Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಹಾಲಿನ ದರ ಏರಿಕೆ’ ಸಂಪುಟ ಸಭೆಯಲ್ಲಿ...

‘ಹಾಲಿನ ದರ ಏರಿಕೆ’ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ24 March 2025 8:12 PM IST
share
‘ಹಾಲಿನ ದರ ಏರಿಕೆ’ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಏರಿಕೆ ಕುರಿತು ಮುಂದಿಟ್ಟ ಪ್ರಸ್ತಾವನೆಗೆ ಸಹಮತ ವ್ಯಕ್ತಪಡಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಚಾರದ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕವಷ್ಟೇ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸೋಮವಾರ ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷ, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಅವರು, ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಹೇಳಿದರು.

ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹಿಸಿದ ಮುಖ್ಯಮಂತ್ರಿ, ಹಾಲಿನ ದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರಕಾರದ ದೃಢ ನಿಲುವು ಎಂದು ಸ್ಪಷ್ಟಪಡಿಸಿದರು.

ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು. ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು ಶೇ.2.5ರಷ್ಟು ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರಕಾರದ ನಿಲುವು ಎಂದು ಮುಖ್ಯಮಂತ್ರಿ ಹೇಳಿದರು.

ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿ ರೂ.ಗಳಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸುವಂತೆ ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಲಿಲ್ಲ.

ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್, ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X