Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ...

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ : ಸಿಎಂ ಡಿ.ಕೆ.ಶಿವಕುಮಾರ್

"ಕೆಪಿಎಸ್‌ಸಿ ಹಗರಣ; ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ"

ವಾರ್ತಾಭಾರತಿವಾರ್ತಾಭಾರತಿ31 Aug 2026 5:51 PM IST
share
ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : "ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ ಬಂಧನವಾಗುತ್ತಿದ್ದಾರೆ ಎಂದು ಕೇಳಿದಾಗ, "ಕುಮಾರಸ್ವಾಮಿ ಅವರು ನಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಕರ್ತವ್ಯ ಅವರು ಮಾಡಲಿ. ಅವರು ಏನು ಆರೋಪ ಮಾಡುತ್ತಾರೋ ಮಾಡಲಿ" ಎಂದರು.

ಅಲ್ಲೋಲ ಕಲ್ಲೋಲವಾಗುವಂತಹ ದಾಖಲೆ ಬಿಡುಗಡೆ ಮಾಡುತ್ತೇನೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಬಹಳ ಸಂತೋಷ" ಎಂದರು.

ಬಿಜೆಪಿ ಪಾದಯಾತ್ರೆ ಬಗ್ಗೆ ಕೇಳಿದಾಗ, "ಅವರು ಪಾದಯಾತ್ರೆ ಮಾಡಲಿ, ಆನಂತರ ನಮ್ಮದು ಯಾವ ಯಾತ್ರೆ ನಡೆಯುತ್ತದೆ ಎಂದು ಹೇಳುವೆ. ನಾವು ರಾಜಕಾರಣಿಗಳಲ್ಲವೇ? ಅವರು ಶುರು ಮಾಡಲಿ. ನಾವು ಅವರಿಗೆ ಗೌರವ ಕೊಟ್ಟು ಅಧಿವೇಶನ ನಡೆಸಿದ್ದೆವು. ಯಾವುದೇ ವಿಚಾರ ಚರ್ಚೆ ಮಾಡಲಿಲ್ಲ. ಈಗ ಕಸ್ತೂರಿ ರಂಗನ್ ವರದಿ ವಿಚಾರವಾಗಿ, ರೈತರ ಹಿತ ವಿಚಾರವಾಗಿ ಚರ್ಚೆ ಮಾಡುವುದಿದೆ. ಅದಕ್ಕಾಗಿ ಶಾಸಕರ ಅಭಿಪ್ರಾಯ ಕೇಳಲಾಗುವುದು" ಎಂದು ತಿಳಿಸಿದರು.

ಬಿಜೆಪಿಯಲ್ಲಿ ಆಂತರಿಕ ಕಲಹ

ಕೆಪಿಎಸ್ ಸಿ ಹಗರಣದಲ್ಲಿ ಬಿಜೆಪಿ ನಾಯಕರ ಬಂಧನ ಬಗ್ಗೆ ಕೇಳಿದಾಗ, "ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಮಾಹಿತಿ ಪಡೆಯುತ್ತೇನೆ. ಬಿಜೆಪಿಯಲ್ಲಿ ಆಂತರಿಕ ಕಲಹ ನಡೆಯುತ್ತಿದೆ. ಕೆಪಿಎಸ್ ಸಿಗೆ ನೇಮಕ ಮಾಡಿದವರು ಯಾರು? ಸಂಪೂರ್ಣ ವರದಿ ಬರುವವರೆಗೂ ನಾನು ಸಂಪೂರ್ಣ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ.ಯಾರು ಏನೇನು ಮಾತನಾಡುತ್ತಾರೋ ಮಾತಾಡಲಿ. ಅವರಿಗೆ ಕಾಲವೇ ಉತ್ತರಿಸುತ್ತದೆ" ಎಂದು ತಿಳಿಸಿದರು.

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ

ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ ಭೂಮಿ ಗ್ಯಾರಂಟಿ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಸರ್ಕಾರಕ್ಕಾಗಿ ತಮ್ಮ ಆಸ್ತಿಯನ್ನು ತ್ಯಾಗ ಮಾಡುವ ಎಲ್ಲರಿಗೂ ಇದು ಅನ್ವಯವಾಗಲಿದೆ. ಅವರ ಹೆಸರುಗಳನ್ನು ಶಾಶ್ವತವಾಗಿ ದಾಖಲಿಸಬೇಕು. ಅವರಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ಅವರು ಹೊಂದಿರುವ ಭೂಮಿಯಲ್ಲಿಯೇ ಅವರಿಗೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಬೇಕು. ಇದು ರಾಜ್ಯದ ಎಲ್ಲಾ ಭೂ ಮಾಲೀಕರಿಗೂ ಅನ್ವಯವಾಗಬೇಕು" ಎಂದರು.

"ಫಲಾನುಭವಿಗಳ ಭಾವಚಿತ್ರ ಸೇರಿದಂತೆ ಎಲ್ಲಾ ಅಗತ್ಯ ವಿವರಗಳನ್ನು ಒಳಗೊಂಡ ಸೂಕ್ತ ದಾಖಲೆಗಳನ್ನು ನೀಡಲು ನಾವು ವ್ಯವಸ್ಥೆ ಮಾಡುತ್ತಿದ್ದೇವೆ. ದಾಖಲೆಗಳು ಎಂದರೆ ಎಲ್ಲವೂ ಕಾನೂನುಬದ್ಧವಾಗಿ ಮಾನ್ಯವಾಗಿರಬೇಕು ಎಂಬುದು ನನ್ನ ಅರ್ಥ. ಬಿ ಖಾತಾದಿಂದ ಎ ಖಾತಾಗೆ ಪರಿವರ್ತಿಸುವಾಗಲೂ ಕಾನೂನು ಬದ್ಧತೆ ಇರಬೇಕು. ದಾಖಲೆಗಳು ಕಾನೂನುಬದ್ಧವಾಗಿರಬೇಕು. ಬೋಗಸ್ ನೋಂದಣಿ ಇದ್ದರೆ ಮಾಡಲು ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದರು.

"ಕಾನೂನಿನ ಚೌಕಟ್ಟಿನೊಳಗೆ ಅವರಿಗೆ ಸೂಕ್ತ ದಾಖಲೆಗಳನ್ನು ಒದಗಿಸಲು ನಾವು ವ್ಯವಸ್ಥೆ ಮಾಡಿದ್ದೇವೆ. ಏಕೆಂದರೆ ಭವಿಷ್ಯದಲ್ಲಿ ಅವರ ಆಸ್ತಿ ವರ್ಗಾವಣೆ ಮಾಡಬೇಕಾಗಬಹುದು, ಸಾಲ ಪಡೆಯಬೇಕಾಗಬಹುದು ಅಥವಾ ಕುಟುಂಬದ ಸದಸ್ಯರ ನಡುವೆ ಆಸ್ತಿಯನ್ನು ಹಂಚಿಕೆ ಮಾಡಬೇಕಾಗಬಹುದು. ಇಂತಹ ಹಲವು ಸಾಧ್ಯತೆಗಳಿವೆ. ಸರ್ಕಾರವು ಅವರ ಹಕ್ಕುಗಳು ಮತ್ತು ಆಸ್ತಿಗಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು" ಎಂದರು.

"ಕೃಷ್ಣ ಬೈರೇಗೌಡ ಅವರು ಕಂದಾಯ ಸಚಿವರಾಗಿದ್ದಾಗ, ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಆರಂಭವಾಗಿ ಈ ಸರ್ಕಾರ ಮುಂದುವರಿಸಿಕೊಂಡು ಹೋಗುತ್ತಿದೆ" ಎಂದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X