Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೆ.13 ರಂದು ʼಮಹಿಳಾ ನೌಕರರ ದಿನಾಚರಣೆʼ...

ಸೆ.13 ರಂದು ʼಮಹಿಳಾ ನೌಕರರ ದಿನಾಚರಣೆʼ ಘೋಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ವಾರ್ತಾಭಾರತಿವಾರ್ತಾಭಾರತಿ4 Dec 2025 5:00 PM IST
share
ಸೆ.13 ರಂದು ʼಮಹಿಳಾ ನೌಕರರ ದಿನಾಚರಣೆʼ ಘೋಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಸರಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮ

ಬೆಂಗಳೂರು : ಸರಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು.

ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು, ವತಿಯಿಂದ ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹಿಳಾ ನೌಕರರಿಗೆ ಋತುಚಕ್ರ ರಜೆಯನ್ನು ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಸರಕಾರ ನಿರ್ಧರಿಸಿದೆ. ಸಂಘದ ಕಚೇರಿಯ ಕಾರ್ಯಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಚರ್ಚಿಸಲಾಗಿದೆ. ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡಲಾಗುವುದು ಎಂದರು.

ಲಿಂಗತಾರತಮ್ಯ ಹೋಗಲಾಡಿಸಲು ಸರಕಾರ ಬದ್ಧ :

ಸರಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರು ಪುರುಷರಿಗೆ ಸರಿಸಮನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಲಿಂಗತಾರತಮ್ಯ ಹೋಗಲಾಡಿಸಲು ಸರಕಾರ ಬದ್ಧವಾಗಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ ಬದ್ಧತೆ ನಮ್ಮ ಸರಕಾರದ್ದಾಗಿದೆ ಎಂದರು.

ಹಿಂದಿನ ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಸಂವಿಧಾನ ಜಾರಿಯ ನಂತರ ಎಲ್ಲರಿಗೂ ಶಿಕ್ಷಣ ಸೇರಿದಂತೆ ಸಮಾನ ಹಕ್ಕುಗಳನ್ನು ನೀಡಲಾಯಿತು. ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಸಾಕ್ಷರತೆಯ ಪ್ರಮಾಣ 10 ರಿಂದ ಶೇ.12 ರಷ್ಟಿತ್ತು. ಇಂದು ಈ ಪ್ರತಿಶತ ಸುಮಾರು 78 ಕ್ಕೆ ಏರಿದೆ. ಮಹಿಳೆಯರು ತಮ್ಮ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರಲ್ಲಿ ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಅಂಧಶ್ರದ್ಧೆಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು :

ಮಹಿಳೆಯರ ಸಬಲೀಕರಣವಾಗಬೇಕು ಎಂಬ ಉದ್ದೇಶದಿಂದ 3.5 ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತವಾಗಿ ಓಡಾಡುತ್ತಿದ್ದಾರೆ. ಇದನ್ನು ಸಾಮಾಜಿಕ ಬಂಡವಾಳ ಎಂದು ಕರೆಯುತ್ತೇವೆ. ಉಳಿತಾಯವಾಗುವ ಹಣವನ್ನು ಮಕ್ಕಳ ಶಿಕ್ಷಣ ಮುಂತಾದವುಕ್ಕೆ ಬಳಸಿಕೊಳ್ಳಲಾಗುತ್ತದೆ. ಆರನೇ ಮತ್ತು ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು ನಮ್ಮ ಸರಕಾರವೇ ಎಂದ ಮುಖ್ಯಮಂತ್ರಿಗಳು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಸ್ವಾತಂತ್ರ್ಯ ದೊರಕಿದ್ದು ಯಶಸ್ವಿಯಾಗಲು ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ಡಾ: ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಸರಕಾರದ ಕೆಲಸಗಳಲ್ಲಿ ದಕ್ಷತೆ ಹೆಚ್ಚಾಗಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X