Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ʼಗ್ರೇಟರ್ ಮೈಸೂರುʼ ಆಗಬೇಕು; ಆದರೆ ನಗರದ...

ʼಗ್ರೇಟರ್ ಮೈಸೂರುʼ ಆಗಬೇಕು; ಆದರೆ ನಗರದ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ3 Nov 2025 6:11 PM IST
share
ʼಗ್ರೇಟರ್ ಮೈಸೂರುʼ ಆಗಬೇಕು; ಆದರೆ ನಗರದ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು : ಸಿಎಂ ಸಿದ್ದರಾಮಯ್ಯ

ಮೈಸೂರು : ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ ʼಗ್ರೇಟರ್ ಮೈಸೂರುʼ ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು.

ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ ಎಂದು ಜಿಲ್ಲಾಡಳಿತಕ್ಕೆ ಸಿಎಂ ಸೂಚನೆ ನೀಡಿದರು.

ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು :

► ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು.

► ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ.

► ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು.

► ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ‌ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ.

► ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ‌ ತಂತ್ರಜ್ಞಾನದ ನೆರವು ಪಡೆಯಬೇಕು.

► ಬಡಾವಣೆಗಳ ನಿರ್ಮಾಣದಲ್ಲಿ ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಜೊತೆಗೆ ಪಾರ್ಕ್ ಗಳು ವ್ಯವಸ್ಥಿತವಾಗಿರಬೇಕು.

► ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ ಯೋಜನೆ ಮಾಡಿಕೊಳ್ಳಿ.

► ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಿ.

► ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು.

► ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X