‘ಬಿಹಾರ ಚುನಾವಣೆ’ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಹಾರ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜನರು ಕೊಟ್ಟಿರುವ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಪ್ರಥಮ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಬಿಹಾರದಲ್ಲಿ ಕಾಂಗ್ರೆಸ್ ಹಾಗೂ ಆರ್‍ಜೆಡಿ ನೇತೃತ್ವದ ಮಹಾಘಟಬಂಧನ್ ಹಿನ್ನಡೆ ಅನುಭವಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡಿರುವ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು.
Next Story





