Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ...

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 March 2025 8:40 PM IST
share
ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಆಶಿಸಿದರು.

ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಇವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ವಿವರಿಸಿದರು.

ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದರು.

ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X