Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಲ್ಲಾ ಶೋಷಿತರಿಗೂ ಬೆಳಕು ನೀಡಿದವರು ಬಾಬಾ...

ಎಲ್ಲಾ ಶೋಷಿತರಿಗೂ ಬೆಳಕು ನೀಡಿದವರು ಬಾಬಾ ಸಾಹೇಬರು : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ5 July 2026 5:50 PM IST
share
ಎಲ್ಲಾ ಶೋಷಿತರಿಗೂ ಬೆಳಕು ನೀಡಿದವರು ಬಾಬಾ ಸಾಹೇಬರು : ಸಿಎಂ ಡಿ.ಕೆ.ಶಿವಕುಮಾರ್
ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ

ಬೆಂಗಳೂರು ಗ್ರಾಂ. : "ಒಂದು ವರ್ಗದ ನಾಯಕರಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೋರಾಟ ಮಾಡಲಿಲ್ಲ. ಎಲ್ಲ ಶೋಷಿತ ವರ್ಗಕ್ಕೆ ಬೆಳಕು ‌ನೀಡಿದರು. ಭಾರತದ ಪ್ರಜೆಗಳು ಸಮಾನತೆಯಿಂದ ಬದುಕಲು ರೂಪುರೇಷೆ ನೀಡಿದ ಧೀಮಂತ ನಾಯಕ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಪಕ್ಕದ ಮೈದಾನದಲ್ಲಿ ರವಿವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

"ಜನರ ಪರವಾಗಿ ದನಿ ಎತ್ತುವುದನ್ನು ಅಂಬೇಡ್ಕರ್ ಅವರು ಕಲಿಸಿಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಅಂದಿನ ಕಾಲದಲ್ಲೇ ಅಂಬೇಡ್ಕರ್ ಅವರನ್ನ ಕಾನೂನು ಸಚಿವರನ್ನಾಗಿ ಮಾಡಿ ದೇಶ ಕಟ್ಟುವ ಮುಂದಾಳತ್ವ ನೀಡಿತು. ಅವರ ನೇತೃತ್ವದಲ್ಲಿ ಸಂವಿಧಾನವು ಈ ದೇಶಕ್ಕೆ ಕೊಡುಗೆಯಾಗಿ ಸಿಕ್ಕಿತು. ಭೀಮಾ ಬಾಯಿಯವರು ಮಗುವಿಗೆ ಜನ್ಮ ನೀಡಲಿಲ್ಲ. ನಮ್ಮ ರಾಷ್ಟ್ರದ ಹಾಗೂ ಜನರ ಏಳಿಗೆಗೆ ಸಂವಿಧಾನವನ್ನು ಕೊಟ್ಟ ಶಕ್ತಿಗೆ ಜನ್ಮ ಕೊಟ್ಟರು" ಎಂದರು.

2028, 2029 ಕ್ಕೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ

"ನಮಗೆ 136 ಸ್ಥಾನವನ್ನು ನೀಡಿ ಈ ರಾಜ್ಯದ ಆಡಳಿತ ನಡೆಸಲು ಜನ ಅವಕಾಶವನ್ನ ಮಾಡಿಕೊಟ್ಟಿದ್ದಾರೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮೂರು ವರ್ಷ ಕೆಲಸ ಮಾಡಿದ್ದೇವೆ. ಎಲ್ಲರಿಗೂ ಅತ್ಯುತ್ತಮ ಕಾರ್ಯಕ್ರಮ ಕೊಟ್ಟಿದ್ದೇವೆ. ಮುಂದಿನ ಎರಡು ವರ್ಷ ಅಲ್ಲ, 2028,‌ 2029 ರಲ್ಲಿ ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆಗುತ್ತದೆ" ಎಂದರು.

"ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಂದ ಉದ್ಘಾಟನೆ ಮಾಡಿಸಿದ್ದೇವೆ. ಬುದ್ಧ ಬಸವನು ಮನೆಬಿಟ್ಟ ಗಳಿಗೆಯಲ್ಲಿ, ಯೇಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಪೈಗಂಬರವರು ದಿವ್ಯವಾಣಿ ನೀಡಿದ ಗಳಿಗೆಯಲ್ಲಿ, ಭೀಮಾ ಬಾಯಿಯವರು ಅಂಬೇಡ್ಕರ್ ಅವರಿಗೆ ಜನನ ನೀಡಿದ ಗಳಿಗೆಯಲ್ಲಿ, ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ನ ನಾಯಕತ್ವ ವಹಿಸಿದ ಗಳಿಗೆಯಲ್ಲಿ, ಕೆಂಪೇಗೌಡರು ಬೆಂಗಳೂರನ್ನ ಕಟ್ಟಿದ ಗಳಿಗೆಯಲ್ಲಿ ಈ ಕಾರ್ಯಕ್ರಮ ನಡೆದಿದೆ" ಎಂದು ಬಣ್ಣಿಸಿದರು.

