Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಮಾನತೆ, ಭ್ರಾತೃತ್ವ ನಮ್ಮ ಜೀವನದ...

ಸಮಾನತೆ, ಭ್ರಾತೃತ್ವ ನಮ್ಮ ಜೀವನದ ಭಾಗವಾಗಬೇಕು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Aug 2026 7:29 PM IST
share
ಸಮಾನತೆ, ಭ್ರಾತೃತ್ವ ನಮ್ಮ ಜೀವನದ ಭಾಗವಾಗಬೇಕು : ಡಿ.ಕೆ.ಶಿವಕುಮಾರ್

ಬೆಂಗಳೂರು : ಮಾನವೀಯತೆಯಿಂದ ಬದುಕುವುದರ ಜೊತೆಗೆ ಸಮಾನತೆ ಮತ್ತು ಭ್ರಾತೃತ್ವ ನಮ್ಮ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದಿಲ್ಲಿ ಕರೆ ನೀಡಿದ್ದಾರೆ.

ರವಿವಾರ ಇಲ್ಲಿನ ಎಂ.ಜಿ. ರೈಲ್ವೆ ಕಾಲನಿಯ ಅಮಲೋದ್ಭವ ಮಾತೆಯ ದೇವಾಲಯದ(ಇಮ್ಯಾಕ್ಯುಲೇಟ್ ಕಾನ್ಸೆಪ್ಶನ್ ಚರ್ಚ್)125ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿವಿಧ ಧರ್ಮಗಳ ಆಚರಣೆಗಳು ಭಕ್ತಿಯ ಮನೋಭಾವದಿಂದ ಜನರ ಶಾಂತಿ-ನೆಮ್ಮದಿಗಾಗಿ ಹಾಗೂ ಸಮಾಜ ಸೇವೆ ಮತ್ತು ಆತ್ಮಶುದ್ಧಿಗಾಗಿ ಆಚರಿಸಲಾಗುತ್ತದೆ ಎಂದರು.

ಹಿಂದೂ ಧರ್ಮದಲ್ಲಿ ದೀಪಬೆಳಗಿದರೆ, ಕ್ರೈಸ್ತ ಧರ್ಮದಲ್ಲಿ ಮೊಂಬತ್ತಿಯನ್ನು ಬೆಳಗುತ್ತಾರೆ. ಕ್ರೈಸ್ತ ಧರ್ಮ, ಹಿಂದೂ ಧರ್ಮ ಸೇರಿದಂತೆ ವಿವಿಧ ಧರ್ಮಗಳು ತನ್ನದೇ ಆದ ಆಚರಣೆಗಳನ್ನು, ಪೂಜಾವಿಧಾನಗಳನ್ನು ಹೊಂದಿವೆ. ಈ ಚರ್ಚ್‍ನಲ್ಲಿರುವಂತೆಯೇ ಹಿಂದೂ ದೇವಾಲಯಗಳಲ್ಲಿ ಧ್ವಜಸ್ತಂಭವಿರುತ್ತದೆ. ಈ ಕಾರ್ಯಕ್ರಮದಲ್ಲಿ ನುಡಿಸಲಾದ ವಾದನದಲ್ಲಿ ಸುಮಧುರ ನಾದ ಹೊಮ್ಮಿದೆ. ಅಂತೆಯೇ ಬಿದಿರಿನ ಕೊಳಲು ವಾದನದಿಂದ ಸುಮಧುರ ನಾದ ಹೊಮ್ಮುತ್ತದೆ. ಅಂತೆಯೇ ಭಗವಾನ್ ಕೃಷ್ಣನ ಶಂಖನಾದಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಅವರು ತಿಳಿಸಿದರು.

