Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭ್ರಷ್ಟಾಚಾರದ 'ಪಾಪದ ಗಂಟು' ಬಿಜೆಪಿ...

ಭ್ರಷ್ಟಾಚಾರದ 'ಪಾಪದ ಗಂಟು' ಬಿಜೆಪಿ ಸರಕಾರದ್ದೇ, ನಮ್ಮದಲ್ಲ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Dec 2025 9:31 PM IST
share
ಭ್ರಷ್ಟಾಚಾರದ ಪಾಪದ ಗಂಟು ಬಿಜೆಪಿ ಸರಕಾರದ್ದೇ, ನಮ್ಮದಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ʼಆರ್.ಅಶೋಕ್ ಅವರು ಉಪ ಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಆಡಳಿತದಲ್ಲಿ ಇತ್ತು ಎಂದು ಅವರು ಉಲ್ಲೀಖಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲದರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು. ಪ್ರತಿ ಇಲಾಖೆಯಲ್ಲಿ ಕನಿಷ್ಠ 40% ಕಮಿಷನ್ ಚಾಲ್ತಿಯಲ್ಲಿ ಇತ್ತು. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವವರು ಅಂದಿನ ಸಚಿವ ಈಶ್ವರಪ್ಪನವರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು.

ನೀರಾವರಿ ಇಲಾಖೆಯ ಭದ್ರಾ ಮೇಲ್ದಂಡೆ ಹಾಗೂ ಕಾವೇರಿ ನೀರಾವರಿ ನಿಗಮದಲ್ಲಿ ಭಾರೀ ಅಕ್ರಮ ನಡೆದಿದ್ದು, ಸುಮಾರು 20,000 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಸ್ವತಃ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ಇಂದಿನ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ವಿರುದ್ಧ ನೇರಾನೇರ ಆರೋಪ ಮಾಡಿದ್ದರು. ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ಮಾಡಿ ನಿಮ್ಮ ಹಲವು ಬಂಧು ಮಿತ್ರರು ಜೈಲು ಸೇರಿ ಬಂದಿದ್ದಾರೆ. ಇವೆಲ್ಲಾ ಮರೆತು ಹೋಯಿತೇ? ಹೀಗೆ ಬಿಜೆಪಿ ಕಾಲದ ಹಗರಣಗಳನ್ನು ಪಟ್ಟಿಮಾಡುತ್ತಾ ಹೋದರೆ ಒಂದು ಮಹಾಗ್ರಂಥವನ್ನೇ ಬರೆಯಬಹುದು ಎಂದು ಲೇವಡಿ ಮಾಡಿದ್ದಾರೆ.

ಇಂದು "ನ ಖಾವೂಂಗಾ, ನ ಖಾನೆದೂಂಗ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ‌ ಆಡಳಿತದಲ್ಲಿ ಭಾರತ ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿದೆ. ಇದಕ್ಕೆ ಟ್ರಾನ್ಸ್‌ಪರೆಸಿ ಇಂಟರ್ನ್ಯಾಷನಲ್ ನವರು ಬಿಡುಗಡೆ ಮಾಡಿರುವ ಜಾಗತಿಕ ಭ್ರಷ್ಟಾಚಾರಯುಕ್ತ ದೇಶಗಳ ಪಟ್ಟಿಯಲ್ಲಿ ಭಾರತ 96ನೇ ಸ್ಥಾನದಲ್ಲಿ ಇರುವುದು ಸಾಕ್ಷಿ. ಮೊದಲು ಆರ್.ಅಶೋಕ್ ಅವರು ತಮ್ಮ ಪ್ರಧಾನ ಸೇವಕರ ಬಳಿ ಭಾರತದ ಈ ದಯನೀಯ ಸ್ಥಿತಿಗೆ ಕಾರಣವೇನು ಎಂಬ ಪ್ರಶ್ನೆಯನ್ನೆತ್ತಲಿ.

ಬಿ.ವೀರಪ್ಪನವರ ಮಾತುಗಳನ್ನು ನಮ್ಮ ಸರಕಾರಕ್ಕೆ ಅನ್ವಯಿಸಿ ಹೇಳುವ ಆರ್.ಅಶೋಕ್ ಅವರ ಮತಿಗೇಡಿತನಕ್ಕೆ ಏನೆನ್ನಬೇಕು? ನಮ್ಮ ಸರಕಾರದಲ್ಲಿ ನೇಮಕಾತಿಯಿಂದ ಹಿಡಿದು ವರ್ಗಾವಣೆಯ ವರೆಗೆ ಎಲ್ಲವನ್ನೂ ಪಾರದರ್ಶಕವಾಗಿಸುವ, ಯಾವುದೇ ರೀತಿಯ ಹಣ, ಅಧಿಕಾರದ ದುರ್ಬಳಕೆಯಾಗದಂತೆ ತಡೆಯುವ ಪ್ರಯತ್ನ ಜಾರಿಯಲ್ಲಿದೆ. ಆರ್.ಅಶೋಕ್ ಅವರೇ, ನೀವು ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎರಡೂವರೆ ವರ್ಷದಲ್ಲಿ ಸ್ವಚ್ಚ ಮಾಡುವುದು ಅಸಾಧ್ಯ. ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದಿದ್ದಾರೆ.