"ಮಹಾತ್ಮ ಗಾಂಧೀಜಿಯವರ ಪುತ್ಥಳಿ ಜೊತೆಯಲ್ಲೇ ಇವತ್ತು ಬಾಬಾಸಾಹೇಬರ ಪುತ್ಥಳಿಯನ್ನ ನಾವು ಈ ದೇಶದ ಉದ್ದಗಲಕ್ಕೂ ಇರೋದನ್ನ ಗಮನಿಸಿದ್ದೇವೆ. ನಾನು ಪ್ರತಿ ಬಾರಿ ಹೇಳುತ್ತೇನೆ ಒಂದು ಜಾತಿ ವರ್ಗಕ್ಕೆ ಅಂಬೇಡ್ಕರ್ ಅವರನ್ನ ಸೀಮಿತಗೊಳಿಸಬಾರದು. ಇಡೀ ದೇಶಕ್ಕೆ ಒಂದು ಸಮಾನತೆಯನ್ನ ಕೊಟ್ಟಂತಹ ನಾಯಕರು ಅವರು. ಎಲ್ಲಾ ವರ್ಗಕ್ಕೂ ನಾಯಕರಾಗಿ ಬೆಳಕು ತಂದವರು" ಎಂದರು.

ಜಿಲ್ಲೆಗೆ ಎತ್ತಿನಹೊಳೆ ಹರಿಸಿಯೇ ಹರಿಸುತ್ತೇವೆ

"ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಎರಡು ಸಾವಿರ ಅಡಿ ಕೆಳಗೆ ಹೋಗಿದೆ. ನಮ್ಮ ಸರ್ಕಾರ ಎತ್ತಿನಹೊಳೆಯಿಂದ, ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಕುಡಿಯುವ ನೀರು ತಂದೇ ತರುತ್ತೇವೆ. ಕೆರೆಗಳನ್ನು ತುಂಬಿಸುತ್ತೇವೆ. ನೀರನ್ನ ಈಗಾಗಲೇ ಹೊರಗೆ ತರುವಂತಹ ಶಕ್ತಿ ಭಗವಂತ ನನಗೆ ನೀಡಿದ್ದಾನೆ" ಎಂದರು.

ಅಭಿವೃದ್ಧಿಗೆ ಭೂಮಿ‌ ನೀಡಿದವರ ಕೊಡುಗೆ ಸ್ಮರಣೆಗೆ ವಿಶೇಷ ಕಾರ್ಯಕ್ರಮ

"ಕೆಂಪೇಗೌಡರ ಜಯಂತಿ ಅಂಗವಾಗಿ ಎಸ್ ಎಂ‌ ಕೃಷ್ಣ ರಸ್ತೆಗೆ ಭೂಮಿ ನೀಡಿದ ರೈತರ ಹೆಸರಿರುವ ಗೋಡೆ ನಿರ್ಮಿಸಿ ಗೌರವ ನೀಡಲಾಗಿದೆ. ಮುಂದಿನ ದಿನದಲ್ಲಿ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಈ ಭಾಗದ ಜನರು ಯೋಜನೆಗಳಿಗೆ ಭೂಮಿ ನೀಡಿ ತ್ಯಾಗ ಮಾಡುವಿರೋ ನಿಮ್ಮ ಹೆಸರುಗಳನ್ನು ಶಾಶ್ವತವಾಗಿ ಉಳಿಕೊಳ್ಳಲು ವಿಶೇಷವಾದಂತಹ ಕಾರ್ಯಕ್ರಮವನ್ನು ನಾನು ರೂಪಿಸುತ್ತೇನೆ" ಎಂದರು.

ರಾಜಘಟ್ಟ ಬೌದ್ದ ಕುರುಹುಗಳ ಅಧ್ಯಯನ, ರಕ್ಷಣೆಗೆ ತಂಡ

"ಇಲ್ಲಿನ ಬುದ್ಧನ ಇತಿಹಾಸದ ಬಗ್ಗೆ ರಾಜಘಟ್ಟದಲ್ಲಿ ಅಭಿವೃದ್ಧಿ ಆಗಬೇಕು ಎಂದು ಮನವಿ ಕೊಟ್ಟಿದ್ದಾರೆ. ಇದರ ವಿಚಾರವಾಗಿ ಅಧ್ಯಯನ ಸಮಿತಿ ರಚಿಸಲು ಚಿಂತಿಸಲಾಗುವುದು. ರಾಜಘಟ್ಟದಲ್ಲಿ ಬೌದ್ಧ ಸಂಸ್ಕೃತಿಯ ಅಮೂಲ್ಯವಾದಂತಹ ಸಾವಿರಾರು ವರ್ಷಗಳ ಪುರಾತನ ಅವಶೇಷಗಳು ಬೆಳಕಿಗೆ ಬಂದಿವೆ. ಇದರ ಅಧ್ಯಯನಕ್ಕೆ ಸೂಚಿಸುತ್ತೇನೆ. ಅಧಿಕಾರಿಗಳ ತಂಡಗಳನ್ನು ರಚಿಸಿ ಈ ಭಾಗದಲ್ಲಿನ ಬೌದ್ದ ಸಂಸ್ಕೃತಿ, ಆ ಪರಂಪರೆಯನ್ನು ಉಳಿಸುವಂತಹ ಕೆಲಸ ಮಾಡುತ್ತೇವೆ" ಎಂದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X