Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭದ್ರತಾ ಮೂಲಸೌಕರ್ಯ, ಪೊಲೀಸ್ ಸಾಮರ್ಥ್ಯ...

ಭದ್ರತಾ ಮೂಲಸೌಕರ್ಯ, ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ12 Jun 2026 8:56 PM IST
share
ಭದ್ರತಾ ಮೂಲಸೌಕರ್ಯ, ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಹೊಸದಿಲ್ಲಿ : ರಾಜ್ಯಕ್ಕೆ ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (ಐಆರ್‍ಬಿಎಸ್) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್‍ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದೆರ್ಜೆ, ಕಾರಾಗೃಹಗಳ ಆಧುನೀಕರಣ ಸೇರಿದಂತೆ ಕರ್ನಾಟಕದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಸಲ್ಲಿಸಿದರು.

ಶುಕ್ರವಾರ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಿಎಂ ಶಿವಕುಮಾರ್, ‘ಕರ್ನಾಟಕ ರಾಜ್ಯ ಪೊಲೀಸ್‍ಗೆ ‘ಪ್ರೆಸಿಡೆಂಟ್ಸ್ ಕಲರ್' ಪ್ರಶಸ್ತಿಯನ್ನು ನೀಡುವ ಕುರಿತಾದ ಪ್ರಸ್ತಾವನೆಯನ್ನು 2024ರ ಮೇ 8ರಂದು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದ್ದು, ಅದು ಪರಿಶೀಲನೆಯಲ್ಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇನ್ನು ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಬೇಕಾಗಿದೆ. ಈ ವಿಷಯವನ್ನು ಶೀಘ್ರವಾಗಿ ಪರಿಶೀಲಿಸಿ ‘ಪ್ರೆಸಿಡೆಂಟ್ಸ್ ಕಲರ್' ಪ್ರಶಸ್ತಿ ನೀಡಲು ಅನುಮೋದನೆ ನೀಡಬೇಕು ಎಂದು ಕೋರಿದರು.

ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇನ್ನೂ 2 ಹೆಚ್ಚುವರಿ ಐಆರ್‍ಬಿ ಬೆಟಾಲಿಯನ್‍ಗಳನ್ನು ಸ್ಥಾಪಿಸಲು ಅಂದಾಜು 243ಕೋಟಿ ರೂ.ಗಳ ವೆಚ್ಚದ ಹೊಸ ಪ್ರಸ್ತಾವನೆಯನ್ನು 2025ರ ಫೆಬ್ರವರಿ 4ರಂದು ಸಚಿವಾಲಯಕ್ಕೆ ಕಳುಹಿಸಲಾಗಿದೆ. ಇದಕ್ಕೆ ಮಂಜೂರಾತಿ ನೀಡಬೇಕು. ನಾಲ್ಕು ಪ್ರಮುಖ ನಗರಗಳಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‍ಗಳು ಹಾಗೂ ಸಂವಹನ ಉಪಕರಣಗಳ ಸ್ಥಾಪನೆಗಾಗಿASUMP ಯೋಜನೆಯಡಿ 280ಕೋಟಿ ರೂ.ಗಳ ಪ್ರಸ್ತಾವ ಸಲ್ಲಿಸಲಾಗಿದ್ದು, ಶೀಘ್ರಗತಿಯಲ್ಲಿ ಮಂಜೂರಾತಿ ನೀಡಬೇಕು ಎಂದು ಶಿವಕುಮಾರ್ ಮನವಿ ಮಾಡಿದರು.

ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‍ಆರ್) ನಿಧಿಯನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ ಕಂಪೆನಿಗಳ ಕಾಯ್ದೆ, 2013ರ ಶೆಡ್ಯೂಲ್ VII ರ ಅಡಿಯಲ್ಲಿ ಪೊಲೀಸ್ ಸಂಬಂಧಿತ ಚಟುವಟಿಕೆಗಳನ್ನು ಸೇರಿಸುವ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ಶೀಘ್ರವಾಗಿ ಅನುಮೋದನೆ ನೀಡಬೇಕು. ಬಿಪಿಆರ್‌ಎನ್‍ಡಿಯ ಗ್ಯಾಪ್ ಅನಾಲಿಸಿಸ್ ಮಾರ್ಗಸೂಚಿಗಳ ಪ್ರಕಾರ ಪೆÇಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು 258ಕೋಟಿ ರೂ.ಗಳ ಪ್ರಸ್ತಾವ ಸಲ್ಲಿಸಲಾಗಿದ್ದು, ಇದಕ್ಕೆ ಅನುಮೋದನೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಕಾರಾಗೃಹಗಳ ಆಧುನೀಕರಣ: ಕಾರಾಗೃಹಗಳ ಆಧುನೀಕರಣ ಯೋಜನೆಯಡಿ 2025-26ರ ಆರ್ಥಿಕ ವರ್ಷಕ್ಕೆ (ಸಿಸಿಟಿವಿ, ವಾಕಿಟಾಕಿ ಮತ್ತು ಇತರ ಭದ್ರತಾ ಉಪಕರಣಗಳ ಖರೀದಿಗೆ) 20ಕೋಟಿ ರೂ. ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದ್ದು, ಈ ಮೊತ್ತವನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಗಡುವು ವಿಸ್ತರಣೆ: ಕರ್ನಾಟಕದಲ್ಲಿ ನಿಯಮ 52-A ಅನ್ನು ಅನುಷ್ಠಾನಗೊಳಿಸಲು ಗಡುವನ್ನು ವಿಸ್ತರಿಸುವಂತೆ ಕೋರಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ಈ ವಿಷಯವನ್ನು ಸಂಬಂಧಪಟ್ಟ ಸಚಿವಾಲಯದೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅನುಮೋದನೆ ಕೊಡಿಸಬೇಕು ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಮುಂದೆ ನಡೆದ ಚರ್ಚೆಗಳ ಅನುಸಾರ, ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ದರ್ಜೆಗೇರಿಸಲುASUMP ಅಡಿಯಲ್ಲಿ 278ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದನ್ನು ಪರಿಗಣಿಸಬೇಕು. ಸೈಬರ್ ಅಪರಾಧಗಳು ಸಮಾಜ, ಆರ್ಥಿಕತೆ ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಹಾಗೂ ನಿರಂತರ ಸವಾಲನ್ನು ಒಡ್ಡುತ್ತಿವೆ.

ಇವುಗಳನ್ನು ನಿಗ್ರಹಿಸಲು ಅತ್ಯಾಧುನಿಕ ಸೈಬರ್ ಭದ್ರತಾ ವ್ಯವಸ್ಥೆ ಅಗತ್ಯವಿದ್ದು, ರಾಜ್ಯ ಸರಕಾರವು ಅಂದಾಜು 360ಕೋಟಿ ರೂ.ಗಳ ವೆಚ್ಚದಲ್ಲಿ ‘ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್' ಅನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರ ಯೋಜನಾ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು. ಈ ಉಪಕ್ರಮವನ್ನು ಪರಿಗಣಿಸಿ, ಯೋಜನೆಗೆ ಅನುಮೋದನೆ ನೀಡಬೇಕು ಎಂದು ಡಿ.ಕೆ.ಶಿವಕುಮಾರ್ ಕೋರಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X