ನ್ಯಾ.ವೀರಪ್ಪ ಉಲ್ಲೇಖಿಸಿದ ವರದಿ ನಿಮ್ಮ ಸರಕಾರದ ಅವಧಿಯದ್ದು: ಆರ್.ಅಶೋಕ್

ನ್ಯಾಯಮೂರ್ತಿ ಬಿ.ವೀರಪ್ಪ ಉಲ್ಲೇಖಿಸಿರುವ ಟ್ರಾನ್ಸ್‍ಪರೆನ್ಸಿ ಇಂಟರ್‌ ನ್ಯಾಶನಲ್ ವರದಿಯು 2019ರ ನವೆಂಬರ್‌ ನಲ್ಲಿ ಬಿಡುಗಡೆಯಾಗಿತ್ತು, ಆದರೆ ಅದು ಹಿಂದಿನ ವರ್ಷದ ಭ್ರಷ್ಟಾಚಾರದ ಕುರಿತು ನಡೆಸಿದ ಸಮೀಕ್ಷೆ ಆಗಿತ್ತು. ಇದರ ಅರ್ಥ, ಆ ವರದಿಯ ದತ್ತಾಂಶವು 2018ರ ಅವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಶುಕ್ರವಾರ ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, 2018ರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದವರು ಯಾರು? ಸಿದ್ದರಾಮಯ್ಯ ಅವರೇ, ಅದು ತಾವೇ ಹೊರತು ಬೇರೆ ಯಾರೂ ಅಲ್ಲ. ಆದುದರಿಂದ, ಈ ವರದಿಯನ್ನು ಬಿಜೆಪಿ ಕಡೆಗೆ ತಿರುಚುವ ಬದಲು, ನಿಮ್ಮ ಆಡಳಿತಾವಧಿಯಲ್ಲಿ ಕರ್ನಾಟಕದ ಶೇ.63ರಷ್ಟು ನಾಗರಿಕರು ಏಕೆ ಲಂಚ ನೀಡಬೇಕಾಯಿತು ಎಂಬುದನ್ನು ನೀವೇ ಮೊದಲು ವಿವರಿಸಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೆ ಇದೊಂದೇ ವರದಿ ನಿಮ್ಮ ಸರಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದಿಲ್ಲ. 2017ರಲ್ಲಿ ಮತ್ತೊಂದು ರಾಷ್ಟ್ರೀಯ ಸಮೀಕ್ಷೆಯು ಆಗ ರಾಜ್ಯದಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಸರಕಾರವನ್ನು ಭಾರತದ ಅತ್ಯಂತ ಭ್ರಷ್ಟ ರಾಜ್ಯ ಎಂದು ಘೋಷಿಸಿತ್ತು. ಕರ್ನಾಟಕ ಕಂಡ ಅತ್ಯಂತ ಭ್ರಷ್ಟಾತಿ ಭ್ರಷ್ಟ ಸರಕಾರಗಳನ್ನು ಮುನ್ನಡೆಸಿದ, ಮುನ್ನಡೆಸುತ್ತಿರುವ ತಾವು ಇನ್ನೊಬ್ಬರಿಗೆ ನೀತಿ ಪಾಠ ಹೇಳುವುದು ಹಾಸ್ಯಾಸ್ಪದ ಮತ್ತು ಉದ್ಧಟತನ ಎಂದು ಅಶೋಕ್ ಟೀಕಿಸಿದ್ದಾರೆ.

ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಮೂರ್ಖತನವನ್ನು ದೇಶವು ಕ್ಷಮಿಸಬಹುದು, ಆದರೆ ಕರ್ನಾಟಕದ ಜನತೆ ರಾಜ್ಯದ ಇತಿಹಾಸದಲ್ಲೆ ಅತ್ಯಂತ ಭ್ರಷ್ಟ ಸರಕಾರಗಳನ್ನು ಮುನ್ನಡೆಸಿದ ನಿಮ್ಮನ್ನ, ನಿಮ್ಮ ಕಾಂಗ್ರೆಸ್ ಪಕ್ಷದ ನಿರ್ಲಜ್ಜತೆಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಇತರರತ್ತ ಬೆರಳು ತೋರಿಸುವ ಮೊದಲು ನಿಮ್ಮದೆ ಘನ ಸರಕಾರ ವರ್ಷದಿಂದ ವರ್ಷಕ್ಕೆ ಕರ್ನಾಟಕವನ್ನು ಭ್ರಷ್ಟಾಚಾರದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಇರಿಸಲು ಕಾರಣವೇನು ಎಂಬುದಕ್ಕೆ ಮೊದಲು ಉತ್ತರಿಸಿ ಎಂದು ಅಶೋಕ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X