ಇಂದು ಸಿಎಂ ಡಿ.ಕೆ. ಶಿವಕುಮಾರ್ ದಿಲ್ಲಿಗೆ: ಕೇಂದ್ರ ಸಚಿವರೊಂದಿಗೆ ಮಾತುಕತೆ

ಬೆಂಗಳೂರು, ಜು.15: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜು.15) ಹೊಸದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಪರಾಹ್ನ 2ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಮುಖ್ಯಮಂತ್ರಿ ಸಂಜೆ 4:45ಕ್ಕೆ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಮುಖ್ಯಂತ್ರಿಯವರು ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರಕಾರದ ಜಂಟಿ ಕಾರ್ಯದರ್ಶಿ ಬಿ.ಎಸ್. ಶ್ರೀಧರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story




