಾತನಾಡಿ, ಅಂಬೇಡ್ಕರ್ ನೀಡಿದ ಸಂವಿಧಾನದಲ್ಲಿ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಎಂಬ 3 ಹಂತಗಳಿವೆ. ಇದೀಗ ವಾಕ್ ಸ್ವಾತಂತ್ರ್ಯದ ವಿರುದ್ಧವಾಗಿ ಹೊಸ ಕಾಯ್ದೆ ತಂದಿದ್ದಾರೆ. ನ್ಯಾಯಾಂಗದ ಅಧಿಕಾರವನ್ನು ಉಲ್ಲಂಘಿಸಿ ಡಿವೈಎಸ್ಪಿ ಮೇಲ್ಪಟ್ಟ ಅಧಿಕಾರಿ ಯಾರನ್ನಾದರೂ ಏಕಾಏಕಿ ಜೈಲಿಗೆ ಹಾಕುವ ಕಾನೂನು ತಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ತುರ್ತು ಪರಿಸ್ಥಿತಿ ತಂದಿದ್ದಾರೆ ಎಂದು ಆಕ್ಷೇಪಿಸಿದರು.

ತೆಲಂಗಾಣ, ಇತರ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳು, ಇಂಡಿ ಒಕ್ಕೂಟದ ಆಡಳಿತ ಇರುವ ರಾಜ್ಯಗಳಲ್ಲಿ ಇಂಥ ಕಾನೂನು ತರಲು ಹೊರಟಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯ ಕಿತ್ತುಕೊಳ್ಳುವ ಈ ಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹರೀಶ್ ತಿಳಿಸಿದರು.

ನಮ್ಮ ಎಲ್ಲ ಸಂಸದರು, ಕೇಂದ್ರ ಸಚಿವರು ಇದರ ಕುರಿತು ರಾಷ್ಟ್ರಪತಿಯನ್ನು ಭೇಟಿ ಮಾಡಲಿದ್ದಾರೆ. ಇದಕ್ಕೆ ಅಂಕಿತ ಹಾಕದಂತೆ ಮನವಿ ನೀಡಲಿದ್ದಾರೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ರಂಗಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಾಘವೇಂದ್ರ ರಾವ್, ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಆಶಾ ಎಸ್.ರಾವ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X