Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನ ಮೂಲಸೌಕರ್ಯಕ್ಕೆ ಹೆಚ್ಚಿನ...

ಬೆಂಗಳೂರಿನ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Oct 2026 11:03 PM IST
share
ಬೆಂಗಳೂರಿನ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು 40 ಕಿ.ಮೀ ಉದ್ದದ ದ್ವಿಪಥ ಸುರಂಗ ಮಾರ್ಗ, 120 ಕಿ.ಮೀ ಉದ್ದದ ಎತ್ತರಿಸಿದ ಕಾರಿಡಾರ್, 1500 ಕಿ.ಮೀ ಆರ್ಟಿಲರಿ ಮತ್ತು ಸಬ್ ಆರ್ಟಿಲರಿ ರಸ್ತೆಗಳ ಉನ್ನತೀಕರಣ ಕಾರ್ಯ ಕೈಗೊಳ್ಳಲಾಗಿದ್ದು, ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ನಗರದ ಸಿಎಂ ಅಧಿಕೃತ ನಿವಾಸ ಕೃಷ್ಣಾ ದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ದೇಶದ ಬೇರೆ ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನ ಜನಸಂಖ್ಯಾ ದರ ಮತ್ತು ವಾಹನಗಳ ಹೆಚ್ಚಳ ದರ ಹೆಚ್ಚಿದೆ. ಆದರೆ ರಸ್ತೆಗಳ ಸಾಮಥ್ರ್ಯ ಬೇರೆ ನಗರಗಳಿಗಿಂತ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇವೆ. ಸಂಚಾರ ವ್ಯವಸ್ಥೆ ಸುಗಮಗೊಳಿಸಲು 40 ಕಿ.ಮೀ ದ್ವಿಪಥ ಸುರಂಗ ನಿರ್ಮಾಣ, ಹೆಬ್ಬಾಳದಲ್ಲಿ 2ಕಿಮೀ ಅಲ್ಪದೂರದ ಸುರಂಗ ಕಾಮಗಾರಿ ಕೈಗೊಂಡಿದ್ದೇವೆ. ಇದರಲ್ಲಿ 16.5 ಕಿಮೀ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣಕ್ಕೆ 17,780 ಕೋಟಿ ರೂ. ವೆಚ್ಚವಾಗಲಿದ್ದು, ಸರಕಾರ ಇದರಲ್ಲಿ 7ಸಾವಿರ ಕೋಟಿ ರೂ. ಬಂಡವಾಳ ತೊಡಗಿಸಲಿದೆ. 21 ಕಿ.ಮೀ ಉದ್ದದ ಪೂರ್ವ-ಪಶ್ಚಿಮ ಕಾರಿಡಾರ್ನಲ್ಲಿ ಎರಡು ಆಗಮನ ದ್ವಾರ ಇರಲಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಮಾನದಂಡದ ಪ್ರಕಾರ 23,165 ಕೋಟಿ ಬಂಡವಾಳ ವೆಚ್ಚದಲ್ಲಿ 120 ಕಿಮೀ ಎತ್ತರಿಸಿದ ಕಾರಿಡಾರ್ ನಿರ್ಮಾಣ ಯೋಜನೆ ರೂಪಿಸಲಾಗಿದೆ. ಇದರಲ್ಲಿ ನಾಲ್ಕು ಕೆಟಗರಿ ಮಾಡಲಾಗಿದ್ದು, 10 ಕಿಮೀ ಕಡಿಮೆ ಇರುವ ಕಾರಿಡಾರ್ಗಳಲ್ಲಿ ಟೋಲ್ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ಸುಮಾರು 500 ಕಿ.ಮೀ ಹೊಸ ರಸ್ತೆ ಸಂಪರ್ಕ ಕೈಗೊಳ್ಳಲಾಗುತ್ತಿದ್ದು, ಇದರಲ್ಲಿ ಚಾನೆಲ್ ಬದಿಯಲ್ಲಿ 300ಕಿಮೀ ಬಫರ್ ರಸ್ತೆ ನಿರ್ಮಾಣ, 68 ಕಿಮೀ ಬುಸಿನೆಸ್ ಕಾರಿಡಾರ್ ನಿರ್ಮಾಣ ಸೇರಿದೆ. 17 ಕಿಮೀ ಹೊರವರ್ತುಲ ರಸ್ತೆಯ ಮರು ಅಭಿವೃದ್ಧಿ, 1500 ಕಿಮೀ ಆರ್ಟಿಲರಿ ಮತ್ತು ಸಬ್ ಆರ್ಟಿಲರಿ ರಸ್ತೆಗಳ ಉನ್ನತೀಕರಣ ಕಾರ್ಯವನ್ನು ಕೈಗೊಳ್ಳಲಾಗಿದೆ. ಸಧ್ಯದಲ್ಲಿಯೇ ಹೊಸದಾಗಿ ನಗರದ ಹೊರ ವಲಯದಲ್ಲಿ 18 ಕಿ.ಮೀ ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.

ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ನಮ್ಮ ಸರಕಾರ ಬದ್ಧವಾಗಿದ್ದು, ಇದಕ್ಕಾಗಿ ಯಾವುದೇ ತಾರತಮ್ಯವಿಲ್ಲದೆ ಎಲ್ಲ ಶಾಸಕರ ಕ್ಷೇತ್ರಗಳಿಗೆ ಅಗತ್ಯ ಅನುದಾನವನ್ನು ಒದಗಿಸಲಾಗಿದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಎಲ್ಲ ಶಾಸಕರ ಕ್ಷೇತ್ರಗಳಿಗೆ ಸಾಕಷ್ಟು ಅನುದಾನವನ್ನು ಒದಗಿಸಲಾಗಿದೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ತುರ್ತಾಗಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿದರೆ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಕೃಷ್ಣ ಭೈರೇಗೌಡ, ರಿಝ್ವಾನ್ ಆರ್ಶದ್, ಶಾಸಕರಾದ ದಿನೇಶ್ ಗುಂಡೂರಾವ್, ಶ್ರೀನಿವಾಸ್, ಎಸ್.ಟಿ. ಸೋಮಶೇಖರ್, ಮಂಜುಳಾ ಅರವಿಂದ್ ಲಿಂಬಾವಳಿ, ರಾಜ್ಯ ಸರಕಾರದ ಅಪರ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X