ಪ್ರಕೃತಿಯ ನಿಯಮದ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ. ನಾವು ಯಾವ ಧರ್ಮ-ಜಾತಿಯಲ್ಲಿ ಜನಿಸುತ್ತೇವೆ ಎಂದು ಯಾರು ತಿಳಿದಿರುವುದಿಲ್ಲ. ಯಾವುದೇ ಧರ್ಮ ಇತರೆ ಧರ್ಮದವರಿಗೆ ತೊಂದರೆ ಕೊಡುವುದನ್ನು ಬೋಧಿಸುವುದಿಲ್ಲ. ಕ್ರಿಶ್ಚಿಯನ್ ಧರ್ಮವನ್ನು ಟೀಕಿಸುವವರು, ಕ್ರಿಶ್ಚಿಯನ್ ಧರ್ಮದ ಆಸ್ಪತ್ರೆಗಳು, ಶಾಲಾಕಾಲೇಜುಗಳ ಕಡೆಗೆ ಒಲವು ತೋರುತ್ತಾರೆ. ಟೀಕಿಸುವ ಜನರಿಗೆ ಲಾಭ ದೊರೆಯುವಾಗ ಯಾವ ಧರ್ಮವೂ ಅಡ್ಡಿ ಬರುವುದಿಲ್ಲ. ಮಾನವೀಯತೆಯೇ ಪರಮ ಧರ್ಮ ಎಂದು ಭಾವಿಸಿ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡುವುದು ಅಗತ್ಯ ಎಂದು ಅವರು ತಿಳಸಿದರು.

ಚರ್ಚ್ ಕಳೆದ 125 ವರ್ಷಗಳಿಂದ ಪರಿಶುದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ಈ ಸಂಸ್ಥೆಯಡಿ ವ್ಯಾಸಂಗ ಪಡೆದ ವಿದ್ಯಾರ್ಥಿಗಳು ದೇಶಕ್ಕೆ ಆಸ್ತಿಯಾಗಿ ಉತ್ತಮ ಸಾಧನೆಗಳನ್ನು ಮಾಡುತ್ತಿದ್ದಾರೆ. ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕ್ಷೇತ್ರದ ಜನರ ಬೆಂಬಲವಿದೆ. ಅವರು ಈ ಸಂಸ್ಥೆಯ ಅಭಿವೃದ್ಧಿಗೆ ಸರಕಾರದ ವತಿಯಿಂದ ಹೆಚ್ಚಿನ ಸಹಕಾರದ ಬೇಡಿಕೆಯಿರಿಸಿದ್ದು, ಈ ಬಗ್ಗೆ ಸಧ್ಯದಲ್ಲಿಯೇ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಬೆಂಗಳೂರು ಆರ್ಚ್ ಬಿಷಪ್ ಪೀಟರ್ ಮಚಾದೋ, ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್, ಫಾದರ್ ಅಮಲ್ ರಾಜ್ ಕ್ರಿಷ್ಟಿನ್, ಜಾಕಬ್ ಯಕ್ಕಾಲಂ, ಆರೋಗ್ಯಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ನಾನು ಕ್ರೈಸ್ತ ಧರ್ಮದ ಶಾಲೆಗಳಲ್ಲಿ ವ್ಯಾಸಂಗ ಮಾಡಿದ್ದು, ಎಲ್ಲಿಯೂ ನಮ್ಮ ಧರ್ಮವನ್ನು ಬದಲಿಸಿಕೊಳ್ಳಲು ಒತ್ತಾಯ ಹೇರಲಿಲ್ಲ. ಮರಕ್ಕೆ ಬೇರುಗಳು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆಯೂ ಮುಖ್ಯ. ಪ್ರತಿಯೊಬ್ಬರಿಗೂ ತಮ್ಮದೇ ಆದ ನಂಬಿಕೆಗಳು, ತತ್ವಗಳ ಮೇಲೆ ವಿಶ್ವಾಸವಿದ್ದರೂ, ಪ್ರಕೃತಿಯೊಂದಿಗೆ ಬಾಳುವ ಗುಣವನ್ನು ಬೆಳೆಸಿಕೊಳ್ಳಬೇಕು. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸಗಳಿಂದ ಬದುಕಬೇಕು. ನಮ್ಮ ಕಲೆ ಮತ್ತು ಸಂಸ್ಕೃತಿಗೆ ಯಾವುದೇ ಜಾತಿಯಿಲ್ಲ.

-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X