ಕಾಂಗ್ರೆಸ್ ಕಾರ್ಯಕಾರಿಣಿ ಸಭೆ | ನಾಳೆ ಹೊಸದಿಲ್ಲಿಗೆ ಮುಖ್ಯಮಂತ್ರಿ ಪ್ರಯಾಣ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಸಂಜೆ 7 ಗಂಟೆಗೆ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿ, ಶನಿವಾರ ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಆಯೋಜಿಸಲಾಗಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆನಂತರ, ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಕುರಿತು ಹಾಗೂ ಕೇಂದ್ರದಿಂದ ಬರಬೇಕಿರುವ ಅನುದಾನದ ಕುರಿತು ಚರ್ಚೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ಹೊಸದಿಲ್ಲಿಯ ಇಂದಿರಾಗಾಂಧಿ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
Next Story





