ಯುಪಿಐ ಮೇಲಿನ ತೆರಿಗೆ ವಿರುದ್ಧ ಹೋರಾಟ ಮಾಡಬೇಕು : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಯುಪಿಐ ವಹಿವಾಟಿನ ಮೇಲೆ ತೆರಿಗೆ ವಿಧಿಸಿರುವ ಕೇಂದ್ರ ಸರಕಾರದ ವಿರುದ್ಧ ಇಡೀ ದೇಶ ಹೋರಾಟ ನಡೆಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಕರೆ ನೀಡಿದ್ದಾರೆ.
ಬುಧವಾರ ಇಲ್ಲಿನ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಐ ವಹಿವಾಟಿನ ಮೇಲೆ ತೆರಿಗೆ ಹೇರಿರುವುದು ಕೇವಲ ಕಾಂಗ್ರೆಸ್ ಪಕ್ಷದ ವಿಚಾರವಲ್ಲ. ಇಡೀ ದೇಶದ ಸಮಸ್ಯೆಯಾಗಿದೆ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷವಾಗಿದ್ದು, ಜನಸಾಮಾನ್ಯರ ಹಿತ ಕಾಯಲು ಹೋರಾಟ ಮಾಡಲಿದೆ ಎಂದರು.
ಯುಪಿಐ ವಹಿವಾಟಿನ ಮೇಲೆ ತೆರಿಗೆ ಹೇರಿರುವ ಕೇಂದ್ರ ಸರಕಾರದ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ದೇಶದ ಜನ ಸಾಮಾನ್ಯರ ಪರವಾಗಿ ಮಾಧ್ಯಮಗೋಷ್ಠಿ ನಡೆಸಿ ಜನರಿಗೆ ಸಂದೇಶ ರವಾನಿಸಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.
Next Story




